ಸಾರಾಂಶ
ದಾಬಸ್‍ಪೇಟೆ: ಕಳೆದ ಎರಡೂವರೆ ವರ್ಷದ ನಮ್ಮ ಸರ್ಕಾರದ ಸಾಧನೆಗಳನ್ನು ಹಾಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾರ್ಯಗಳ ಬಗ್ಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಯೊಂದು ಮನೆಗೆ ತಿಳಿಸಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳಬೇಕು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ತ್ಯಾಮಗೊಂಡ್ಲು ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಪಂಚಾಯಿತಿ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ ನಮ್ಮ ಸರ್ಕಾರದ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುವುದರ ಜೊತೆಗೆ ಪಂಚ ಗ್ಯಾರಂಟಿಗಳು ಪ್ರತಿಯೊಬ್ಬರಿಗೂ ತಲುಪಿ ಸದುಪಯೋಗಪಡಿಸಿಕೊಳ್ಳುವ ಕೆಲಸವಾಗುತ್ತಿದೆ. ಆದರೆ ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಾ ಸಾರ್ವಜನಿಕರಲ್ಲಿ ತಪ್ಪು ಭಾವನೆ ಮೂಡಿಸುತ್ತಿದ್ದು, ನಮ್ಮ ಮುಖಂಡರುಗಳು ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಆಗುವ ಉಪಯೋಗದ ಬಗ್ಗೆ ವಿರೋಧಿಸುವವರಿಗೆ ತಕ್ಕ ಉತ್ತರ ನೀಡುವ ಕೆಲಸ ಮಾಡಬೇಕು ಎಂದರು.
ಈಗಾಗಲೇ ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮೀ, ಶಕ್ತಿಯೋಜನೆ, ಅನ್ನಭಾಗ್ಯ, ಯುವನಿಧಿ ಯೋಜನೆಗಳ ಸದುಪಯೋಗವನ್ನು ಕ್ಷೇತ್ರದ ಜನತೆ ಪಡೆಯುತ್ತಿದ್ದು, ಯಾವ ಫಲಾನುಭವಿಗಳು ಈ ಯೋಜನೆಗಳಿಂದ ವಂಚಿತರಾಗಿದ್ದರೆ ಅಂತಹವರನ್ನು ಗ್ಯಾರಂಟಿ ಯೋಜನೆಯ ಸಮಿತಿ ಅಧ್ಯಕ್ಷರು, ಸದಸ್ಯರುಗಳು ಪತ್ತೆಹಚ್ಚಿ ಯೋಜನೆಗಳು ತಲುಪುವಂತೆ ಮಾಡಬೇಕು ಎಂದರು.ಸಂಘಟನೆಗೆ ಒತ್ತು ನೀಡಿ : ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಸಾರಥ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಸದೃಡವಾಗಿ ಸಂಘಟನೆಯಾಗುತ್ತಿದೆ ಅದರಂತೆ ನಮ್ಮ ಕ್ಷೇತ್ರದಲ್ಲೂ ಎಲ್ಲಾ ಬ್ಲಾಕ್ ಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದು, ಮುಖಂಡರು, ಕಾರ್ಯಕರ್ತರುಗಳು ಹೆಚ್ಚು ಹೆಚ್ಚು ಸದಸ್ಯತ್ವ ಮಾಡಿಸಿ ಕಾಂಗ್ರೇಸ್ ಪಕ್ಷವನ್ನು ಬಲಗೊಳಿಸಿ ಎಂದರು.
ತ್ಯಾಮಗೊಂಡ್ಲು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹಾಗೂ ವಕೀಲ ಹನುಮಂತೇಗೌಡ್ರು ಮಾತನಾಡಿ ನಮ್ಮ ಹೋಬಳಿಯಲ್ಲಿ ಕಾಂಗ್ರೇಸ್ ಪಕ್ಷದ ಸದಸ್ಯತ್ವಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುತ್ತದೆ. ಪಕ್ಷ ಹಾಗೂ ನಮ್ಮ ಶಾಸಕರು ನೀಡಿರುವ ಜವಾಬ್ದಾರಿಯನ್ನು ಎಲ್ಲಾ ಮುಖಂಡರ ಜೊತೆಗೂಡಿ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ. ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಲು ಶ್ರಮಿಸುತ್ತೇನೆ ಎಂದರು.ಈ ಸಂದರ್ಭದಲ್ಲಿ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಗ್ರಾ.ಪಂ.ಅಧ್ಯಕ್ಷೆ ಉಮಾಹರೀಶ್, ಉಪಾಧ್ಯಕ್ಷ ವಾಸುದೇವ್, ಬ್ಲಾಕ್ ಮಾಜಿ ಅಧ್ಯಕ್ಷ ಜಗದೀಶ್, ನೆಲಮಂಗಲ ಟೌನ್ ಅಧ್ಯಕ್ಷ ಪ್ರದೀಪ್, ಮುಖಂಡರಾದ ಹೊನ್ನಸಿದ್ದಪ್ಪ, ಸಾಧೀಕ್, ಪ್ರಕಾಶ್ ಬಾಬು, ಪ್ರದೀಪ್ ಮತ್ತೀತ್ತರಿದ್ದರು.
ಪೋಟೋ 2 : ತ್ಯಾಮಗೊಂಡ್ಲು ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಪಂಚಾಯಿತಿ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯನ್ನು ಶಾಸಕ ಎನ್.ಶ್ರೀನಿವಾಸ್ ಉದ್ಘಾಟಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))