ಸಾರಾಂಶ
ವಿದ್ಯಾರ್ಥಿಗಳು ಸಾಧನೆ ಮಾಡಬೇಕಾದರೆ ಕಠಿಣ ಪರಿಶ್ರಮದೊಂದಿಗೆ ಸುಸಂಸ್ಕೃತರಾಗಿ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಆಶೀರ್ವಚನ ನೀಡಿದರು.
ಕನ್ನಡಪ್ರಭ ವಾರ್ತೆ ಹನೂರು
ವಿದ್ಯಾರ್ಥಿಗಳು ಸಾಧನೆ ಮಾಡಬೇಕಾದರೆ ಕಠಿಣ ಪರಿಶ್ರಮದೊಂದಿಗೆ ಸುಸಂಸ್ಕೃತರಾಗಿ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಆಶೀರ್ವಚನ ನೀಡಿದರು.ಹನೂರು ಪಟ್ಟಣದ ಜಿ ವಿ ಗೌಡ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಕ್ರೀಡೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಒಳ್ಳೆಯ ಶಿಕ್ಷಣದ ವ್ಯವಸ್ಥೆ ಈ ಕಾಲೇಜಿನಲ್ಲಿದ್ದು ಭೋದಕರ ಮಾರ್ಗದರ್ಶನಲ್ಲಿ ವಿದ್ಯಾರ್ಥಿಗಳು ಸದಾ ಕಠಿಣ ಅಭ್ಯಾಸ ಮಾಡಬೇಕು. ಶಿಕ್ಷಕರನ್ನು ಗೌರವಿಸಬೇಕು ಅಂದಾಗ ಮಾತ್ರ ಸಾಧನೆ ಸುಲಭವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು, ತಾಳ್ಮೆ, ಸಮಯಪ್ರಜ್ಞೆ ಬಹಳ ಅವಶ್ಯಕ. ಅಲ್ಲದೆ ನಿಮ್ಮ ವಿದ್ಯಾರ್ಥಿ ದಿಸೆಯಿಂದಲೆ ಹಿರಿಯ ಜೀವಗಳಿಗೆ ಗೌರವ ಕೊಡುವ ಮೂಲಕ ಉತ್ತಮ ಸಂಸ್ಕಾರವನ್ನು ಬೆಳಸಿಕೊಂಡರೆ ಸಮಾಜದಲ್ಲಿ ಉನ್ನತ ವ್ಯಕ್ತಿಗಳಾಗಿ ಮುಂದೆ ಬೆಳೆಯಲು ಸಾದ್ಯವಾಗುತ್ತದೆ ಎಂದು ಹೇಳಿದರು.ತರಬೇತುದಾರ ಡಾ.ಶಿವಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದಾಗಿ ಹಾಳಾಗುತ್ತಿದ್ದಾರೆ. ಓದುವ ಸಮಯದಲ್ಲಿ ಮೊಬೈಲ್‌ನಿಂದ ದೂರವಿರಿ. ತಂತ್ರಜ್ಞಾನವನ್ನು ನಿಮ್ಮ ಜ್ಞಾನಕ್ಕೆ ಅನುಕೂಲವಾಗುವಂತೆ ಉಪಯೋಗಿಸಿಕೊಳ್ಳಿ. ಇಲ್ಲದಿದ್ದರೆ ಮೊಬೈಲ್ ನಿಮ್ಮ ಬದುಕನ್ನು ನಾಶ ಮಾಡುತ್ತದೆ. ಮಕ್ಕಳು ಓದಿನ ಕಡೆ ಗಮನ ಹರಿಸಿ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಪ್ರಾಶುಂಪಾಲ ಶಾಂತಮೂರ್ತಿ, ಉಪನ್ಯಾಸಕರಾದ ರವಿಶಂಕರ್ ಪವನ್ ಕುಮಾರ್, ಗುಂಡುರಾವ್ ಸೇರಿದಂತೆ ಹಲವರು ಹಾಜರಿದ್ದರು.