ಬಿಜೆಪಿ ಅಭ್ಯರ್ಥಿ ಗೆಲುವೇ ಗುರಿಯಾಗಲಿ: ಶಿವಶಂಕರ

| Published : Mar 28 2024, 12:53 AM IST

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಜೆಡಿಎಸ್‌ ಪಕ್ಷದ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಶ್ರಮಿಸಬೇಕು. ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮೈತ್ರಿಧರ್ಮವನ್ನು ಪಾಲಿಸುವಂತೆ ಮುಖಂಡರು, ಕಾರ್ಯಕರ್ತರಿಗೆ ರಾಜ್ಯವ್ಯಾಪಿ ಸೂಚನೆ ನೀಡಿದ್ದಾರೆ. ಅದರಂತೆ ದಾವಣಗೆರೆ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಎಂದು ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಪಿ.ಜೆ. ಬಡಾವಣೆ ನಿವಾಸದಲ್ಲಿ ಜೆಡಿಎಸ್ ಪದಾಧಿಕಾರಿಗಳು, ಮುಖಂಡರ ಸಭೆ

- - -

ಕನ್ನಡಪ್ರಭ ವಾರ್ತೆ, ದಾವಣಗೆರೆ, ಮಾ.27ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಜೆಡಿಎಸ್‌ ಪಕ್ಷದ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಶ್ರಮಿಸಬೇಕು ಎಂದು ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ ಹೇಳಿದರು.

ನಗರದ ಪಿ.ಜೆ. ಬಡಾವಣೆಯ ತಮ್ಮ ನಿವಾಸದಲ್ಲಿ ಬುಧವಾರ ಜೆಡಿಎಸ್‌ನ ಜಿಲ್ಲೆಯ ವಿವಿಧ ತಾಲೂಕು ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಾ.ಮಂಜುನಾಥ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಮೈತ್ರಿಧರ್ಮವನ್ನು ಪಾಲಿಸುವಂತೆ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರಿಗೆ ರಾಜ್ಯವ್ಯಾಪಿ ಸೂಚನೆ ನೀಡಿದ್ದಾರೆ. ಅದರಂತೆ ದಾವಣಗೆರೆ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಎಂದು ತಿಳಿಸಿದರು.

ಮಿತ್ರಪಕ್ಷ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಪಕ್ಷದ ರಾಷ್ಟ್ರೀಯ ನಾಯಕರಾದ ಎಚ್.ಡಿ. ದೇವೇಗೌಡರು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಜೊತೆಗೆ ಚರ್ಚಿಸಿದಂತೆ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮಿತ್ರಪಕ್ಷಗಳ ಗೆಲುವೇ ನಮ್ಮ ಗುರಿಯಾಗಬೇಕು. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ನಾವು, ನೀವೆಲ್ಲರೂ ಸೇರಿಕೊಂಡು, ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ. ರಾಜ್ಯ ನಾಯಕರ ಸೂಚನೆ ಮೇರೆಗೆ ಈ ಸಭೆ ಕರೆದು, ಎಲ್ಲರಿಗೂ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ಜಿಪಂ ಮಾಜಿ ಸದಸ್ಯ ತೇಜಸ್ವಿ ವಿ.ಪಟೇಲ್‌, ಆನಂದಪ್ಪ, ಗಣೇಶ ಟಿ.ದಾಸಕರಿಯಪ್ಪ, ಜೆ.ಅಮಾನುಲ್ಲಾ ಖಾನ್, ಟಿ.ಅಸ್ಗರ್‌, ಶಹನವಾಜ್ ಖಾನ್‌, ಬಾತಿ ಶಂಕರ, ಧನಂಜಯ, ಅಂಜಿನಪ್ಪ, ಡಿ.ಆರ್. ಪರಮೇಶಪ್ಪ ಹರಪನಹಳ್ಳಿ, ಗಂಗಾಧರಪ್ಪ, ಚನ್ನಗಿರಿ ಜಾವೇದ್‌, ಮೋತಿ ಶಂಕರಪ್ಪ ಇತರರು ಇದ್ದರು.

- - - -27ಕೆಡಿವಿಜಿ63:

ದಾವಣಗೆರೆಯಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಬಗ್ಗೆ ನಡೆದ ಜೆಡಿಎಸ್ ಕ್ಷೇತ್ರ, ಜಿಲ್ಲೆಯ ಪದಾಧಿಕಾರಿಗಳು, ಮುಖಂಡರ ಸಭೆಯಲ್ಲಿ ಬಿ.ಚಿದಾನಂದಪ್ಪ ಮಾತನಾಡಿದರು.