ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲಿ

| Published : Mar 14 2025, 12:34 AM IST

ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲಿ
Share this Article
  • FB
  • TW
  • Linkdin
  • Email

ಸಾರಾಂಶ

ಪಠ್ಯಕ್ರಮದೊಂದಿಗೆ ಪ್ರಚಲಿತ ವಿಷಯಗಳ ಜ್ಞಾನಾರ್ಜನೆ, ಉತ್ತಮ ಸಂವಹನ ಕೌಶಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಯಶಸ್ಸು ಸಾಧಿಸಬಹುದು

ನವಲಗುಂದ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಇಂಗ್ಲಿಷ್‌ ಭಾಷೆ, ಸಾಮಾನ್ಯ ಜ್ಞಾನ, ಪ್ರಚಲಿತ ವಿದ್ಯಮಾನಗಳ ಜ್ಞಾನ ಇವು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹುಬ್ಬಳ್ಳಿಯ ಯುವ ಜಯ ಫೌಂಡೇಶನ್ ಸಂಪನ್ಮೂಲ ವ್ಯಕ್ತಿ ಗಿರೀಶ್ ನಾಗನೂರು ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಪ್ರೇರಣಾ ಕೋಶದ ಅಡಿಯಲ್ಲಿ ಪದವಿ ನಂತರ ಏನು? ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಬುಧವಾರ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಂ.ಬಿ. ಬಾಗಡಿ ಮಾತನಾಡಿ, ಪಠ್ಯಕ್ರಮದೊಂದಿಗೆ ಪ್ರಚಲಿತ ವಿಷಯಗಳ ಜ್ಞಾನಾರ್ಜನೆ, ಉತ್ತಮ ಸಂವಹನ ಕೌಶಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಯಶಸ್ಸು ಸಾಧಿಸಬಹುದು ಎಂದರು.

ಪ್ರೇರಣಾ ಕೋಶದ ಸಂಚಾಲಕ ಶ್ರೀಧರ ಲೋನಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ಲೇಸ್‌ಮೆಂಟ್‌ ಸೆಲ್ ಸಂಚಾಲಕ ಪ್ರಸನ್ನ ಪಂಢರಿ, ಎನ್.ಎಸ್. ಎಸ್. ಸಂಯೋಜನಾಧಿಕಾರಿ ಡಾ. ಐ.ಬಿ. ಸಾತಿಹಾಳ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ನಾಗರತ್ನಾ ಕುರುಡೇಕರ್ ಇದ್ದರು. ಸುಷ್ಮಾ ಹೊಳೆನ್ನವರ ಕಾರ್ಯಕ್ರಮ ನಿರೂಪಿಸಿದರು. ವಿನೋದಗೌಡ ಸಲ್ಮನಿ ವಂದಿಸಿದರು.