ಸಾರಾಂಶ
ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮ ಸೆ.15ರಂದು ಅಚ್ಚುಕಟ್ಟಾಗಿ ನಡೆಯಬೇಕು. ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಅಧಿಕಾರಿಗಳು ಜಾಗ್ರತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಕನ್ನಡಪ್ರಭ ವಾರ್ತೆ ಯರಗಟ್ಟಿ
ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮ ಸೆ.15ರಂದು ಅಚ್ಚುಕಟ್ಟಾಗಿ ನಡೆಯಬೇಕು. ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಅಧಿಕಾರಿಗಳು ಜಾಗ್ರತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.ಪಟ್ಟಣದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಮಾರ್ಗ ಪರಿಶೀಲಿಸಿ ಮಾತನಾಡಿದ ಅವರು, ಬೆಳಗಾವಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಸೆ.15ರಂದು ಬೆಳಗ್ಗೆ 9.30ರಿಂದ 10.30ರವರೆಗೆ 135 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸಲಾಗುವುದು. ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಿಂದ ಚನ್ನಮ್ಮನ ಕಿತ್ತೂರುವರೆಗೆ ಅಂದಾಜು 1.25 ಲಕ್ಷ ಜನ ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವ ಮಕ್ಕಳಿಗಾಗಿ 100 ಮೀಟರ್ ಗೆ ನೀರಿನ ವ್ಯವಸ್ಥೆ, ಹಾಲು ಉಪಹಾರದ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಕರೆತರಲು ವಾಹನಗಳನ್ನು ಕಲ್ಪಿಸಲಾಗಿದೆ. ಕಾರ್ಯಕ್ರಮ ಯಶಸ್ವಿಗೆ ಸಾರ್ವಜನಿಕರು ಜನಪ್ರತಿನಿಧಿಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್, ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೆದ, ಜಿಪಂ ಸಿಇಒ ರಾಹುಲ್ ಶಿಂಧೆ, ಸವದತ್ತಿ ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗಣ್ಣವರ, ಯರಗಟ್ಟಿ ತಹಸೀಲ್ದಾರ ಎಂ.ಎನ್. ಮಠದ, ಸಿಪಿಐ ಐ.ಎಂ. ಮಠಪತಿ, ತಾಪಂ ಇಒ ಆನಂದ ಬಡಕುಂದ್ರಿ, ಬಿಇಒ ಮೋಹನ ದಂಡಿನ, ಸಿಡಿಪಿಒ ಸುನೀತಾ ಪಾಟೀಲ, ಅಬಕಾರಿ ಸಿಪಿಐ ಶ್ರೀಶೈಲ ಅಕ್ಕಿ, ಪಪಂ ಮುಖ್ಯಾಧಿಕಾರಿ ಡಿ.ಎನ್. ತಹಶೀಲ್ದಾರ, ಸಮಾಜ ಕಲ್ಯಾಣ ಅಧಿಕಾರಿ ಆರ್.ಆರ್. ಕುಲಕರ್ಣಿ, ಪಶುವೈದ್ಯಾಧಿಕಾರಿ ಎಂ.ವಿ. ಪಾಟೀಲ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.