ಸಮಾಜದ ಕಟ್ಟಕಡೆ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಲಿ

| Published : Nov 28 2023, 12:30 AM IST

ಸಮಾಜದ ಕಟ್ಟಕಡೆ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಲಿ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಲಿ ಎಂಬುದೇ ಈ ಕಾರ್ಯಕ್ರಮದ ಉದ್ದೇಶ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು. ತಾಲೂಕಿನ ಧರ್ಮಪುರ ಗ್ರಾಮದ ವಾಸವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ ಹಾಗೂ ಧರ್ಮಪುರ ಗ್ರಾಮ ಪಂಚಾಯ್ತಿಯ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತೆಗೆದುಕೊಂಡು ಹೋಗುವ ಸಿದ್ದರಾಮಯ್ಯನವರ ನೆಚ್ಚಿನ ಕಾರ್ಯಕ್ರಮವಾದ ಜನತಾ ದರ್ಶನ ಕಾರ್ಯಕ್ರಮವನ್ನು ಗ್ರಾಮ ಮಟ್ಟಕ್ಕೂ ತಂದಿದ್ದು ಖುಷಿಯಾಗಿದೆ.

ಹಿರಿಯೂರು ತಾಲೂಕಿನ ಧರ್ಮಪುರ ಗ್ರಾಮದಲ್ಲಿ ನಡೆದ ಜಿಲ್ಲಾಮಟ್ಟದ ಜನತಾ ದರ್ಶನದಲ್ಲಿ ಸಚಿವ ಡಿ ಸುಧಾಕರ್

ಕನ್ನಡಪ್ರಭ ವಾರ್ತೆ ಹಿರಿಯೂರು

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಲಿ ಎಂಬುದೇ ಈ ಕಾರ್ಯಕ್ರಮದ ಉದ್ದೇಶ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.

ತಾಲೂಕಿನ ಧರ್ಮಪುರ ಗ್ರಾಮದ ವಾಸವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ ಹಾಗೂ ಧರ್ಮಪುರ ಗ್ರಾಮ ಪಂಚಾಯ್ತಿಯ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತೆಗೆದುಕೊಂಡು ಹೋಗುವ ಸಿದ್ದರಾಮಯ್ಯನವರ ನೆಚ್ಚಿನ ಕಾರ್ಯಕ್ರಮವಾದ ಜನತಾ ದರ್ಶನ ಕಾರ್ಯಕ್ರಮವನ್ನು ಗ್ರಾಮ ಮಟ್ಟಕ್ಕೂ ತಂದಿದ್ದು ಖುಷಿಯಾಗಿದೆ.

ಬರುವ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ಮಟ್ಟದಲ್ಲೂ ಈ ಕಾರ್ಯಕ್ರಮ ನಡೆಸಲಾಗುತ್ತದೆ. ಜನರ ಅರ್ಜಿಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥಗೊಳಿಸಿ ಸೌಲಭ್ಯ ಒದಗಿಸಲಾಗುವುದು. ಪದವೀಧರ ನಿರುದ್ಯೋಗಿಗಳಿಗೆ ಬರುವ ತಿಂಗಳಿನಿಂದ ಹಣ ಸಂದಾಯ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇನ್ನೆರಡು ತಿಂಗಳಲ್ಲಿ ಪಡಿತರದಾರರಿಗೆ ಹಣದ ಬದಲು ಅಕ್ಕಿ ನೀಡಲು ಪ್ರಯತ್ನ ನಡೆಸಲಾಗಿದೆ. ನಮ್ಮ ಸರ್ಕಾರದ ವತಿಯಿಂದ ಈಗಾಗಲೇ ಸಾಕಷ್ಟು ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಜನರ ಪ್ರೀತಿ, ವಿಶ್ವಾಸವನ್ನು ಗಳಿಸಿದ್ದೇವೆ ಎಂದರೆ.

ಕಾಂಗ್ರೆಸ್ ಸರ್ಕಾರ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ ಅಗತ್ಯ ಸೌಲಭ್ಯ ಒದಗಿಸಬಲ್ಲದು. ಈ ಕಾರ್ಯಕ್ರಮದ ಮೂಲಕ ಜನರು ಕಚೇರಿಗೆ ಅಲೆಯುವುದನ್ನು ತಪ್ಪಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಇಂತಹ ಕಾರ್ಯಕ್ರಮಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ದಿವ್ಯಾಪ್ರಭು ಮಾತನಾಡಿ, ಸರ್ಕಾರದ ಮಹತ್ವದ ಯೋಜನೆ ಇದಾಗಿದ್ದು, ನಮ್ಮ ಸರ್ಕಾರ ಜನಸಾಮಾನ್ಯರಿಗೆ ಅನುಕೂಲ ಆಗುವ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಜನರ ಕುಂದುಕೊರತೆಗಳನ್ನು ಅವರ ಮನೆಬಾಗಿಲಿಗೆ ಹೋಗಿ ಪರಿಹರಿಸುವ ಈ ಕಾರ್ಯಕ್ರಮ ವಿಭಿನ್ನವಾದುದು. ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಗ್ರಾಮ ಮಟ್ಟಕ್ಕೆ ತಂದ ಸಚಿವರ ಜನಪರ ಕಾಳಜಿ ಮೆಚ್ಚುವಂತದ್ದು. ಈಗಾಗಲೇ ವಿವಿಧ ಇಲಾಖೆಗಳಲ್ಲಿ ಗುರಿ ನಿಗದಿಪಡಿಸಿಕೊಂಡು ಅವುಗಳನ್ನು ಸಾಧಿಸಲಾಗಿದೆ. ಜನರ ಸಮಸ್ಯೆಗಳನ್ನು ನಿಗದಿತ ಸಮಯದೊಳಗೆ ಪರಿಹರಿಸಲಾಗುವುದು.

ಇದೀಗ ಜಿಲ್ಲೆಯಲ್ಲಿ ಹೊಸದುರ್ಗ, ಚಿತ್ರದುರ್ಗ ಹಾಗೂ ಹಿರಿಯೂರಿನಲ್ಲಿ ಎರಡು ಸೇರಿದಂತೆ ನಾಲ್ಕು ಜನತಾ ದರ್ಶನ ಕಾರ್ಯಕ್ರಮಗಳನ್ನು ಮಾಡಲಾಗಿದೆ.871 ಅರ್ಜಿಗಳು ಬಂದಿದ್ದು 730 ಕ್ಕೂ ಹೆಚ್ಚು ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದೆ. ಈ ದಿನ ನೀವು ನೀಡುವ ಪ್ರತಿ ಅರ್ಜಿಯು ಗಣಕೀಕೃತವಾಗುತ್ತದೆ. ಎಷ್ಟು ಅರ್ಜಿ ಬಂದಿವೆ ಎಂಬ ಮಾಹಿತಿ ಇದ್ದು ಅವುಗಳ ವಿಲೇಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ತಹಸೀಲ್ದಾರ್ ರಾಜೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಯೋಜನಾ ನಿರ್ದೇಶಕ ರಂಗಸ್ವಾಮಿ, ಉಪ ವಿಭಾಗಾಧಿಕಾರಿ ಕಾರ್ತಿಕ್, ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ, ಇಓ ಸತೀಶ್ ಕುಮಾರ್, ಡಿವೈಎಸ್‌ಪಿ ಚೈತ್ರಾ, ಧರ್ಮಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಜ್ಯೋತಿ ಹನುಮಂತರಾಯಪ್ಪ, ಉಪಾಧ್ಯಕ್ಷೆ ಲಕ್ಷ್ಮೀದೇವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈರಲಿಂಗೇಗೌಡ, ಖಾದಿ ರಮೇಶ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

------------------------

137 ಫಲಾನುಭವಿಗಳಿಗೆ ಆದೇಶ ಪತ್ರ

ಸಂಧ್ಯಾ ಸುರಕ್ಷಾ 20, ಮನಸ್ವಿನಿ 2, ವಿಧವಾ ವೇತನ 2, ಇಂದಿರಾಗಾಂಧಿ ವೃದ್ಧಾಪ್ಯ ವೇತನ 10, ರಾಷ್ಟ್ರೀಯ ಕುಟುಂಬಸಹಾಯ ಧನ 3, 94ಸಿ ಯೋಜನೆಯಡಿ ಮನೆ ನಿವೇಶನ ಹಕ್ಕುಪತ್ರ ಫಲಾನುಭವಿಗಳು 3, ಪಶುಪಾಲನಾ ಇಲಾಖೆಯಿಂದ ಮೇವಿನ ಬೀಜದ ಮಿನಿ ಕಿಟ್ ವಿತರಣೆ 10, ಬಸವ ವಸತಿ ಯೋಜನೆಯಡಿ ಸಹಾಯ ಧನ ಚೆಕ್‌ಗಳ ವಿತರಣೆ 15, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯ ಕಾರ್ಯಾದೇಶ 10, ಕೃಷಿ ಇಲಾಖೆಯಿಂದ ಸ್ಪಿoಕ್ಲರ್ ಸೆಟ್ ವಿತರಣೆ 30, ಕೃಷಿ ಇಲಾಖೆಯಿಂದ ಉಚಿತ ಮೇವಿನ ಕಿಟ್ 10, ಪಿಎಂಕೆಎಸ್‌ವೈಡಬ್ಲ್ಯೂಡಿಸಿ 2.0 ಯೋಜನೆಯಡಿ ಪರಿಕರಗಳ ವಿತರಣೆ 4, ಶಿಶು ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮದ 10 ಸೇರಿದಂತೆ ಒಟ್ಟು 137 ಫಲಾನುಭವಿಗಳಿಗೆ ಆದೇಶ ಪತ್ರ ನೀಡಲಾಯಿತು.