ಸಾರಾಂಶ
ಉತ್ತರ ಕನ್ನಡ ಜಿಲ್ಲೆಯಲ್ಲಿನ ಎಲ್ಲ ವಿದ್ಯಾ ಸಂಸ್ಥೆಗಳು, ವಿದ್ಯಾರ್ಥಿನಿಲಯಗಳು, ಸರ್ಕಾರಿ ಕಚೇರಿಗಳಲ್ಲಿ ರಾಜ್ಯ ಮಕ್ಕಳ ರಕ್ಷಣಾ ನೀತಿಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ಕಾರವಾರ: ಜಿಲ್ಲೆಯಲ್ಲಿನ ಎಲ್ಲ ವಿದ್ಯಾ ಸಂಸ್ಥೆಗಳು, ವಿದ್ಯಾರ್ಥಿನಿಲಯಗಳು, ಸರ್ಕಾರಿ ಕಚೇರಿಗಳಲ್ಲಿ ರಾಜ್ಯ ಮಕ್ಕಳ ರಕ್ಷಣಾ ನೀತಿಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಮಕ್ಕಳ ರಕ್ಷಣಾ ನೀತಿಯಲ್ಲಿ ಸೂಚಿಸಿರುವಂತೆ ಎಲ್ಲ ವಿದ್ಯಾ ಸಂಸ್ಥೆಗಳು, ವಿದ್ಯಾರ್ಥಿನಿಲಯಗಳು, ಕ್ರೀಡಾ ವಸತಿ ನಿಲಯಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ 20 ಅಂಶಗಳ ತತ್ವಗಳನ್ನು ತಪ್ಪದೇ ಅನುಷ್ಠಾನಗೊಳಿಸಬೇಕು. ತಮ್ಮ ವ್ಯಾಪ್ತಿಯಲ್ಲಿರುವ ಮಕ್ಕಳ ಸುರಕ್ಷತೆ ಕುರಿತಂತೆ ನಿಗದಿತ ಸಭೆಗಳನ್ನು ನಡೆಸಿ, ಎಲ್ಲ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.ಗ್ರಾಮಸಭೆಗಳು, ಶಾಲಾ ಸಲಹಾ ಪೆಟ್ಟಿಗೆಯಲ್ಲಿ ಸಲ್ಲಿಕೆಯಾಗುವ ಮಕ್ಕಳ ದೂರುಗಳನ್ನು ಕಡ್ಡಾಯವಾಗಿ ಗಂಭೀರವಾಗಿ ಪರಿಗಣಿಸಿ, ಆ ಸಮಸ್ಯೆಗಳನ್ನು ನಿವಾರಣೆ ಮಾಡುವಲ್ಲಿ ಸಂಬಂಧಪಟ್ಟ ಇಲಾಖೆಗಳು ಅತ್ಯಂತ ಪರಿಣಾಮಕಾರಿಯಗಿ ಕಾರ್ಯ ನಿರ್ವಹಿಸಿ, ಆ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕು ಎಂದರು.
ಜಿಲ್ಲೆಯಲ್ಲಿ ಸಂಪೂರ್ಣ ಮಕ್ಕಳಸ್ನೇಹಿ ಸುರಕ್ಷಿತ ವಾತಾವರಣ ನಿರ್ಮಾಣ ಮಾಡುವಲ್ಲಿ ಎಲ್ಲ ಇಲಾಖೆಗಳು ಮಕ್ಕಳ ರಕ್ಷಣಾ ಆಯೋಗದ ಸೂಚಿಸಿರುವ ಎಲ್ಲ ಅಂಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು.ತರಬೇತಿ ನಿರತ ಐಎಎಸ್ ಜಿಲ್ಲಾಧಿಕಾರಿ ಝೂಫಿಶಾನ್ ಹಕ್, ಜಿಪಂ ಉಪ ಕಾರ್ಯದರ್ಶಿ ಅಲ್ಲಾಭಕ್ಷ, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ನಟರಾಜ್, ಡಿವೈಎಸ್ಪಿ ಗಿರೀಶ್ ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))