ಶಾಲೆಗಳ ಸಬಲೀಕರಣಕ್ಕೆ ಸರ್ಕಾರ ಮುಂದಾಗಲಿ: ಕೆ.ರಾಘವೇಂದ್ರ ನಾಯರಿ

| Published : Aug 08 2024, 01:43 AM IST

ಸಾರಾಂಶ

ಖಾಸಗಿ ಶಾಲೆಗಳ ಪೈಪೋಟಿ ಎದುರಿಸಲು ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಶಿಕ್ಷಕರು ಹಾಗೂ ಸಾರ್ವಜನಿಕರೂ ಕೈ ಜೋಡಿಸಬೇಕು ಎಂದು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ದಾವಣಗೆರೆ: ಖಾಸಗಿ ಶಾಲೆಗಳ ಪೈಪೋಟಿ ಎದುರಿಸಲು ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಶಿಕ್ಷಕರು ಹಾಗೂ ಸಾರ್ವಜನಿಕರೂ ಕೈ ಜೋಡಿಸಬೇಕು ಎಂದು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಹೇಳಿದರು.

ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ "ಸಾಮಾಜಿಕ ಕಳಕಳಿ " ಕಾರ್ಯಕ್ರಮದಡಿ ಬ್ಯಾಂಕ್ ರಾಷ್ಟ್ರೀಕರಣದ 56ನೇ ದಿನಾಚರಣೆ ಅಂಗವಾಗಿ ದಾವಣಗೆರೆ ತಾಲೂಕಿನ ತುರ್ಚಘಟ್ಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುಟಾಣಿಗಳು ಕುಳಿತುಕೊಳ್ಳುವ ಕುರ್ಚಿಗಳನ್ನು ಕೊಡುಗೆ ನೀಡಿ ಅವರು ಮಾತನಾಡಿದರು.

ಸರ್ಕಾರಿ ಕನ್ನಡ ಶಾಲೆಗಳು ನಮ್ಮ ನಾಡಿನ ಹೆಮ್ಮೆ. ಅವುಗಳಲ್ಲಿ ಕಲಿತವರು ಅದೆಷ್ಟೋ ವಿದ್ಯಾರ್ಥಿಗಳು ವಿಜ್ಞಾನ, ತಂತ್ರಜ್ಞಾನ, ಸಂಶೋಧನೆ, ಕಲೆ ಮುಂತಾದ ಅನೇಕ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮೆರೆದಿದ್ದಾರೆ. ಖಾಸಗಿ ಶಾಲೆಗಳಿಗೆ ಅನಗತ್ಯ ಪ್ರೋತ್ಸಾಹ ಬಿಟ್ಟು ಸರ್ಕಾರಿ ಶಾಲೆಗಳನ್ನು ಸಬಲೀಕರಣಕ್ಕೆ ಸರ್ಕಾರಗಳು ಮುಂದಾಗಬೇಕು ಎಂದರು.

ಕೆನರಾ ಬ್ಯಾಂಕ್ ನಿವೃತ್ತ ನೌಕರರ ಸಂಘದ ಪ್ರಾದೇಶಿಕ ಕಾರ್ಯದರ್ಶಿ ಎಚ್.ಸುಗುರಪ್ಪ ಮಾತನಾಡಿ, ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸಬೇಕು. ದುಸ್ಥಿತಿಯಲ್ಲಿರುವ ಸರ್ಕಾರಿ ಕನ್ನಡ ಶಾಲೆಗಳನ್ನು ಸರ್ಕಾರ ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಬೇಕು ಎಂದರು.

ಮುಖ್ಯಶಿಕ್ಷಕಿ ಕಲ್ಪನಾ ಮಾತನಾಡಿದರು. ಕೆನರಾ ಬ್ಯಾಂಕ್ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯರಾದ ಕೆ.ವಿಶ್ವನಾಥ್ ಬಿಲ್ಲವ, ಆರ್.ಆಂಜನೇಯ ಸಿ.ಪರಶುರಾಮ, ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಎಚ್.ಎಸ್.ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಅಜಿತ್ ಕುಮಾರ್ ನ್ಯಾಮತಿ, ಜಂಟಿ ಕಾರ್ಯದರ್ಶಿ ಅಣ್ಣಪ್ಪ ನಂದಾ, ಕೆನರಾ ಬ್ಯಾಂಕ್ ನೌಕರರ ಸಂಘದ ಚಾಂದ್ ಬಾಷಾ ಹಾಗೂ ಶಿಕ್ಷಕರಾದ ವಿ.ಎಂ.ವಿರೂಪಾಕ್ಷಯ್ಯ, ಕೆ.ವೀಣಾ, ಎನ್.ಸಿ. ಸುಮಿತ್ರಾ, ಆಶಾರಾಣಿ, ಕಾವ್ಯ, ಮಂಜಮ್ಮ ಕೊಟಿಗಿ, ವಿದ್ಯಾರ್ಥಿಗಳು ಇತರರಿದ್ದರು.

- - - (** ಈ ಫೋಟೋ-ಕ್ಯಾಪ್ಷನ್‌ ಪ್ಯಾನೆಲ್‌ಗೆ ಬಳಸಬಹುದು)-5ಕೆಡಿವಿಜಿ36ಃ:

ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ "ಸಾಮಾಜಿಕ ಕಳಕಳಿ " ಕಾರ್ಯಕ್ರಮದಡಿ ಬ್ಯಾಂಕ್ ರಾಷ್ಟ್ರೀಕರಣದ 56ನೇ ದಿನಾಚರಣೆ ಅಂಗವಾಗಿ ದಾವಣಗೆರೆ ತಾಲೂಕಿನ ತುರ್ಚಘಟ್ಟದ ಸರ್ಕಾರಿ ಶಾಲೆಗೆ ಮಕ್ಕಳು ಕುಳಿತುಕೊಳ್ಳುವ ಕುರ್ಚಿಗಳನ್ನು ಕೊಡುಗೆ ನೀಡಲಾಯಿತು. ಯೂನಿಯನ್‌ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ, ಸಂಘದ ಪ್ರಾದೇಶಿಕ ಕಾರ್ಯದರ್ಶಿ ಎಚ್.ಸುಗುರಪ್ಪ, ಮುಖ್ಯಶಿಕ್ಷಕಿ ಕಲ್ಪನಾ ಇತರರು ಇದ್ದರು.