ಸಾರಾಂಶ
ಹೋರಾಟಗಾರರ ವೇದಿಕೆಯು ಅರಣ್ಯವಾಸಿಗಳ ಪರವಾಗಿ ವಾದ ಮಂಡಿಸುತ್ತಿದ್ದು, ಅರಣ್ಯವಾಸಿಗಳ ಪರ ಸ್ಪಷ್ಟ ಆದೇಶ ಬರಬಹುದೆಂಬ ನಿರೀಕ್ಷೆಯಲ್ಲಿ ಹೋರಾಟಗಾರರ ವೇದಿಕೆ ಇದೆ.
ಭಟ್ಕಳ:
ಅರಣ್ಯವಾಸಿಗಳ ಅರಣ್ಯಭೂಮಿ ಹಕ್ಕಿಗೆ ಸಂಬಂಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಅರಣ್ಯವಾಸಿಗಳ ಪರವಾಗಿ ಸುಪ್ರೀಂಕೋರ್ಟ್‌ನಲ್ಲಿ ನಿಲುವು ಪ್ರಕಟಿಸಬೇಕು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.ಪಟ್ಟಣದಲ್ಲಿ ಇತ್ತೀಚೆಗೆ ತಾಲೂಕು ಅರಣ್ಯ ಅತಿಕ್ರಮಣದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಪರಿಸರ ಸಂಘಟನೆಗಳು ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಅರ್ಜಿ ತಿರಸ್ಕೃತವಾಗಿರುವ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ, ಒತ್ತುವರಿ ಪ್ರದೇಶದಲ್ಲಿ ಅರಣ್ಯೀಕರಣ ಮಾಡಬೇಕೆಂಬ ವಿಚಾರಣೆಯಲ್ಲಿ ಸರ್ಕಾರವು ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸುವುದು ಮಹತ್ವದಾಗಿದೆ. ಇಲ್ಲದಿದ್ದಲ್ಲಿ ಅರಣ್ಯವಾಸಿಗಳ ಅತಂತ್ರವಾಗಲಿದ್ದಾರೆ. ಸರ್ಕಾರ ಅರಣ್ಯ ವಾಸಿಗಳ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೊಂದು ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಹೋರಾಟಗಾರರ ವೇದಿಕೆಯು ಅರಣ್ಯವಾಸಿಗಳ ಪರವಾಗಿ ವಾದ ಮಂಡಿಸುತ್ತಿದ್ದು, ಅರಣ್ಯವಾಸಿಗಳ ಪರ ಸ್ಪಷ್ಟ ಆದೇಶ ಬರಬಹುದೆಂಬ ನಿರೀಕ್ಷೆಯಲ್ಲಿ ಹೋರಾಟಗಾರರ ವೇದಿಕೆ ಇದೆ ಎಂದರು.ಜಿಪಿಎಸ್ ಪುನರ್ ಪರಿಶೀಲನಾ ಮೇಲ್ಮನವಿ ಸ್ವೀಕೃತಿ ಪ್ರತಿಯನ್ನು ಅರಣ್ಯವಾಸಿಗಳಿಗೆ ತಂಝೀಂ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ವಿತರಿಸಿದರು. ಸಭೆಯಲ್ಲಿ ಪ್ರಮುಖರಾದ ದೇವರಾಜ ಗೊಂಡ, ಚಂದ್ರು ನಾಯ್ಕ, ಪಾಂಡುರಂಗ ನಾಯ್ಕ, ರತ್ನ ಬೆಳಕೆ, ಶ್ರೀಧರ ನಾಯ್ಕ ಹಾಡುವಳ್ಳಿ, ಖಯ್ಯೂಂ ಸಾಬ್ ಮುಂತಾದವರಿದ್ದರು.