ಅಭಿವೃದ್ಧಿ ಕಾಮಗಾರಿ ನಿರಂತರವಾಗಿ ನಡೆಯಲಿ

| Published : Oct 13 2024, 01:00 AM IST

ಸಾರಾಂಶ

ಹೊಸಕೋಟೆ: ತಾಲೂಕಿಗೆ ಒಂದಲ್ಲೊಂದು ಮಾರ್ಗದಲ್ಲಿ ಅನುದಾನ ತರುವ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ನಿರಂತರವಾಗಿ ಮಾಡುತ್ತಿರಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಹೊಸಕೋಟೆ: ತಾಲೂಕಿಗೆ ಒಂದಲ್ಲೊಂದು ಮಾರ್ಗದಲ್ಲಿ ಅನುದಾನ ತರುವ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ನಿರಂತರವಾಗಿ ಮಾಡುತ್ತಿರಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಓಬಳಾಪುರದಲ್ಲಿ ₹25 ಲಕ್ಷ ವೆಚ್ಚದಲ್ಲಿ ನೂತನ ಶಾಲಾ ಕಟ್ಟಡ ನಿರ್ಮಾಣ, ₹5 ಲಕ್ಷ ವೆಚ್ಚದ ಐಮಾಸ್ಟ್ ದೀಪ, ಮೇಡಹಳ್ಳಿ ಗ್ರಾಮದಲ್ಲಿ ಬಮೂಲ್ ವತಿಯಿಂದ ₹5 ಲಕ್ಷ ವೆಚ್ಚದ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ, ಉಚಿತ ನೀರಿನ ಕ್ಯಾನ್ ವಿತರಣೆ, ಮೇಡಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ₹25 ಲಕ್ಷ ವೆಚ್ಚದಲ್ಲಿ ನೂತನ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ, ಹಂದೇನಹಳ್ಳಿ ಗ್ರಾಮದಲ್ಲಿ ₹25 ಲಕ್ಷ ವೆಚ್ಚದ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಕಲ್ಕುಂಟೆ ಗ್ರಾಮದಲ್ಲಿ ₹20 ಲಕ್ಷ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.

ಮುಖ್ಯಮಂತ್ರಿ ವಿಶೇಷ ಅನುದಾನ, ಶಾಸಕರ ಅನುದಾನ ಹಾಗೂ ಖಾಸಗಿ ಸಂಸ್ಥೆಗಳ ಸಿಎಸ್‌ಆರ್ ಹಣದಲ್ಲಿ ನಿರಂತರವಾಗಿ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ. ಕಾಮಗಾರಿಗಳ ಗುಣಮಟ್ಟ ಹಾಗೂ ನಿಯಮಿತ ಸಮಯದಲ್ಲಿ ಸಾರ್ವಜನಿಕ ಬಳಕೆಗೆ ಈ ಭಾಗದ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಇದರಿಂದ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಜಂಟಿ ಸಹಯೋಗದಲ್ಲಿ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ. ಸಾರ್ವಜನಿಕರಿಗೆ ಯಾವುದೇ ಸಮಸ್ಯೆಗಳಿದ್ದರೆ ನಮ್ಮನ್ನು ಸಂಪರ್ಕಿಸಬೇಕು ಎಂದರು.

ಬಮೂಲ್ ಉಪಾಧ್ಯಕ್ಷ ಕೆಎಂಎ ಮಂಜುನಾಥ್, ತಾಪಂ ಇಒ ಸಿಎನ್ ನಾರಾಯಣಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ್, ಅನುಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷ ಸಂತೋಷ್, ಸಮೇತನಹಳ್ಳಿ ಗ್ರಾಪಂ ಅಧ್ಯಕ್ಷ ಕಾಂತರಾಜ್, ಮಾರೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಬಾಬು ರೆಡ್ಡಿ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲತಾ ರೆಡ್ಡಿ, ಪಂಚಾಯತಿ ಸದಸ್ಯೆ ರತ್ನಾ ಗೋವಿಂದರಾಜ್, ಭೂಧನಹೊಸಳ್ಳಿ ಪ್ರಕಾಶ್, ಕೃಷ್ಣ ರೆಡ್ಡಿ, ಪ್ರದೀಪ್ ಇದ್ದರು.

ಫೋಟೋ: 10 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಓಬಳಾಪುರದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕ ಶರತ್ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು.