ಕನ್ನಡಪ್ರಭ ವಾರ್ತೆ ಬಾಗಲಕೋಟೆಪಂಡಿತ್ ದೀನದಯಾಳ ಉಪಾಧ್ಯಾಯರ ಅಂತ್ಯೋದಯ ತತ್ವದ ಆಧಾರದ ಮೇಲೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಫಲ ತಲುಪಿಸುವ ಗುರಿಯೊಂದಿಗೆ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಪಂಡಿತ್ ದೀನದಯಾಳ ಉಪಾಧ್ಯಾಯರ ಅಂತ್ಯೋದಯ ತತ್ವದ ಆಧಾರದ ಮೇಲೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಫಲ ತಲುಪಿಸುವ ಗುರಿಯೊಂದಿಗೆ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ಮುಚಖಂಡಿಯಲ್ಲಿ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಮತಕೇತ್ರದಿಂದ ಎರಡು ದಿನಗಳಿಂದ ಆಯೋಜಿಸಿದ್ದ ಪ್ರಶಿಕ್ಷಣ ವರ್ಗದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.ಪಕ್ಷದ ತತ್ವಸಿದ್ಧಾಂತಗಳು, ಸಂಘಟನೆಯ ಬಲವರ್ಧನೆ ಮತ್ತು ಕಾರ್ಯಕರ್ತರ ಜವಾಬ್ದಾರಿಗಳ ಬಗ್ಗೆ ತರಬೇತಿ ನೀಡಲು ಈ ಪ್ರಶಿಕ್ಷಣ ವರ್ಗವನ್ನು ಆಯೋಜಿಸಿತ್ತು, ಕಾರ್ಯಕರ್ತರು ಪಕ್ಷದ ತತ್ವ ಹಾಗೂ ಸಂಘಟನಾ ಬಲ ಹೆಚ್ಚಿಸುವ ಮೂಲಕ ಪಕ್ಷದ ಸಿದ್ಧಾಂತಗಳು, ಅಂತ್ಯೋದಯ ಚಿಂತನೆ ಮತ್ತು ರಾಷ್ಟ್ರಪ್ರಥಮ ತತ್ವಗಳನ್ನು ಬೋಧಿಸುವುದು ಇದರ ಮುಖ್ಯ ಗುರಿಯಾಗಿದೆ. ಪಕ್ಷದ ತತ್ವ, ಸಂಘಟನೆ ಮತ್ತು ರಾಷ್ಟ್ರಸೇವೆಯ ಧ್ಯೇಯಗಳನ್ನು ಕಾರ್ಯಕರ್ತರು ಜನರಿಗೆ ತಲುಪಿಸುವ ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು, ಸಂಘಟಿತ ಕಾರ್ಯಪದ್ಧತಿ ಮತ್ತು ಸಮರ್ಪಿತ ಸೇವಾಭಾವದಿಂದ ಮಾತ್ರ ಪಕ್ಷ ಇನ್ನಷ್ಟು ಬಲಿಷ್ಠವಾಗಲು ಸಾಧ್ಯ ಎಂದರು.

ಪ್ರಶಿಕ್ಷಣ ವರ್ಗದ ಸಂಚಾಲಕ ಶಂಕರ ಹುನ್ನೂರ, ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮೀ ನಾರಾಯಣ ಕಾಸಟ್, ಭಾಗೀರಥಿ ಪಾಟೀಲ, ರಾಜು ನಾಯ್ಕರ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ, ಬಸವರಾಜ ಯಂಕಂಚಿ, ಸತ್ಯನಾರಾಯಣ ಹೆಮಾದ್ರಿ, ಶಶಿ ಗುತ್ತನ್ನವರ, ನಗರ ಮಂಡಲ ಅಧ್ಯಕ್ಷ ಬಸವರಾಜ ಕಟಗೇರಿ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರ, ರಾಜು ಮುದೆನೂರ, ರಾಜು ರೇವಣಕರ್, ಕಲ್ಲಪ್ಪ ಭಗವತಿ, ಮಲ್ಲಯ್ಯ ವಿಜಾಪುರ, ಉಮೇಶ ಹಂಚಿನಾಳ ಸೇರಿದಂತೆ ನಗರ ಹಾಗೂ ಗ್ರಾಮೀಣ ಮಂಡಲ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.