ಹೊಸಕೋಟೆ: ಕೇವಲ 500 ಜನ ಮಹರ್ ಸೈನಿಕರು 25 ಸಾವಿರ ಪೇಶ್ವೆಯವರನ್ನು ಸೋಲಿಸಿ ಇತಿಹಾಸ ಸೃಷ್ಟಿಸಿರುವ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಸರ್ಕಾರದ ಮಟ್ಟದಲ್ಲಿ ಆಚರಿಸುವಂತಾಗಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಚಿನ್ನಸ್ವಾಮಿ ತಿಳಿಸಿದರು.
ಹೊಸಕೋಟೆ: ಕೇವಲ 500 ಜನ ಮಹರ್ ಸೈನಿಕರು 25 ಸಾವಿರ ಪೇಶ್ವೆಯವರನ್ನು ಸೋಲಿಸಿ ಇತಿಹಾಸ ಸೃಷ್ಟಿಸಿರುವ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಸರ್ಕಾರದ ಮಟ್ಟದಲ್ಲಿ ಆಚರಿಸುವಂತಾಗಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಚಿನ್ನಸ್ವಾಮಿ ತಿಳಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಭೀಮ ಕೋರೆಗಾಂವ್ ಯುದ್ಧ ಧಮನಿತ ವರ್ಗಗಳ ಸ್ವಾಭಿಮಾನ, ಸಮಾನತೆ, ನ್ಯಾಯಕ್ಕಾಗಿ ನಡೆದ ಯುದ್ಧವಾಗಿತ್ತು. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸಿದ ಮಹರ್ ಸೈನಿಕರ ಧೈರ್ಯ, ಸಾಹಸಕ್ಕೆ ಹಿಡಿದ ಕನ್ನಡಿಯಾಗಿತ್ತು. ಇತಿಹಾಸ ಸೃಷ್ಟಿಸಿದ ಈ ಯುದ್ಧದ ವಿಜಯೋತ್ಸವ ದಿನವನ್ನು ಸರ್ಕಾರದಿಂದಲೇ ಆಚರಿಸಬೇಕು ಎಂದರು.ನಗರದ ಕೆಇಬಿ ವೃತ್ತದಿಂದ ತಾಲೂಕು ಕಚೇರಿ ವೃತ್ತದವರೆಗೆ ಭೀಮ ಕೋರೆಗಾಂವ್ ಸ್ಥೂಪದ ಮೆರವಣಿಗೆ ನಡೆಯಿತು. ತಾಲೂಕು ಕಚೇರಿ ಮುಂಭಾಗದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಕರ್ನಾಟಕ ಅಹಿಂದ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಕಿರಣ್, ತಾಪಂ ಇಒ ಮುನಿಯಪ್ಪ, ಸಮಾಜ ಕಲ್ಯಾಣಾಧಿಕಾರಿ ಸಿದ್ದರಾಜು, ದಲಿತ ಸಂಘರ್ಷ ಸೇನೆ ರಾಜ್ಯಾಧ್ಯಕ್ಷ ಜಿ.ಆನಂದ್, ಕರ್ನಾಟಕ ಮಹಾಜನ ಸೇನೆ ರಾಜ್ಯಾಧ್ಯಕ್ಷ ಮಂಜುನಾಥ್, ಭೀಮ್ ಸೇವಾ ಸಮಿತಿ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್, ಭಾರತೀಯ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷೆ ಸಾವಿತ್ರಿ, ಭಾರತೀಯ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಶಿವಕುಮಾರ್ ಚಕ್ರವರ್ತಿ, ದಸಸಂಕ ಜಿಲ್ಲಾ ಸಂಚಾಲಕ ಲೋಕೇಶ್, ಕದಸಂಸ ಅಂಬೇಡ್ಕರ್ ವಾದ ಜಿಲ್ಲಾ ಸಂಚಾಲಕ ಕೊರಳೂರು ಶ್ರೀನಿವಾಸ್, ಮುನಿರಾಜು, ದರ್ಶನ್, ಅಣ್ಣಯ್ಯಪ್ಪ, ಎಎಸ್‌ಐ ದೇವರಾಜ್ ಗೊಟ್ಟಿಪುರ ಚಂದ್ರು ಹಾಜರಿದ್ದರು.(ಫೋಟೋ ಕ್ಯಾಫ್ಷನ್)
ಹೊಸಕೋಟೆಯ ಅಂಬೇಡ್ಕರ್ ಭವನದಲ್ಲಿ ಭೀಮ ಕೋರೆಗಾಂವ್ ವಿಜಯೋತ್ಸವದ ವಿಚಾರಸಂಕಿರಣದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಚಿನ್ನಸ್ವಾಮಿ ಇತರರು ಪಾಲ್ಗೊಂಡಿದ್ದರು.