ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

| Published : Aug 13 2024, 12:56 AM IST

ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಲಿ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತದ ನೆರೆಯ ದೇಶ ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ಹಲ್ಲೆ, ಅತ್ಯಾಚಾರ, ಲೂಟಿ, ಹಿಂದೂ ದೇವಾಲಯಗಳ ಧ್ವಂಸ ಹೀಗೆ ಹಿಂದೂಗಳ ಮೇಲೆ ಇನ್ನಿಲ್ಲದ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಕೇಂದ್ರ ಸರ್ಕಾರ ಕೂಡಲೇ ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣಗೆ ಸರ್ವರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹಿಂದೂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಂಜುನಾಥ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

- ಸರ್ವ ಕ್ರಮಗಳ ಕೈಗೊಳ್ಳಲು ಹಿಂದೂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಂಜುನಾಥ್ ಒತ್ತಾಯ- - - ಕನ್ನಡಪ್ರಭ ವಾರ್ತೆ, ಚನ್ನಗಿರಿ

ಭಾರತದ ನೆರೆಯ ದೇಶ ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ಹಲ್ಲೆ, ಅತ್ಯಾಚಾರ, ಲೂಟಿ, ಹಿಂದೂ ದೇವಾಲಯಗಳ ಧ್ವಂಸ ಹೀಗೆ ಹಿಂದೂಗಳ ಮೇಲೆ ಇನ್ನಿಲ್ಲದ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಕೇಂದ್ರ ಸರ್ಕಾರ ಕೂಡಲೇ ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣಗೆ ಸರ್ವರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹಿಂದೂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಂಜುನಾಥ್ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಂಗ್ಲಾ ದೇಶದ ಚುನಾಯಿತ ಪ್ರಧಾನಿ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದಾರೆ. ಅನಂತರ ಆ ದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಅಲ್ಲಿನ ಜಿಹಾದಿ ಶಕ್ತಿಗಳು ಹಿಂದೂ ಸಮಾಜದ ಮೇಲೆ ದೊಡ್ಡ ಪ್ರಮಾಣದ ದಾಳಿ ಪ್ರಾರಂಭಿಸಿರುವುದು ಖಂಡನೀಯ ಎಂದರು.

ಬಾಂಗ್ಲಾ ದೇಶದಲ್ಲಿ ಕಳೆದ ನಾಲ್ಕೆದು ದಿನಗಳಿಂದ ಹಿಂದೂ ಧಾರ್ಮಿಕ ಸ್ಥಳಗಳು, ಹಿಂದೂ ವ್ಯಾಪಾರ ಸಂಸ್ಥೆಗಳು ಮತ್ತು ಹಿಂದೂಗಳ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಿದೆ. ಬಾಂಗ್ಲಾ ದೇಶದಾದ್ಯಂತ ಪ್ರತಿ ಜಿಲ್ಲೆಯಲ್ಲೂ ಹಿಂದೂ ರುದ್ರಭೂಮಿಗಳು, 100ಕ್ಕೂ ಹೆಚ್ಚು ದೇವಾಲಯಗಳು ಧ್ವಂಸವಾಗಿವೆ ಎಂದರು.

ಹಿಂದೂಗಳ ಮೇಲೆ ಬಾಂಗ್ಲಾದಲ್ಲಿ ಆಗಾಗ್ಗೆ ನಡೆಯುತ್ತೀರುವ ದೌರ್ಜನ್ಯ ದಬ್ಬಾಳಿಕೆಗಳಿಂದ ದೇಶದ ವಿಭಜನೆ ಸಮಯದಲ್ಲಿ ಬಾಂಗ್ಲಾದಲ್ಲಿ ಶೇ.32ರಷ್ಟಿದ್ದ ಹಿಂದೂಗಳು ಈಗ ಶೇ.8ರಷ್ಟಕ್ಕೆ ಇಳಿದಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಭಾರತ ಸಾಂಪ್ರದಾಯಿಕವಾಗಿ ಪ್ರಪಂಚದಾದ್ಯಂತ ಕಿರುಕುಳಕ್ಕೆ ಒಳಗಾದ ವಲಸಿಗರಿಗೆ ಸಹಾಯ ಮಾಡಿಕೊಂಡು ಬಂದಿದೆ. ಬಾಂಗ್ಲಾದಲ್ಲಿರುವ ಹಿಂದೂಗಳ ರಕ್ಷಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಹಿಂದೂ ಪರಿಷತ್ತು ಭಾರತ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಪ್ರಮುಖರಾದ ಶ್ರೀನಿವಾಸ್, ಬುಳ್ಳಿ ಗಣೇಶ್, ರವಿಚಂದ್ರ, ಜಯಕುಮಾರ್, ರಾಕೇಶ್ ಹಾಜರಿದ್ದರು.

- - - -12ಕೆಸಿಎನ್‌ಜಿ1:

ಹಿಂದೂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಂಜುನಾಥ್ ಪತ್ರಿಕಾಗೋಷ್ಠಿ ನಡೆಸಿ, ಬಾಂಗ್ಲಾದಲ್ಲಿರುವ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.