ಬಾಲ ಕಾರ್ಮಿಕ ವಿರೋಧಿ ದಿನ ಆರ್ಥಪೂರ್ಣವಾಗಿರಲಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ

| Published : Jun 07 2025, 03:42 AM IST

ಬಾಲ ಕಾರ್ಮಿಕ ವಿರೋಧಿ ದಿನ ಆರ್ಥಪೂರ್ಣವಾಗಿರಲಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಾದ್ಯಂತ ಜೂ.13ರಿಂದ 30ರವರೆಗೆ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ಅಭಿಯಾನ ಕಾರ್ಯಕ್ರಮ ಆಯೋಜಿಸುವಂತೆ ನಿರ್ದೇಶನ ನೀಡಿದರು.

ಕಾರವಾರ: ಜೂ.12ರಂದು ನಡೆಯುವ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಮತ್ತು ಪರಿಣಾಮಕಾರಿಯಾಗಿ ಆಚರಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿವಿಧ ಇಲಾಖೆಗಳು, ಸರ್ಕಾರೇತರ ಸಂಸ್ಥೆಗಳು, ಸ್ವ ಸಹಾಯ ಸಂಘಗಳು, ಕಾರ್ಮಿಕ ಸಂಘಗಳು, ಉದ್ಯೋಗದಾತರ ಸಂಘಗಳು, ಮತ್ತು ಬಾಲಕಾರ್ಮಿಕ ಪದ್ಧತಿ ವಿರುದ್ಧ ಆಂದೋಲನ ನಡೆಸುತ್ತಿರುವ ಎಲ್ಲಾ ಸಂಘ ಸಂಸ್ಥೆಗಳು ಹಾಗೂ ಸಾಮಾಜಿಕ ಕಾರ್ಯಕರ್ತರ ಸಹಕಾರದೊಂದಿಗೆ, ಬಾಲ ಕಾರ್ಮಿಕ ಪದ್ದತಿ ವಿರೋಧದ ಕುರಿತು ಅರ್ಥವತ್ತಾದ ಕಾರ್ಯಕ್ರಮ ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಂಡು, ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ಸಮಸ್ಯೆ ನಿವಾರಣೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಜೂನ್ 12 ರಂದು ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು ತಾವು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿಯೇ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಕುರಿತ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮವನ್ನು ಆಯೋಜಿಸುವಂತೆ ಮತ್ತು ಶಾಲಾ- ಕಾಲೇಜುಗಳಲ್ಲಿ ಹಾಗೂ ಗ್ರಾಮ, ತಾಲೂಕು, ಜಿಪಂ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಗಳಿಂದ ಪ್ರಮಾಣ ವಚನ ಸ್ವೀಕರಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದರು.

ಜಿಲ್ಲೆಯ ಎಲ್ಲ ಗ್ರಾಮ ಮತ್ತು ತಾಲೂಕುಗಳಲ್ಲಿ ಶಾಲಾ-ಕಾಲೇಜು, ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಜಾಥಾ ಆಯೋಜಿಸಿ, ಜಾಥಾ ಕಾರ್ಯಕ್ರಮದಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಪದ್ಧತಿ ಕುರಿತು ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಬಾಲ ಹಾಗೂ ಕಿಶೋರ ಕಾರ್ಮಿಕರಿಂದ ಮುಕ್ತವಾಗಿ ಮುಖ್ಯವಾಹಿನಿಗೆ ಸೇರಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಯಲ್ಲಿ ಶೇ.75ಕ್ಕಿಂತ ಹೆಚ್ಚಿಗೆ ಅಂಕ ಪಡೆದ ಮಕ್ಕಳಿಗೆ ಪ್ರೋತ್ಸಾಹಧನವನ್ನು ನೀಡುವಂತೆ ಮತ್ತು ಬಾಲ ಹಾಗೂ ಕಿಶೋರ ಕಾರ್ಮಿಕ ಮುಕ್ತ ಗ್ರಾಮಗಳನ್ನು ಗುರುತಿಸಿ ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸುವಂತೆ ತಿಳಿಸಿದರು.

ಜಿಲ್ಲೆಯಾದ್ಯಂತ ಜೂ.13ರಿಂದ 30ರವರೆಗೆ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ಅಭಿಯಾನ ಕಾರ್ಯಕ್ರಮ ಆಯೋಜಿಸುವಂತೆ ನಿರ್ದೇಶನ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ, ಉಪ ವಿಭಾಗಾಧಿಕಾರಿ ಕನಿಷ್ಕ, ಪೌರಾಯುಕ್ತ ಜಗದೀಶ್ ಹುಲಗೆಜ್ಜಿ, ಡಿವೈಎಸ್ಪಿ ಗಿರೀಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಮತ್ತಿತರರು ಇದ್ದರು.