ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲಿ: ಪ್ರವೀಣ್ ಪೂಜಾರಿ

| Published : Oct 27 2024, 02:03 AM IST

ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲಿ: ಪ್ರವೀಣ್ ಪೂಜಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿ , ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ಸಂಯಮ ಮೈಗೂಡಿಸಿಕೊಳ್ಳಬೇಕು. ಜೊತೆಗೆ ಉತ್ತಮ ನಾಯಕತ್ವ ಗುಣಗಳನ್ನೂ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಪೂಜಾರಿ ಹೇಳಿದರು.

- ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ ಕಾರ್ಯಕ್ರಮ- - - ಕನ್ನಡಪ್ರಭ ವಾರ್ತೆ ಶೃಂಗೇರಿ

ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ಸಂಯಮ ಮೈಗೂಡಿಸಿಕೊಳ್ಳಬೇಕು. ಜೊತೆಗೆ ಉತ್ತಮ ನಾಯಕತ್ವ ಗುಣಗಳನ್ನೂ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಪೂಜಾರಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಸಂಸತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ದೇಶದ ಭವಿಷ್ಯದ ರೂವಾರಿಗಳು. ವಿದ್ಯಾರ್ಥಿ ಜೀವನ ಅತ್ಯಮೂಲ್ಯ. ಕಲಿಕೆ ದಿನಗಳಲ್ಲಿ ವಿದ್ಯಾರ್ಥಿಗಳು ದಾರಿ ತಪ್ಪದೇ, ಸರಿದಾರಿಯಲ್ಲಿ ನಡೆದು ಶಿಕ್ಷಣ ಪಡೆಯಬೇಕು ಎಂದರು.

ಉತ್ತಮ ಸಂಸ್ಕಾರ, ಸಂಸ್ಕೃತಿಯಿಲ್ಲದ ಮನುಷ್ಯನಿಗೆ ಸಮಾಜದಲ್ಲಿ ಬೆಲೆ ಸಿಗುವುದಿಲ್ಲ. ದೇಶ ಅಭಿವೃದ್ಧಿಗೆ ಶ್ರಮಿಸಿದ ರಾಷ್ಟ್ರೀಯ ನಾಯಕರ ತತ್ವಾದರ್ಶ ಗಳನ್ನು ಅಳವಡಿಸಿಕೊಳ್ಳಬೇಕು. ಒಳ್ಳೆ ವಿಚಾರಗಳು, ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಉತ್ತಮ ವಿಚಾರೆಧಾರೆ, ಚಿಂತನೆಗಳು ಒಳ್ಳೆಯ ವ್ಯಕ್ತಿತ್ವ ರೂಪಿಸುತ್ತವೆ. ಮಾನವೀಯ, ನೈತಿಕ ಮೌಲ್ಯಗಳ ಅಧಃಪತನ ಆಗುತ್ತಿರುವ ಇತ್ತೀಚಿನ ದಿನಗಳಲ್ಲಿ ಮಾನವೀಯ, ನೈತಿಕ ಮೌಲ್ಯ ಗಳನ್ನು ಎತ್ತಿಹಿಡಿಯಬೇಕಿದೆ. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಸಮಾಜಮುಖಿ ಚಿಂತನೆ ಮೈಗೂಡಿಸಿ ಕೊಳ್ಳಬೇಕು ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದಸ್ವಾಮಿ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಶಾಲಾ ದಿನಗಳಲ್ಲಿ ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳಬೇಕು. ಭವಿಷ್ಯದಲ್ಲಿ ದೇಶದ ರೂವಾರಿಗಳಾಗಲು ಪ್ರಯತ್ನಿಸಬೇಕು. ನಿರಂತರ ಅಧ್ಯಯನದಿಂದ ಉತ್ತಮ ಸಾಧನೆ ಮಾಡಬೇಕು ಎಂದರು.

ಉಪ ಪ್ರಾಂಶುಪಾಲ ಶಶಿಧರ್ ಮಂತ್ರಿಗಳಿಗೆ ಪ್ರಮಾಣವಚನ ಬೋಧಿಸಿದರು. , ಮುಖ್ಯ ಅತಿಥಿಗಳಾಗಿ ರಾಜೇಶ್ ಶೆಟ್ಟಿ, ಶಾಲಾ ಸಂಸತ್ ಪದಾಧಿಕಾರಿ ಪ್ರಣೀತ್, ಶಾಲಾಭಿವೃದ್ಧಿ ಸಮಿತಿ ರವಿ, ಶಿಕ್ಷಕಿ ಸವಿತಾ, ಕೃಷ್ಣಮೂರ್ತಿ, ತೇಜಸ್ವಿನಿ , ಅಂಬಿಕಾ ಮತ್ತಿತರರು ಉಪಸ್ಥಿತರಿದ್ದರು.

- - - -26ಶ್ರೀಚಿತ್ರ2:

ಶೃಂಗೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಶಾಲಾ ಸಂಸತ್ತನ್ನು ವಿದ್ಯಾರಣ್ಯಪುರ ಗ್ರಾಪಂ ಅಧ್ಯಕ್ಷ ಪ್ರವೀಣ್ ಪೂಜಾರಿ ಉದ್ಘಾಟಿಸಿದರು.