ಸಾರಾಂಶ
ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು. ಸಹಪಠ್ಯ ಚಟುವಟಿಕೆಗಳು ವಿದ್ಯಾರ್ಥಿಗಳ ದೈಹಿಕ ಮತ್ತು ಸೇವಾ ಮನೋಭಾವನೆ, ಮಾನವೀಯತೆ ಹಾಗೂ ನೈತಿಕತೆಯನ್ನು ಬೆಳೆಸುತ್ತವೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
ಶಿವಮೊಗ್ಗ: ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು. ಸಹಪಠ್ಯ ಚಟುವಟಿಕೆಗಳು ವಿದ್ಯಾರ್ಥಿಗಳ ದೈಹಿಕ ಮತ್ತು ಸೇವಾ ಮನೋಭಾವನೆ, ಮಾನವೀಯತೆ ಹಾಗೂ ನೈತಿಕತೆಯನ್ನು ಬೆಳೆಸುತ್ತವೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 2025-26ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ರಾಷ್ಟ್ರದ ಸಂಸ್ಕೃತಿಯನ್ನು ಉಳಿಸಿಕೊಳ್ಳುವುದರ ಮೂಲಕ ಒಂದೇ ಮಾತರಂ ಎಂಬ ಗೀತೆ ಸಾರವನ್ನು ಅರ್ಥ ಮಾಡಿಕೊಂಡು ನಾವೆಲ್ಲರೂ ಒಗ್ಗಟ್ಟಾಗಿ ಮುಂದೆ ಸಾಗಬೇಕು ಎಂದು ಕರೆ ನೀಡಿದರು.ಸರ್ಕಾರಿ ಮಹಿಳಾ ಕಾಲೇಜು ನಗರದ ಪ್ರತಿಷ್ಠಿತ ಕಾಲೇಜ್ ಆಗಬೇಕು. ಒಂದು ವರ್ಷದೊಳಗೆ ಈ ಕಾಲೇಜಿಗೆ ಕಟ್ಟಡ ಶಂಕುಸ್ಥಾಪನೆ ಮಾಡುತ್ತೇನೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.
ಲೇಖಕ ಜಿ.ಕೆ.ಸತೀಶ್ನಾ ಮಾತನಾಡಿ, ನಾವೆಲ್ಲರೂ ದೇವರ ಕೃಪೆಯಿಂದ ಬಂದವರು. ನಾವು ಜೀವನದಲ್ಲಿ ವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಸಾಂಸ್ಕೃತಿಕ ಸಂಚಾಲಕ ಡಾ.ಜಗದೀಶ್ ಬಿದರಕೊಪ್ಪ, ಸಹಪಠ್ಯ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಭರವಸೆಯನ್ನು ಮೂಡಿಸುತ್ತೇವೆ. ಜೀವನದಲ್ಲಿ ಶಕ್ತಿ ತುಂಬುತ್ತವೆ ಎಂದು ಹೇಳಿದರು.
ಪ್ರಾಂಶುಪಾಲರಾದ ಡಾ.ರಂಗನಾಥ್ ಕರಾಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಬಾಲಿಕಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮಹೇಶ್ವರಪ್ಪ.ಟಿ.ಎಚ್, ಡಾ.ವರದರಾಜ್, ಡಾ.ನವೀನ್, ಡಾ.ಬಸವಣ್ಣಪ್ಪ , ಮಹೇಂದ್ರ, ಡಾ.ಉಮಾಪತಿ, ಡಾ.ಎ.ಕೆ.ಶಶಿಧರ್ ಮುಂತಾದವರು ಹಾಜರಿದ್ದರು.