ವಿದ್ಯಾರ್ಥಿಗಳಿಗೆ ವಿಜ್ಞಾನದ ಆವಿಷ್ಕಾರಗಳ ಫಲ ಬಳಕೆಯಾಗಲಿ: ಮಂಜೇಗೌಡ

| Published : Mar 10 2025, 12:21 AM IST

ವಿದ್ಯಾರ್ಥಿಗಳಿಗೆ ವಿಜ್ಞಾನದ ಆವಿಷ್ಕಾರಗಳ ಫಲ ಬಳಕೆಯಾಗಲಿ: ಮಂಜೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಯುವಜನರು ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲು ವಿಜ್ಞಾನದ ವಿವಿಧ ಮಾದರಿಗಳನ್ನು ತಯಾರಿಸಿ ವಸ್ತು ಪ್ರದರ್ಶನದಲ್ಲಿರಿಸಿ ಅವುಗಳಿಂದ ಆಗುವ ಲಾಭ ಮತ್ತು ಸಂಶೋಧನೆಗಳು, ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ವರದಾನವಾಗಿವೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ವಿಜ್ಞಾನ ನಮ್ಮ ವ್ಯಕ್ತಿತ್ವ ಹಾಗೂ ವಿಕಾಸದ ಪ್ರತೀಕ. ವಿದ್ಯಾರ್ಥಿಗಳು ವಿಜ್ಞಾನದ ಆವಿಷ್ಕಾರಗಳ ಫಲವನ್ನು ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು ಎಂದು ಜಿಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ವಿ.ಮಂಜೇಗೌಡ ಹೇಳಿದರು.

ಪಟ್ಟಣದ ಬಿಜಿಎಸ್ ಶಾಲೆಯಲ್ಲಿ ವಿಜ್ಞಾನ ದಿನದ ಅಂಗವಾಗಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಸರ್ ಸಿ.ವಿ.ರಾಮನ್ ಅವರ ಹುಟ್ಟುಹಬ್ಬದ ದಿನವನ್ನು ದೇಶದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಯುವಜನರು ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲು ವಿಜ್ಞಾನದ ವಿವಿಧ ಮಾದರಿಗಳನ್ನು ತಯಾರಿಸಿ ವಸ್ತು ಪ್ರದರ್ಶನದಲ್ಲಿರಿಸಿ ಅವುಗಳಿಂದ ಆಗುವ ಲಾಭ ಮತ್ತು ಸಂಶೋಧನೆಗಳು, ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ವರದಾನವಾಗಿವೆ ಎಂದರು.

ರಾಜ್ಯ ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಯುಗಯೋಗಿ, ಜಗದ್ಗುರು ಡಾ.ಬಾಲಗಂಗಾಧರಾನಾಥ ಸ್ವಾಮೀಜಿಗಳ ಪುತ್ಥಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನದ ಹೇಮಗಿರಿ ಶಾಖಾ ಮಠದ ಗೌರವ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣಗೌಡ, ಪತ್ರಕರ್ತರಾದ ಎಂ.ಕೆ.ಹರಿಚರಣತಿಲಕ್, ಕೆ.ಆರ್.ನೀಲಕಂಠ, ಲೋಕೇಶ್, ಶ್ರೀನಿವಾಸ್ ಸಜ್ಜನ್, ವಿಶ್ರಾಂತ ಎಂಜಿನಿಯರ್ ಜವರೇಗೌಡ, ಪ್ರಾಂಶುಪಾಲ ಪ್ರಸಾದೇಗೌಡ, ಆನಂದ್, ಪ್ರಥಮ ದರ್ಜೆ ಸಹಾಯಕ ರಾಮಚಂದ್ರ ಮತ್ತಿತರರು ಭಾಗವಹಿಸಿದ್ದರು.