ಸಂಘ ಸಂಸ್ಥೆಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಲಿ

| Published : Jul 10 2024, 12:39 AM IST

ಸಾರಾಂಶ

ಶೃಂಗೇರಿ: ಪ್ರತಿಯೊಬ್ಬರ ಮೇಲೆ ಸಮಾಜದ ಋಣವಿದೆ. ಇದರ ಋಣ ತೀರಿಸುವುದು ಪ್ರತಿಯೊಬ್ಬರ ಕರ್ತವ್ಯ. ಸಂಘ ಸಂಸ್ಥೆಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ರೋಟರಿ ಗವರ್ನರ್‌ ಬಿ.ಎಂ.ಭಟ್‌ ಹೇಳಿದರು

ಶೃಂಗೇರಿ: ಪ್ರತಿಯೊಬ್ಬರ ಮೇಲೆ ಸಮಾಜದ ಋಣವಿದೆ. ಇದರ ಋಣ ತೀರಿಸುವುದು ಪ್ರತಿಯೊಬ್ಬರ ಕರ್ತವ್ಯ. ಸಂಘ ಸಂಸ್ಥೆಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ರೋಟರಿ ಗವರ್ನರ್‌ ಬಿ.ಎಂ.ಭಟ್‌ ಹೇಳಿದರು.

ಪಟ್ಟಣದ ರೈತಭವನದಲ್ಲಿ ನಡೆದ ರೋಟರಿ ಕ್ಲಬ್‌ ಹಾಗೂ ಇನ್ನರ್‌ ವ್ಹೀಲ್‌ ಕ್ಷಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ಸಮಾಜ ಸಮಗೇನು ಕೊಟ್ಟಿತು ಎನ್ನುವುದು ಮುಖ್ಯವಲ್ಲ. ಸಮಾಜಕ್ಕೆ ನಾವೇನು ಕೊಡುಗೆ ನೀಡಬಲ್ಲೆವು ಎಂಬುದು ಮುಖ್ಯ. ರೋಟರಿ ಸಂಸ್ಥೆ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ.

ಆರೋಗ್ಯ ಶಿಬಿರ, ಪರಿಸರ, ಕಾನೂನು, ರಕ್ತದಾನ ಶಿಬಿರ ಹೀಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಸಮಾಜ ಸೇವೆ ಮಾಡುವ ಮೂಲಕ ಸಮಾಜಕ್ಕೆ ಮಹತ್ತರ ಕೊಡುಗೆ ನೀಡುತ್ತಿದೆ. ಸಮಾಜ ಸೇವೆಯೇ ರೋಟರಿ ಸಂಸ್ಥೆ ಮುಖ್ಯಗುರಿ ಹಾಗೂ ಉದ್ದೇಶ ಎಂದರು.

ರೋಟರಿ 2024-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೆ.ಸಿ.ನಾಗೇಶ್‌ ಅಧಿಕಾರ ಸ್ವೀಕರಿಸಿದರು. ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಭೋದಿಸಲಾಯಿತು. ಇನ್ನರ್ ವ್ಹೀಲ್‌ ಅಧ್ಯಕ್ಷೆ ಚರಿತಾ ಅಧಿಕಾರ ಸ್ವೀತರಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಟಿ.ಡಿ.ರಾಜೇಗೌಡ, ರೋಟರಿ ಕಾರ್ಯದರ್ಶಿ ಸುರೇಶ್ ಹೆಗ್ಡೆ, ಕೆ.ಸಿ.ಚರಣ್, ಗೌತಮ್, ಸುಧಾ ವೆಂಕಟೇಶ್‌, ಸೌಮ್ಯ ಮತ್ತಿತರರು ಇದ್ದರು.

--

9 ಶ್ರೀ ಚಿತ್ರ 1-ಶೃಂಗೇರಿ ಪಟ್ಟಣದ ರೈತಭವನದಲ್ಲಿ ರೋಟರಿ ಸಂಸ್ಥೆ ಹಾಗೂ ಲಯನ್ಸ್‌ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.