ಶಿಕ್ಷಕರು ಅಧ್ಯಯನದ ಮೂಲಕ ಜ್ಞಾನ ಭಂಡಾರ ಹೆಚ್ಚಿಸಿಕೊಳ್ಳಲಿ

| Published : Sep 06 2024, 01:05 AM IST

ಶಿಕ್ಷಕರು ಅಧ್ಯಯನದ ಮೂಲಕ ಜ್ಞಾನ ಭಂಡಾರ ಹೆಚ್ಚಿಸಿಕೊಳ್ಳಲಿ
Share this Article
  • FB
  • TW
  • Linkdin
  • Email

ಸಾರಾಂಶ

ಶಿಕ್ಷಕರು ಸತತ ಅಧ್ಯಯನ ಮಾಡುವ ಮೂಲಕ ತಮ್ಮ ಜ್ಞಾನ ಭಂಡಾರ ವೃದ್ಧಿಸಿಕೊಳ್ಳಬೇಕು

ಲಕ್ಷ್ಮೇಶ್ವರ: ಶಿಕ್ಷಕರು ಮೊದಲು ತಮ್ಮ ಜ್ಞಾನ ಭಂಡಾರ ಹೆಚ್ಚಿಸಿಕೊಳ್ಳುವ ಕಾರ್ಯ ಮಾಡಬೇಕು. ಬಹು ಸಂಖ್ಯಾತ ಶಿಕ್ಷಕರು ವ್ಯಾಕರಣದಲ್ಲಿ ಬಹಳ ಹಿಂದೆ ಉಳಿದಿದ್ದಾರೆ, ಅಲ್ಪಪ್ರಾಣ ಮತ್ತು ಮಹಾಪ್ರಾಣಗಳ ಜ್ಞಾನದ ಕೊರತೆ ಕಂಡು ಬರುತ್ತದೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮಿಗಳು ಹೇಳಿದರು.

ಗುರುವಾರ ಪಟ್ಟಣದ ವೀರಗಂಗಾಧರ ಸಮುದಾಯ ಭವನದಲ್ಲಿ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕಿನ ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ರಾಧಾಕೃಷ್ಣನ್ ಅವರ 136ನೇ ಜಯಂತಿಯ ಅಂಗವಾಗಿ ನಡೆದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾಡಿದರು.

ಶಿಕ್ಷಕರು ಸತತ ಅಧ್ಯಯನ ಮಾಡುವ ಮೂಲಕ ತಮ್ಮ ಜ್ಞಾನ ಭಂಡಾರ ವೃದ್ಧಿಸಿಕೊಳ್ಳಬೇಕು. ಶಿಕ್ಷಕರು ವ್ಯಾಕರಣದ ಅಧ್ಯಯನ ಮಾಡುವುದು ಅಗತ್ಯವಾಗಿದೆ. ಶಿಕ್ಷಕರು ತಮ್ಮ ಆತ್ಮಸಾಕ್ಷಿ ಅರಿತು ಶಿಕ್ಷಣ ನೀಡುವ ಕಾರ್ಯ ಮಾಡಬೇಕು. ಜಗತ್ತಿನ ನಿರ್ಮಾತೃಗಳಾಗಿರುವ ಶಿಕ್ಷಕರು ಉತ್ತಮ ಪ್ರಜೆ ರೂಪಿಸುವ ಕಾರ್ಯ ಮಾಡಬೇಕು, ಸರ್ಕಾರದ ಶಾಲೆಗಳಲ್ಲಿ ಎಲ್ಲ ರೀತಿಯ ಸೌಲಭ್ಯ ಸಿಗುತ್ತಿದ್ದು, ಆ ಗ್ರಾಮದಲ್ಲಿನ ವಿದ್ಯಾರ್ಥಿಗಳು ರಾಧಾಕೃಷ್ಣನ್ ಅವರಂತ ವ್ಯಕ್ತಿಗಳನ್ನು ಶಿಕ್ಷಕರು ನಿರ್ಮಾಣ ಮಾಡಬೇಕು. ಆದರ್ಶ ಸಮಾಜ ಹಾಗೂ ವ್ಯಕ್ತಿಗಳ ನಿರ್ಮಾಣ ಮಾಡುವ ಕಾರ್ಯ ಶಿಕ್ಷಕರಿಂದ ಆಗಲಿ ಎಂದು ಹೇಳಿದರು.

ಈ ವೇಳೆ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಶಿಕ್ಷಕರು ಉತ್ತಮ ಸಮಾಜ ನಿರ್ಮಾಣ ಮಾಡುವ ಕಾರ್ಯದಲ್ಲಿ ಮುಂದಾಗುವ ಮೂಲಕ ದೇಶದ ಭವಿಷ್ಯಕ್ಕೆ ತಮ್ಮ ಅಮೂಲ್ಯ ಕೊಡುಗೆ ನೀಡಬೇಕು. ವಿದ್ಯಾರ್ಥಿಗಳ ಭವಿಷ್ಯ ಹಾಗೂ ದೇಶ ಕಟ್ಟುವ ಕಾರ್ಯದಲ್ಲಿ ಶಿಕ್ಷಕರು ತೊಡಗಿಕೊಳ್ಳಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ನಿವೃತ್ತ ಉಪನ್ಯಾಸಕ ಆರ್.ಎಲ್. ಪೊಲೀಸ ಪಾಟೀಲ ಉಪನ್ಯಾಸ ನೀಡಿದರು. ಬಿಇಓ ಎಚ್. ನಾಣಕೀ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.ತಹಸೀಲ್ದಾರ್ ವಾಸುದೇವ ಸ್ವಾಮಿ ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಸಭೆಯಲ್ಲಿ ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರಗಣ್ಣವರ, ಇಓ ಕೃಷ್ಣಪ್ಪ ಧರ್ಮರ, ಶಿರಹಟ್ಟಿ ತಹಸೀಲ್ದಾರ್ ಅನಿಲ ಬಡಿಗೇರ, ಅಕ್ಷರದಾಸೋಹದ ಅಧಿಕಾರಿ ಎಸ್.ಎಸ್. ರಾಮನಗೌಡರ, ಶರಣಬಸವ ಪಾಟೀಲ, ಮಂಜುನಾಥ ಕೊಕ್ಕರಗುಂದಿ, ಪ್ರವೀಣ ಬಾಳಿಕಾಯಿ, ಮಹಾದೇವಪ್ಪ ಅಣ್ಣಿಗೇರಿ ಸೇರಿದಂತೆ ಅನೇಕರು ಇದ್ದರು. ಈ ವೇಳೆ ಶಿಕ್ಷಕ ವೃತ್ತಿಯಿಂದ ಸೇವಾ ನಿವೃತ್ತಿ ಹೊಂದಿದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎಚ್.ಪಾಟೀಲ ಸ್ವಾಗತಿಸಿದರು. ಶಿಕ್ಷಕ ಈಶ್ವರ ಮೆಡ್ಲೇರಿ, ಎಚ್.ಡಿ. ನಿಂಗರೆಡ್ಡಿ ನಿರೂಪಿಸಿದರು.