ವಿದ್ಯಾರ್ಥಿಗಳು ಪ್ರಶ್ನೆ ಕೇಳುವ ಗುಣ ಬೆಳೆಸಿಕೊಳ್ಳಲಿ: ಡಿ.ಡಿ. ಕಾಮತ

| Published : Sep 23 2024, 01:16 AM IST

ವಿದ್ಯಾರ್ಥಿಗಳು ಪ್ರಶ್ನೆ ಕೇಳುವ ಗುಣ ಬೆಳೆಸಿಕೊಳ್ಳಲಿ: ಡಿ.ಡಿ. ಕಾಮತ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಯಾಗಾರದ ಸದುಪಯೋಗದಿಂದ ಮುಂದಿನ ದಿನದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನ ಸಿಗುವಂತಾಗಲಿ. ವಿದ್ಯಾರ್ಥಿಗಳು ಪ್ರಶ್ನೆ ಕೇಳಿ ವಿಷಯ ಅರ್ಥೈಸಿಕೊಳ್ಳುವ ಹವ್ಯಾಸ ಬೆಳೆಸಿಕೊಳ್ಳಲಿ.

ಕುಮಟಾ: ಇಲ್ಲಿನ ವಿಧಾತ್ರಿ ಅಕಾಡೆಮಿ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜು, ಪಿಯು ಶಿಕ್ಷಣ ಇಲಾಖೆ, ಜಿಲ್ಲಾ ಪಿಯು ಕಾಲೇಜುಗಳ ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ಆಶ್ರಯದಲ್ಲಿ ರಸಾಯನಶಾಸ್ತ್ರ ಪುನಶ್ಚೇತನ ಕಾರ್ಯಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸರಸ್ವತಿ ಪಿಯು ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಕೊಂಕಣ ಎಜುಕೇಶನ್ ಟ್ರಸ್ಟ್ ವಿಶ್ವಸ್ಥ ಡಿ.ಡಿ. ಕಾಮತ ಕಾರ್ಯಕ್ರಮ ಉದ್ಘಾಟಿಸಿ, ಕಾರ್ಯಾಗಾರದ ಸದುಪಯೋಗದಿಂದ ಮುಂದಿನ ದಿನದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನ ಸಿಗುವಂತಾಗಲಿ. ವಿದ್ಯಾರ್ಥಿಗಳು ಪ್ರಶ್ನೆ ಕೇಳಿ ವಿಷಯ ಅರ್ಥೈಸಿಕೊಳ್ಳುವ ಹವ್ಯಾಸ ಬೆಳೆಸಿಕೊಳ್ಳಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರ ಸಂಘದ ಅಧ್ಯಕ್ಷ ಸತೀಶ ನಾಯ್ಕ ಮಾತನಾಡಿ, ರಸಾಯನಶಾಸ್ತ್ರ ವೇದಿಕೆ, ಜಿಲ್ಲೆಯಲ್ಲಿ ಅತ್ಯಂತ ಕ್ರಿಯಾಶೀಲ ಉಪನ್ಯಾಸಕರ ವೇದಿಕೆಯಾಗಿದೆ. ಪ್ರಯೋಗಾಲಯ ಕೈಪಿಡಿ, ಪ್ರಶ್ನೆ ಕೋಶ, ತಯಾರಿ, ಪ್ರತಿಭಾ ಪುರಸ್ಕಾರ ಇವೆಲ್ಲವನ್ನೂ ವೇದಿಕೆ ಕಳೆದ ೨೦ ವರ್ಷಗಳಿಂದ ಮಾಡಿಕೊಂಡು ಬಂದಿದೆ ಎಂದರು. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷ ಮಳಗಿ ಸರ್ಕಾರಿ ಪಿಯು ಕಾಲೇಜು ಪ್ರಾಚಾರ್ಯ ಗಣೇಶ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ೨೦೨೩- ೨೪ನೇ ಸಾಲಿನ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ವಿಷಯದಲ್ಲಿ ಪೂರ್ಣಾಂಕ ಪಡೆದ ಜಿಲ್ಲೆಯ ಒಟ್ಟು ೨೭ ವಿದ್ಯಾರ್ಥಿಗಳಿಗೆ ರಸಾಯನಶಾಸ್ತ್ರ ವೇದಿಕೆ ವತಿಯಿಂದ ನಗದು ಸಹಿತ ಪ್ರಶಸ್ತಿ ಪತ್ರ ವಿತರಿಸಿ ಪುರಸ್ಕರಿಸಲಾಯಿತು. ವೇದಿಕೆಯ ಖಜಾಂಚಿ ಸತೀಶ ಬೀರಕೋಡಿ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಟ್ಟರು. ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಚಾರ್ಯ ಕಿರಣ ಭಟ್ಟ ಅವರನ್ನು ಗೌರವಿಸಲಾಯಿತು. ರಸಾಯನಶಾಸ್ತ್ರ ವೇದಿಕೆಯ ಉಪಾಧ್ಯಕ್ಷರಾದ ಜೆ.ಪಿ. ನಾಯ್ಕ, ಶೋಭಾ ದೀಕ್ಷಿತ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಆರ್.ಟಿ. ನಾಯ್ಕ ವಂದಿಸಿದರು. ಉಪನ್ಯಾಸಕ ಪ್ರಸನ್ನ ಹೆಗಡೆ ಕಾರ್ಯಕ್ರಮ ಸಂಯೋಜಿಸಿದ್ದರು. ಉಪನ್ಯಾಸಕಿ ದೀಕ್ಷಿತಾ ಕುಮಟಾಕರ, ಉಪನ್ಯಾಸಕಿ ನಿಶಾ ಬ್ರಿಟೋ ನಿರೂಪಿಸಿದರು.