ವಿದ್ಯಾರ್ಥಿಗಳ ಜೀವನದಲ್ಲಿ ಗುರಿ ಸ್ಪಷ್ಟವಾಗಿರಲಿ: ಗರಿಮಾ ಪನ್ವಾರ

| Published : Feb 28 2024, 02:34 AM IST

ವಿದ್ಯಾರ್ಥಿಗಳ ಜೀವನದಲ್ಲಿ ಗುರಿ ಸ್ಪಷ್ಟವಾಗಿರಲಿ: ಗರಿಮಾ ಪನ್ವಾರ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಸ್ಪಷ್ಟವಾದ ಗುರಿ ಹೊಂದಿರಬೇಕು. ಸೂಕ್ತ ಮಾರ್ಗದರ್ಶನ, ಪ್ರಾಮಾಣಿಕ ಯೋಜನೆಯೊಂದಿಗೆ ಮುನ್ನಡೆದರೆ ಜೀವನದಲ್ಲಿ ಸಾಧನೆ ಸಾಧ್ಯ..

ಶಹಾಪುರ: ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಸ್ಪಷ್ಟವಾದ ಗುರಿ ಹೊಂದಿರಬೇಕು. ಸೂಕ್ತ ಮಾರ್ಗದರ್ಶನ, ಪ್ರಾಮಾಣಿಕ ಯೋಜನೆಯೊಂದಿಗೆ ಮುನ್ನಡೆದರೆ ಜೀವನದಲ್ಲಿ ಸಾಧನೆ ಸಾಧ್ಯವೆಂದು ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ ಹೇಳಿದರು.

ತಾಲೂಕಿನ ದೋರನಹಳ್ಳಿ ಗ್ರಾಮದ ಡಿಡಿಯು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭ ಹಾಗೂ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸತತ ಪ್ರಯತ್ನ, ಶಿಸ್ತುಬದ್ಧವಾದ ಯೋಜನಾ ಕ್ರಮ ರೂಢಿಸಿಕೊಂಡರೆ ಉನ್ನತ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿ ಜೀವನದಲ್ಲೇ ಭವಿಷ್ಯದ ಬಗ್ಗೆ ಪರಿಕಲ್ಪನೆ ಹೊಂದಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕೆಂಬ ಛಲ ಹಾಗೂ ಗುರಿ ಹೊಂದಬೇಕು. ಆತ್ಮವಿಶ್ವಾಸ, ಪ್ರಾಮಾಣಿಕವಾದ ಪ್ರಯತ್ನದಿಂದ ಉನ್ನತ ಸಾಧನೆ ಮಾಡಲು ಸಾಧ್ಯ ಎಂದರು.

ವೈದ್ಯಾಧಿಕಾರಿ ರಾಜೇಶ್ವರಿ ಎಸ್. ಗುತ್ತೆದಾರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಗುರಿ ತಲುಪಲು ಪ್ರಯತ್ನ ಬಹಳ ಮುಖ್ಯವಾಗಿದೆ. ಅದರ ಜೊತೆಗೆ ಆರೋಗ್ಯ, ಉತ್ತಮ ಆಹಾರ ಅತಿ ಮುಖ್ಯವಾಗಿದೆ ಎಂದರು.

ಕನ್ಯಾಕೋಳೂರು ಸರಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕ ಎಂ. ಎಸ್. ಪಾಟೀಲ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಹಂತ ಅತ್ಯಂತ ಪ್ರಮುಖವಾದದ್ದು, ಸರಿಯಾದ ಅಧ್ಯಯನ ಮಾಡುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡರೆ ಜೀವನ ಅರ್ಥಪೂರ್ಣ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಯಾದಗಿರಿ, ಯಾದಗಿರಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರಿಗೆ ಮತದಾನದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ವಿ.ಎಂ.ಎಂ. ಟ್ರಸ್ಟ್ ಅಧ್ಯಕ್ಷೆ ವಿದ್ಯಾ ಬಿ. ಮೇಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ದೋರನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಚಂದ್ರಾವತಿ ದೊರೆ, ಚಟ್ನಳ್ಳಿ ಪ್ರೌಢ ಶಾಲೆಯ ಮುಖ್ಯಗುರು ಚಂದಪ್ಪ ನಾಯ್ಕೋಡಿ, ಗುಂಡುಗುರ್ತಿ ಶಾಲೆಯ ಮುಖ್ಯಗುರು ತಿಪ್ಪಣ್ಣ ನಾಗೂರು, ದೋರನಹಳ್ಳಿಯ ಸರಕಾರಿ ಪ್ರೌಢ ಶಾಲೆಯ ಕನ್ನಡ ಶಿಕ್ಷಕ ಶಿವಪ್ಪ, ಕಾಲೇಜಿನ ಪ್ರಾಂಶುಪಾಲ ಮಹೇಶ ಪತ್ತಾರ, ಡಿಡಿಯು ಶಾಲೆಯ ಮುಖ್ಯಗುರು ಜ್ಯುವೇಲ್ ಇತರರಿದ್ದರು. ವಿದ್ಯಾರ್ಥಿನಿಯರಾದ ಮಲ್ಲಮ್ಮ ಚಟ್ನಳ್ಳಿ ಮತ್ತು ದೇವಮ್ಮ ಕಾಡಂಗೇರಾ ನಿರೂಪಿಸಿದರು. ಅಕ್ಕಮ್ಮ ಸ್ವಾಗತಿಸಿದರು. ಜಟ್ಟೆಪ್ಪ ವಂದಿಸಿದರು. ಪದ್ಮಾ ಅವರು ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು.