ಸಾರಾಂಶ
ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ ಅವರ ಬೌದ್ಧಿಕ ವಿಕಾಸದಲ್ಲಿ ಗ್ರಂಥಪಾಲಕರು ಮಹತ್ವದ ಪಾತ್ರ ವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ ಅವರ ಬೌದ್ಧಿಕ ವಿಕಾಸದಲ್ಲಿ ಗ್ರಂಥಪಾಲಕರು ಮಹತ್ವದ ಪಾತ್ರ ವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.ನಗರದ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್.ನರಸಾಪೂರ ಕಲಾ ಹಾಗೂ ಎಂ.ಬಿ.ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಗ್ರಂಥಾಲಯ ವಿಜ್ಞಾನ ವಿಭಾಗ ಡಾ.ಎಸ್.ಆರ್.ರಂಗನಾಥ ಜನ್ಮದಿನದ ಅಂಗವಾಗಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯಗ್ರಂಥಪಾಲಕರ ದಿನಾಚರನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜ್ಞಾನದ ಕಣಜವಾಗಿರುವ ಗ್ರಂಥಾಲಯದ ಪರಿಪೂರ್ಣ ಬಳಕೆ ವಿದ್ಯಾರ್ಥಿಗಳು ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಂಥಪಾಲಕರು ಅವಶ್ಯಕ ನೆರವು ಮತ್ತು ಮಾರ್ಗದರ್ಶನ ಮಾಡಬೇಕು. ಗ್ರಂಥಾಲಯ ವಿಜ್ಞಾನಕ್ಕೆಡಾ.ಎಸ್.ಆರ್.ರಂಗನಾಥನ್ ನೀಡಿದಕೊಡುಗೆ ಯನ್ನುವಿದ್ಯಾರ್ಥಿಗಳು ಅರಿತು ಅವರ ವ್ಯಕ್ತಿತ್ವದಿಂದ ಪ್ರೇರಣೆ ಪಡೆಯಬೇಕುಎಂದರು.ಪಠ್ಯ, ಸಾಮಾನ್ಯ ಜ್ಞಾನ, ಸ್ಪರ್ಧಾತ್ಮಕ ಪರೀಕ್ಷೆ,ಇತಿಹಾಸಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪುಸ್ತಕಗಳು ಗ್ರಂಥಾಲಯದಲ್ಲಿ ಲಭ್ಯವಿದ್ದು ವಿದ್ಯಾರ್ಥಿಗಳು ಅವುಗಳ ಸದ್ಬಳಕೆ ಮಾಡಿಕೊಂಡು ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.
ಮಂಜುನಾಥ ಕೋರವಾರ ಪ್ರಾರ್ಥಿಸಿದರು. ಗ್ರಂಥಪಾಲ ಕಡಿ.ಎಚ್.ಬಿರಾದಾರ ಸ್ವಾಗತಿಸಿದರು. ನಾಗರಾಜ ಹಸಬಿ ನಿರೂಪಿಸಿದರು. ಡಾ.ಎಸ್.ಎಸ್.ಹಂಗರಗಿ ವಂದಿಸಿದರು. ಐಕ್ಯೂಎಸಿ ಸಂಯೋಜಕ ಎಚ್.ಎಸ್.ಗಿಡಗಂಟಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಪಾಲ್ಗೊಂಡರು.