ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಸೌಹಾರ್ದತೆ ಮತ್ತು ಯುವಕರಲ್ಲಿ ದೇಶ ಪ್ರಜ್ಞೆ ಬರಬೇಕೆಂಬ ಉದ್ದೇಶದಿಂದ ತಿರಂಗಾ ಯಾತ್ರೆಗೆ ಸೂಚನೆ ನೀಡಿದ ಹಿನ್ನೆಲೆ ಬಿಜೆಪಿ ಯುವ ಮೋರ್ಚಾ ಈ ಯಾತ್ರೆ ಹಮ್ಮಿಕೊಂಡಿದೆ.
ಗಂಗಾವತಿ:80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಹಮ್ಮಿಕೊಂಡಿದ್ದ ಬೃಹತ್ ತಿರಂಗಾ ಯಾತ್ರೆಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಚಾಲನೆ ನೀಡಿದರು.
ಬಾಬು ಜಗಜೀವನ್ ರಾಮ್ ವೃತ್ತದಿಂದ ಆರಂಭವಾದ ತಿರಂಗಾ ಯಾತ್ರೆಯು ನಗರದ ಪ್ರಮುಖ ವೃತ್ತಗಳ ಮೂಲಕ ಸಂಚರಿಸಿ ಶ್ರೀಕೃಷ್ಣದೇವರಾಯ ವೃತ್ತಕ್ಕೆ ತಲುಪಿತು.ಈ ವೇಳೆ ಮಾತನಾಡಿದ ಶಾಸಕ ಗಾಲಿ ಜನಾರ್ದನ ರೆಡ್ಡಿ, ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಸೌಹಾರ್ದತೆ ಮತ್ತು ಯುವಕರಲ್ಲಿ ದೇಶ ಪ್ರಜ್ಞೆ ಬರಬೇಕೆಂಬ ಉದ್ದೇಶದಿಂದ ತಿರಂಗಾ ಯಾತ್ರೆಗೆ ಸೂಚನೆ ನೀಡಿದ ಹಿನ್ನೆಲೆ ಬಿಜೆಪಿ ಯುವ ಮೋರ್ಚಾ ಈ ಯಾತ್ರೆ ಹಮ್ಮಿಕೊಂಡಿದೆ. ಮಕ್ಕಳಲ್ಲಿ ಮತ್ತು ಯುವಕರಲ್ಲಿ ದೇಶ ಭಕ್ತಿ ಬರಬೇಕೆಂದು ತಿಳಿಸಿದರು.
ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಪ್ರಧಾನಿ ಮೋದಿ ಸೂಚನೆಯ ಮೇರೆಗೆ ಯುವಕರಲ್ಲಿ ದೇಶ ಭಕ್ತಿ ಮೂಡಬೇಕು ಮತ್ತು ಮನೆ ಮನೆಗಳಲ್ಲಿ ಧ್ವಜ ಹಾರಾಟ ಆಗ ಬೇಕು. ಮೂರು ದಿನಗಳ ಕಾಲ ಈ ಹಬ್ಬ ಆಚರಣೆಯಾಗಬೇಕೆಂದು ತಿಳಿಸಿದರು.ಲಕ್ಷ್ಮಿ ಅರುಣಾ ಜನಾರ್ದನ ರೆಡ್ಡಿ ಮಾತನಾಡಿ, ಮಕ್ಕಳಲ್ಲಿ ರಾಷ್ಟ್ರ ಭಕ್ತಿ ಮತ್ತು ಸೌಹಾರ್ಧತೆ ಬೆಳೆಯಬೇಕೆನ್ನುವುದು ತಿರಂಗಾ ಯಾತ್ರೆಯ ಉದ್ದೇಶವಾಗಿದೆ ಎಂದರು.
ಸಾವಿರಾರು ಮಕ್ಕಳು ಭಾಗಿ:ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಹಮ್ಮಿಕೊಂಡಿದ್ದ ಭವ್ಯ ಬೃಹತ್ ತಿರಂಗಾ ಯಾತ್ರೆಯಲ್ಲಿ ವಿವಿಧ ಕಾಲೇಜು ಮತ್ತು ಪ್ರೌಢ ಶಾಲೆಯ ಸಾವಿರಾರು ಮಕ್ಕಳು ಭಾಗಿಯಾಗಿದ್ದರು.
ಈ ವೇಳೆ ಕೊಟ್ಟೂರು ಸ್ವಾಮೀಜಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮನೋಹರ್ ಗೌಡ ಹೇರೂರು, ನಗರ ಮಂಡಲ ಅಧ್ಯಕ್ಷ ಚಂದ್ರು ಹಿರೂರು, ಗ್ರಾಮೀಣ ಮಂಡಲ ಅಧ್ಯಕ್ಷ ಡಿಕೆ ಆಗೋಲಿ, ಯುವ ಮೋರ್ಚಾ ಅಧ್ಯಕ್ಷ ರಮೇಶ್ ಹೊಸಮಲಿ, ಯಮನೂರ್ ಚೌಡ್ಕಿ, ಆನಂದಗೌಡ ಶರಣಪ್ಪ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.