ರಾಷ್ಟ್ರೀಯ ಹಬ್ಬಗಳಲ್ಲಿ ಸಾರ್ವಜನಿಕರೂ ಹೆಚ್ಚಾಗಿ ಪಾಲ್ಗೊಳ್ಳಲಿ

| Published : Aug 15 2024, 02:01 AM IST

ರಾಷ್ಟ್ರೀಯ ಹಬ್ಬಗಳಲ್ಲಿ ಸಾರ್ವಜನಿಕರೂ ಹೆಚ್ಚಾಗಿ ಪಾಲ್ಗೊಳ್ಳಲಿ
Share this Article
  • FB
  • TW
  • Linkdin
  • Email

ಸಾರಾಂಶ

ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣೆಗಳಲ್ಲಿ ಕೇವಲ ಶಾಲಾ ಮಕ್ಕಳು ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮಾತ್ರ ಭಾಗವಹಿಸುತ್ತಿದ್ದಾರೆ. ಸಾರ್ವಜನಿಕರ ಭಾಗವಹಿಸುವಿಕೆ ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರೂ ತಮ್ಮ ಕರ್ತವ್ಯ ಎಂದು ಭಾವಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಲ್ಲಿ ಇಂಥ ಹಬ್ಬಗಳ ಆಚರಣೆಗೆ ಹೆಚ್ಚಿನ ಮೆರಗು, ಅರ್ಥ ಬರುತ್ತದೆ ಎಂದು ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಹೇಳಿದ್ದಾರೆ.

- ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಚಾಲನೆ ನೀಡಿ ಎಸಿ ಅಭಿಷೇಕ್‌ ಮನವಿ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ

ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣೆಗಳಲ್ಲಿ ಕೇವಲ ಶಾಲಾ ಮಕ್ಕಳು ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮಾತ್ರ ಭಾಗವಹಿಸುತ್ತಿದ್ದಾರೆ. ಸಾರ್ವಜನಿಕರ ಭಾಗವಹಿಸುವಿಕೆ ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರೂ ತಮ್ಮ ಕರ್ತವ್ಯ ಎಂದು ಭಾವಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಲ್ಲಿ ಇಂಥ ಹಬ್ಬಗಳ ಆಚರಣೆಗೆ ಹೆಚ್ಚಿನ ಮೆರಗು, ಅರ್ಥ ಬರುತ್ತದೆ ಎಂದು ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಹೇಳಿದರು.

ಬುಧವಾರ ಬೆಳಗ್ಗೆ 11 ಗಂಟೆಗೆ ಪಟ್ಟಣದ ಪುರಸಭೆ ಆವರಣದಲ್ಲಿ ತಾಲೂಕು ಅಡಳಿತ ವತಿಯಿಂದ ಹಮ್ಮಿಕೊಂಡಿದ್ದ ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನ ಮತ್ತು ಭವಿಷ್ಯದ ಪೀಳಿಗೆಯವರಿಗೆ ನಮ್ಮ ಪೂರ್ವಿಕರು ದೇಶದ ಸ್ವಾತಂತ್ರ್ಯಕ್ಕಾಗಿ ಮಾಡಿದ ತ್ಯಾಗ, ಬಲಿದಾನ, ಹೋರಾಟಗಳ ಬಗ್ಗೆ ನಾವುಗಳು ಜನಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಆಗಸ್ಟ್ 15ರಂದು ಆಚರಿಸಲಾಗುತ್ತಿರುವ ಭಾರತ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಎಲ್ಲರ ಮನೆಗಳ ಮೇಲೆ ತಿರಂಗಾ ಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮ ಹಾಗೂ ದೇಶಭಕ್ತಿ ಮೆರೆಯಬೇಕು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಟಿ.ಲೀಲಾವತಿ ಮಾತನಾಡಿ, ಎಲ್ಲ ಭಾರತೀಯರಿಗೆ ದೇಶದ ಸ್ವಾತಂತ್ರ್ಯ ಆಚರಣೆ ಕೂಡ ಒಂದು ಪವಿತ್ರ ಹಬ್ಬವಾಗಿದೆ. ಇದನ್ನು ಎಲ್ಲರೂ ಅತ್ಯಂತ ಸಂತಸ, ಸಂಭ್ರಮದಿಂದ ಆಚರಿಸೋಣ ಎಂದು ಹೇಳಿದರು.

ತಹಸೀಲ್ದಾರ್ ಪಟ್ಟರಾಜ ಗೌಡ ಮಾತನಾಡಿದರು. ಪೊಲೀಸ್ ಇನ್‌ಸ್ಪೆಕ್ಟರ್‌ ಸುನೀಲ್ ಕುಮಾರ್, ಗ್ರೇಡ್ -2 ತಹಸೀಲ್ದಾರ್ ಸುರೇಶ್, ತಾಲೂಕುಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಪುರಸಭೆ ಸಿಬ್ಬಂದಿ, ಕನ್ನಡಪರ ಸಂಘಟನೆಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ರಾಷ್ಟ್ರದ ತ್ರಿವರ್ಣ ಧ್ವಜಗಳನ್ನು ವಾಹನಗಳಿಗೆ ಕಟ್ಟಿಕೊಂಡು ಪುರಸಭೆ ಆವರಣದಿಂದ ಬೈಕ್‌ ರ್ಯಾಲಿ ನಡೆಸಿದರು. ವಿವಿಧ ಮಾರ್ಗಗಳಲ್ಲಿ ಸಾಗಿದ ರ್ಯಾಲಿಯು ದುರ್ಗಿಗುಡಿ ಸರ್ಕಲ್ ಅಲ್ಲಿಂದ ಪುನಃ ಪುರಸಭೆ ಆವರಣಕ್ಕೆ ಬಂದು ಸಂಪನ್ನಗೊಂಡಿತು. ಮೆರವಣಿಗೆಯಲ್ಲಿ ಭಾರತ್ ಮಾತಾಕಿ ಜೈ ಎಂಬ ಜೈಕಾರ ಮೊಳಗಿತು.

- - - -14ಎಚ್.ಎಲ್.ಐ1:

ಹೊನ್ನಾಳಿ ಪಟ್ಟಣದ ಪುರಸಭೆ ಆವರಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಚಾರಣೆ ಮಹತ್ವ ಸಾರುವ ಬೈಕ್ ರ್ಯಾಲಿಗೆ ಉಪವಿಭಾಗಾಧಿಕಾರಿ ಚಾಲನೆ ನೀಡಿದರು. ತಹಸೀಲ್ದಾರ್ ಪಟ್ಟರಾಜ ಗೌಡ, ಪುರಸಭೆ ಮುಖ್ಯಾಧಿಕಾರಿ ಟಿ.ಲೀಲಾವತಿ, ಇತರರು ಪಾಲ್ಗೊಂಡರು.