ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭ್ಯುದಯಕ್ಕೆ ಸಂಘ, ಸಂಸ್ಥೆಗಳು ಶ್ರಮಿಸಲಿ

| Published : Jul 29 2024, 12:51 AM IST

ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭ್ಯುದಯಕ್ಕೆ ಸಂಘ, ಸಂಸ್ಥೆಗಳು ಶ್ರಮಿಸಲಿ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭ್ಯುದಯಕ್ಕೆ ಸಂಘ, ಸಂಸ್ಥೆಗಳು ಶ್ರಮಿಸಿದಾಗ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಸ್ಥಳೀಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪ್ರಕಾಶಾನಂದಜಿ ಮಹಾರಾಜ್ ನುಡಿದರು.

ರಾಣಿಬೆನ್ನೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭ್ಯುದಯಕ್ಕೆ ಸಂಘ, ಸಂಸ್ಥೆಗಳು ಶ್ರಮಿಸಿದಾಗ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಸ್ಥಳೀಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪ್ರಕಾಶಾನಂದಜಿ ಮಹಾರಾಜ್ ನುಡಿದರು. ಇಲ್ಲಿನ ಗೌರಿಶಂಕರ ನಗದ ನಿವೃತ್ತ ನೌಕರರ ಭವನದಲ್ಲಿ ಏರ್ಪಡಿಸಲಾಗಿದ್ದ ವನಸಿರಿ ಸಂಸ್ಥೆಯ 20ನೇ ವರ್ಷದ ಸರ್ವ ಸಾಧಾರಣ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ವನಸಿರಿ ಸಂಸ್ಥೆಯು ಕಾರ್ಮಿಕರಿಗೆ, ರೈತರಿಗೆ ನರೇಗಾ ಯೋಜನೆಯ ಸೌಲಭ್ಯಗಳು, ಬಡವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು, ಬಡ ಮಹಿಳೆಯರಿಗೆ ಜೀವನೋಪಾಯ ಸುಧಾರಣೆಗೆ ನೆರವು ಮುಂತಾದ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದರು. ವನಸಿರಿ ಸಂಸ್ಥೆಯ ಅಧ್ಯಕ್ಷ ಜಿ.ಎನ್. ಸಿಂಹ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ನಿರ್ದೇಶಕ ಎಸ್.ಡಿ. ಬಳಿಗಾರ ಮಾತನಾಡಿ, ಸಂಸ್ಥೆಯ 20 ವರ್ಷಗಳ ಸೇವೆಯಲ್ಲಿ 10 ಸಾವಿರಕ್ಕೂ ಹೆಚ್ಚು ಬಡ ಕುಟುಂಬಗಳ ಜೀವನ ಸುಧಾರಣೆಗೆ ಕ್ರಮ ಕೈಗೊಂಡಿದೆ. ನೈಸರ್ಗಿಕ ಸಂಪನ್ಮೂಲಗಳಾದ ಮಣ್ಣು, ನೀರು, ಅರಣ್ಯ ಸಂರಕ್ಷಣೆ, ಕೂಲಿಕಾರ್ಮಿಕರ ವಲಸೆ ತಡೆಗಟ್ಟುವಲ್ಲಿ ಸಾಧನೆ ಮಾಡಿದೆ. ಸಂಸ್ಥೆಯು ಲೇಬರ್ ಬ್ಯಾಂಕ್ ಸ್ಥಾಪಿಸುವ ಮೂಲಕ ಕೂಲಿ ಕಾರ್ಮಿಕರು ಹಾಗೂ ರೈತರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಿದೆ. ನರೇಗಾ ಯೋಜನೆ ಕುರಿತು ಜಿಲ್ಲೆಯ ಪ್ರತಿ ಹಳ್ಳಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಆ ಮೂಲಕ ಕಾರ್ಮಿಕರ ವಲಸೆ ತಡೆಗಟ್ಟಿ ಸ್ಥಳೀಯವಾಗಿ ಅವರಿಗೆ ಕೆಲಸ ಸಿಗುವಂತೆ ನೋಡಿಕೊಳ್ಳುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ದಾವಣಗೆರೆ ಸ್ಫೂರ್ತಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ರೂಪ್ಲಾ ನಾಯಕ, ಗದಗ ಸಂಕಲ್ಪ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮೀರಾ ನಾಯ್ಕ್ ಹಾಗೂ ಶಿರಸಿ ಮನು ವಿಕಾಸ ಸಂಸ್ಥೆಯ ನಿದೇರ್ಶಕರಿಗೆ ಸನ್ಮಾನಿಸಲಾಯಿತು. ಯೂನಿಯನ್ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಜಿ.ಎಸ್. ರಾಮಚಂದ್ರ, ಟ್ಯಾಗೋರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಬಸವರಾಜ ಕೇಲಗಾರ, ವನಸಿರಿ ಸಂಸ್ಥೆಯ ಹಬೀಬ್‌ಬಾನು ಹಾನಗಲ್, ಸದಸ್ಯರಾದ ರೇಣುಕಾ ಗುಡಿಮನಿ, ಜುಬೇದಾ ನಾಯ್ಕ, ವೆಂಕಟೇಶ, ಮಂಜುನಾಥ್, ಸಿಬ್ಬಂದಿ ವರ್ಗ ಹಾಗೂ ಜಿಲ್ಲೆಯ ಕಾರ್ಮಿಕ ಸಂಘದ ಮುಖಂಡರುಗಳು, ಕಾರ್ಮಿಕರು ಉಪಸ್ಥಿತರಿದ್ದರು.