ಸಾರಾಂಶ
- ಚನ್ನಗಿರಿ ಪ್ರೌಢಶಾಲಾ ಶಿಕ್ಷಕರ ಕಾರ್ಯಾಗಾರ
- - -ಚನ್ನಗಿರಿ: ತಾಲೂಕಿನಲ್ಲಿರುವ ಪ್ರೌಢಶಾಲೆಗಳಲ್ಲಿ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳಲ್ಲಿನ ವಿಷಯಗಳನ್ನು ಆರ್ಥವಾಗುವಂತೆ ಬೋಧಿಸುತ್ತ ಉತ್ತಮ ಫಲಿತಾಂಶಗಳು ಬರುವಲ್ಲಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹೆಚ್ಚಿನ ಶ್ರಮ ಹಾಕಬೇಕು. ಶಿಕ್ಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸದಾ ಮುಂದಾಗಬೇಕು ಎಂದು ಶಿಕ್ಷಣ ಇಲಾಖೆ ನಿವೃತ್ತ ಸಹ ನಿರ್ದೇಶಕ ಪ್ರಸನ್ನ ಕುಮಾರ್ ಹೇಳಿದರು.
ಶನಿವಾರ ಪಟ್ಟಣದ ನವಚೇತನ ಶಾಲೆಯ ಸಭಾಂಗಣದಲ್ಲಿ ತಾಲೂಕಿನ ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಮತ್ತು ಸಹ ಶಿಕ್ಷಕರ ಸಮನ್ವಯ ಸಾಧಿಸುವ ಪ್ರೇರಣಾತ್ಮಕ ಒಂದು ದಿನದ ಕಾರ್ಯಾಗಾರ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಶಾಲೆಗಳಲ್ಲಿ ವಿದ್ಯಾರ್ಥಿಗಳ ಮನಸ್ಥಿತಿಗಳನ್ನು ಶಿಕ್ಷಕರು ಆರ್ಥ ಮಾಡಿಕೊಂಡು ಅವರಿಗೆ ಅರ್ಥವಾಗುವ ರೀತಿಯಲ್ಲಿ ಬೋಧನೆಗಳನ್ನು ಮಾಡಬೇಕು. ವಿದ್ಯಾರ್ಥಿಗಳನ್ನು ಪರೀಕ್ಷೆಗಳಿಗೆ ತಯಾರಿ ಮಾಡುತ್ತ ಹೆಚ್ಚು ಹೆಚ್ಚು ಫಲಿತಾಂಶಗಳು ಬರುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಮಾತನಾಡಿ, ಪ್ರಸ್ತುತ ವರ್ಷದಲ್ಲಿ 10ನೇ ತರಗತಿಯ ವಾರ್ಷಿಕ ಪರೀಕ್ಷೆ ಫಲಿತಾಂಶಗಳಲ್ಲಿ ಉತ್ತಮವಾದ ಫಲಿತಾಂಶಗಳು ಬರುವಂತೆ ಅನುಸರಿಸಬಹುದಾದ ಕ್ರಮಗಳ ಕುರಿತಂತೆ ಮಾಹಿತಿಗಳನ್ನು ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿದ್ಯಾರ್ಥಿಗಳು ಮೊಬೈಲ್ ಫೋನ್ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆ ಮೊದಲು ತಪ್ಪಿಸಬೇಕು. ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಅನುಸರಿಸಬೇಕು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಮನ್ವಯ ಸಾಧಿಸಿ ಹೆಚ್ಚು ಪ್ರಮಾಣದಲ್ಲಿ ಫಲಿತಾಂಶಗಳು ಬರುವಂತೆ ಶಿಕ್ಷಕರು ಅನುಸರಿಸಬೇಕಾದ 29 ವಿಷಯಗಳ ಬಗ್ಗೆ ಮಂಡಿಸಿದರು.ಕಾರ್ಯಾಗಾರದಲ್ಲಿ ಕ್ಷೇತ್ರ ಸಮನ್ವಯ ಅಧಿಕಾರಿ ಡಾ. ಎಸ್.ಶಂಕರಪ್ಪ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಉಮೇಶ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸ್ವಾಮಿ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜಯಪ್ರಕಾಶ್, ರಾಮಚಂದ್ರಪ್ಪ, ನೌಕರರ ಸಂಘದ ಸದಸ್ಯರಾದ ರಮೇಶ್, ಸುಧೀರ್, ಮೌನೇಶಾಚಾರ್, ನವಚೇತನ ಶಾಲೆಯ ಸಿಸ್ಟರ್ ಒಬಿಲಿಯಾ, ಕುಬೇರಪ್ಪ, ಬಸವರಾಜ್ ಉಪಸ್ಥಿತರಿದ್ದರು.
- - --25ಕೆಸಿಎನ್‌ಜಿ2.ಜೆಪಿಜಿ:
ಕಾರ್ಯಾಗಾರವನ್ನು ಶಿಕ್ಷಣ ಇಲಾಖೆ ನಿವೃತ್ತ ಸಹ ನಿರ್ದೇಶಕ ಪ್ರಸನ್ನ ಕುಮಾರ್ ಉದ್ಘಾಟಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))