ಪಿಂಜಾರ-ನದಾಫ್ ಸಮುದಾಯ ಮುಖ್ಯವಾಹಿನಿಗೆ ಬರಲಿ: ಶಾಸಕಿ ಕರೆಮ್ಮ ಜಿ.ನಾಯಕ

| Published : Oct 01 2024, 01:17 AM IST

ಪಿಂಜಾರ-ನದಾಫ್ ಸಮುದಾಯ ಮುಖ್ಯವಾಹಿನಿಗೆ ಬರಲಿ: ಶಾಸಕಿ ಕರೆಮ್ಮ ಜಿ.ನಾಯಕ
Share this Article
  • FB
  • TW
  • Linkdin
  • Email

ಸಾರಾಂಶ

ನದಾಫ್-ಪಿಂಜಾರ ಅಭಿವೃದ್ಧಿ ನಿಗಮದ ಬೇಡಿಕೆ ಬಹುದಿನಗಳಿಂದ ಕೇಳಿಬರುತ್ತಿದ್ದು, ಸರ್ಕಾರ ಮಟ್ಟದಲ್ಲಿ ಸಮುದಾಯದ ಅಭಿವೃದ್ಧಿಗೆ, ನಿಗಮ ರಚನೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು

ಕನ್ನಡಪ್ರಭ ವಾರ್ತೆ ದೇವದುರ್ಗ

ರಾಜ್ಯದಲ್ಲಿ ಪಿಂಜಾರ-ನದಾಫ್ ಸಮುದಾಯ ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ಸಮುದಾಯಗಳ ಜೊತೆಗೆ ಪ್ರೀತಿ-ವಿಶ್ವಾಸದಿಂದ ಬಾಳಿರುವ ಇತಿಹಾಸವಿದೆ. ಈ ಸಮುದಾಯ ಮೂಲಭೂತ ಸೌಕರ್ಯಗಳಿಂದ ವಂಚಿತಗೊಂಡಿದ್ದು, ಸರ್ಕಾರ ವಿಶೇಷ ಸವಲತ್ತು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕೆಂದು ಶಾಸಕಿ ಕರೆಮ್ಮ ಜಿ.ನಾಯಕ ತಿಳಿಸಿದರು.

ಪಟ್ಟಣದ ಬಿ.ಎಚ್.ಕಲ್ಯಾಣಮಂಟಪದಲ್ಲಿ ನದಾಫ್-ಪಿಂಜಾರ ಸಂಘದಿಂದ ಆಯೋಜಿಸಿದ್ದ ಪದಾಧಿಕಾರಿಗಳ ಪದಗ್ರಹಣ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಸಾಧಕರಿಗೆ, ಪದಾಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನದಾಫ್-ಪಿಂಜಾರ ಅಭಿವೃದ್ಧಿ ನಿಗಮದ ಬೇಡಿಕೆ ಬಹುದಿನಗಳಿಂದ ಕೇಳಿಬರುತ್ತಿದ್ದು, ಸರ್ಕಾರ ಮಟ್ಟದಲ್ಲಿ ಸಮುದಾಯದ ಅಭಿವೃದ್ಧಿಗೆ, ನಿಗಮ ರಚನೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು ಎಂದರು.

ಕಾರ್ಯಕ್ರಮ ಉದ್ದೇಶಿಸಿ ಮಾಜಿ ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ್ ಇಟಗಿ, ಎಪಿಎಂಸಿ ಅಧ್ಯಕ್ಷ ಆದನಗೌಡ ಪಾಟೀಲ್ ಬುಂಕಲದೊಡ್ಡಿ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜಶೇಖರ ವಿ.ನಾಯಕ, ಮುಖಂಡರಾದ ರವಿ ಬೋಸರಾಜು ಮಾತನಾಡಿದರು.

ಸಂಘದ ರಾಜ್ಯಾಧ್ಯಕ್ಷ ಎಚ್.ಖಲೀಲಸಾಬ್ ಅಧ್ಯಕ್ಷತೆ ವಹಿಸಿದ್ದರು. ಲಾಲ್ಹುಸೇನ್ ಕಂದಗಲ್ ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಶರಣಗೌಡ ಮಾ.ಪಾಟೀಲ್ ಮದರಕಲ್, ಪಿಕಾರ್ಡ್‌ ಬ್ಯಾಂಕ್ ಅಧ್ಯಕ್ಷ ಮಲ್ಲನಗೌಡ ಗುಂಡಗುರ್ತಿ, ಎಪಿಎಂಸಿ ಉಪಾಧ್ಯಕ್ಷ ಅಬ್ದುಲ್ ಅಜೀಜ್, ತಾಲೂಕು ಬಿಜೆಪಿ ಅಧ್ಯಕ್ಷ ಜಂಬಣ್ಣ ನಿಲೋಗಲ್, ಪಿಂಜಾರ ಸಮಾಜದ ಜಿಲ್ಲಾ ಅಧ್ಯಕ್ಷ ಮೌಲಾಸಾಬ್ ಗಣದಿನ್ನಿ, ಮಹಬೂಬಸಾಬ್ ಸಾಹುಕಾರ ಮಳ್ಳೂರ, ಖಾಸೀಂಸಾಬ್ ನಿಲವಂಜಿ ಹಾಗೂ ಇತರರು ಉಪಸ್ಥಿತರಿದ್ದರು.