ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮ ಹಾಕಿಕೊಳ್ಳಲಾಗುವದು. ಬಡವರ ಪರ ಟ್ರಸ್ಟ್ ಕೆಲಸ ಮಾಡುತ್ತದೆ
ಕುಷ್ಟಗಿ: ಸಂಘಟನೆಗಳು ಸಮಾಜಮುಖಿಯಾಗಿ ಸಮಾಜಕ್ಕೆ ಉಪಯೋಗವಾಗುವ ಉತ್ತಮ ಕಾರ್ಯ ಮಾಡಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ಪಟ್ಟಣದ ಕೃಷ್ಣ ರುಕ್ಮಿಣಿ ಸಭಾ ಮಂಟಪದಲ್ಲಿ ನಡೆದ ಶೋಭಾ ದೇಸಾಯಿ ಮೆಮೋರಿಯಲ್ ಟ್ರಸ್ಟ್ ಉದ್ಘಾಟನೆ ಹಾಗೂ 25 ಜನ ಜನರಿಗೆ ಉಚಿತವಾಗಿ ಕಣ್ಣಿನ ಶಸ್ತ್ರ ಚಿಕಿತ್ಸೆಯ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಇಂದು ಉದ್ಘಾಟಿಸಿದ ಟ್ರಸ್ಟ್ ವತಿಯಿಂದ ಉಚಿತವಾಗಿ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿದ್ದು ಬಹಳ ಒಳ್ಳೆಯ ವಿಚಾರ. ಇಂತಹ ಕಾರ್ಯಕ್ರಮ ಆಯೋಜನೆ ಮಾಡಿರುವುದು ಶ್ಲಾಘನೀಯ ಕಾರ್ಯ ಮನುಷ್ಯನಿಗೆ ಮುಖ್ಯವಾಗಿರುವ ಅಂಗ ಕಣ್ಣುಗಳು ಅವುಗಳನ್ನು ಸುರಕ್ಷಿತವಾಗಿ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಶ್ರೀನಿವಾಸಮೂರ್ತಿ ದೇಸಾಯಿ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮ ಹಾಕಿಕೊಳ್ಳಲಾಗುವದು. ಬಡವರ ಪರ ಟ್ರಸ್ಟ್ ಕೆಲಸ ಮಾಡುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ. ಶರಣಪ್ಪ ವಕೀಲರು, ಬ್ರಾಹ್ಮಣ ಸಮಾಜದ ಅಧ್ಯಕ್ಷ ತಿಮ್ಮಪ್ಪಯ್ಯ ದೇಸಾಯಿ, ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಗೋಪಾಲರಾವ್ ಕುಲಕರ್ಣಿ, ದೊಡ್ಡಬಸವನಗೌಡ ಪಾಟೀಲ ಬಯ್ಯಾಪೂರ, ಸುದೀಪ ಕಾಖಂಡಕಿ, ವಸಂತ ಬನ್ನಿಗೋಳ, ವಿನಯ್ ಜೆ, ವಿಜೇತ, ಪ್ರಾಣೇಶ ಆಚಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಹನಮೇಶ ನಿರೂಪಿಸಿದರು. ಡಾ ಸುಶೀಲಕುಮಾರ ಕಾಖಂಡಕಿ ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಸಿದರು.