ಶಿಕ್ಷಕರು ಆಂಗ್ಲ ಬೋಧನೆ ಕೌಶಲ್ಯಗಳ ಹೆಚ್ಚಿಸಿಕೊಳ್ಳಲಿ

| Published : Jul 10 2024, 12:35 AM IST

ಸಾರಾಂಶ

ಕಳೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಆಂಗ್ಲ ಭಾಷಾ ವಿಷಯದಲ್ಲಿ ತಾಲೂಕಿಗೆ ಕಡಿಮೆ ಪ್ರಮಾಣದ ಫಲಿತಾಂಶ ಬಂದಿದೆ. ಆಂಗ್ಲ ಭಾಷಾ ಶಿಕ್ಷಕರು ತಮ್ಮ ಶಾಲೆಗಳಲ್ಲಿ ಪಠ್ಯ ವಿಷಯವನ್ನು ಬೋಧನೆ ಮಾಡುವಾಗ ವಿದ್ಯಾರ್ಥಿಗಳಿಗೆ ಆರ್ಥವಾಗುವಂತೆ ಮನಮುಟ್ಟುವಂತೆ ಪಾಠ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸಿಕೊಂಡರೆ, ಫಲಿತಾಂಶದಲ್ಲಿ ಪ್ರಗತಿ ಕಾಣಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.

- ಚನ್ನಗಿರಿ ತಾಲೂಕು ಪ್ರೌಢಶಾಲಾ ಶಿಕ್ಷಕರ ಕಾರ್ಯಾಗಾರದಲ್ಲಿ ಬಿಇಒ ಜಯಪ್ಪ - - - ಕನ್ನಡಪ್ರಭ ವಾರ್ತೆ, ಚನ್ನಗಿರಿ

ಕಳೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಆಂಗ್ಲ ಭಾಷಾ ವಿಷಯದಲ್ಲಿ ತಾಲೂಕಿಗೆ ಕಡಿಮೆ ಪ್ರಮಾಣದ ಫಲಿತಾಂಶ ಬಂದಿದೆ. ಆಂಗ್ಲ ಭಾಷಾ ಶಿಕ್ಷಕರು ತಮ್ಮ ಶಾಲೆಗಳಲ್ಲಿ ಪಠ್ಯ ವಿಷಯವನ್ನು ಬೋಧನೆ ಮಾಡುವಾಗ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ಮನಮುಟ್ಟುವಂತೆ ಪಾಠ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸಿಕೊಂಡರೆ, ಫಲಿತಾಂಶದಲ್ಲಿ ಪ್ರಗತಿ ಕಾಣಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ಹೇಳಿದರು.

ಮಂಗಳವಾರ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ಆವರಣದಲ್ಲಿ ತಾಲೂಕಿನ ಪ್ರೌಢಶಾಲೆಗಳ ಇಂಗ್ಲಿಷ್ ಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಇಂಗ್ಲಿಷ್ ಭಾಷೆ ಕಬ್ಬಣದ ಕಡಲೆಯಲ್ಲ. ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷಾ ಕಲಿಕೆಯ ಗೂಡಾರ್ಥಗಳನ್ನು ಸೂಕ್ಷ್ಮವಾಗಿ ತಿಳಿಸಬೇಕು. ಆ ಮೂಲಕ ಬೋಧನೆ ಮಾಡಿದಲ್ಲಿ ಅರ್ಥವಾಗುವ ಜೊತೆಗೆ ಮಕ್ಕಳು ಧೈರ್ಯದಿಂದ ಪರೀಕ್ಷೆಗಳನ್ನು ಎದುರಿಸಿ ಯಶಸ್ಸು ಪಡೆಯಬಲ್ಲದು ಎಂದು ತಿಳಿಸಿದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಡಾ. ಎಸ್.ಶಂಕರಪ್ಪ ಮಾತನಾಡಿ, ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಪಠ್ಯಭಾಗ ಮತ್ತು ವ್ಯಾಕರಣ ಹಾಗೂ ಗದ್ಯಭಾಗವನ್ನು ಕ್ರಮಬದ್ಧವಾಗಿ ಪಾಠ ಮಾಡಬೇಕು. ಪ್ರಶ್ನೆ ಪತ್ರಿಕೆಗಳಲ್ಲಿ ಬರಬಹುದಾದಂತಹ ಪತ್ರಲೇಖನಗಳ ಪ್ರಬಂಧಗಳನ್ನು ವಿದ್ಯಾರ್ಥಿಗಳಿಗೆ ಅರ್ಥೈಸಿದರೆ ಸಾಕು, ಅವರು ಸ್ವತಂತ್ರರಾಗಿ ಪರೀಕ್ಷೆ ಬರೆಯಲು ಸಹಾಯವಾಗಲಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ನಿಜಗುಣಶಿವಯೋಗಿ, ಷಣ್ಮುಖಪ್ಪ, ದಾವಣಗೆರೆ ಶಿಕ್ಷಣ ಇಲಾಖೆಯ ಇಂಗ್ಲಿಷ್ ಪರಿವೀಕ್ಷಕರಾದ ಸುಧಾ, ಶಿವಪ್ಪ, ಹನುಮಂತಪ್ಪ, ಮೌನೇಶಾಚಾರ್ ಭಾಗವಹಿಸಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.

- - - -9ಕೆಸಿಎನ್‌ಜಿ1:

ಚನ್ನಗಿರಿ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ಆವರಣದಲ್ಲಿ ತಾಲೂಕಿನ ಪ್ರೌಢಶಾಲೆಗಳ ಇಂಗ್ಲಿಷ್ ಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ಉದ್ಘಾಟಿಸಿದರು.