ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಲಿ

| Published : Dec 04 2024, 12:34 AM IST

ಸಾರಾಂಶ

ವಿಶೇಷಚೇತನರು ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಸಾರ್ವಜನಿಕ ಆಸ್ಪತ್ರೆ ಅಡಳಿತಾಧಿಕಾರಿ ಡಾ. ಟಿ.ಎಂ. ದೇವರಾಜ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ತರೀಕೆರೆ

ವಿಶೇಷಚೇತನರು ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಸಾರ್ವಜನಿಕ ಆಸ್ಪತ್ರೆ ಅಡಳಿತಾಧಿಕಾರಿ ಡಾ. ಟಿ.ಎಂ. ದೇವರಾಜ್ ಹೇಳಿದ್ದಾರೆ.

ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಚಿಕ್ಕಮಗಳೂರು, ತಾಲೂಕು ಅಡಳಿತ, ತಾಲೂಕು ಪಂಚಾಯಿತಿ ತರೀಕೆರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ತಾಲೂಕು ಎಂ.ಆರ್.ಡಬ್ಯೂ.ಯು.ಆರ್, ಡಬ್ಲ್ಯೂ .ವಿ.ಆರ್..ಡಬ್ಲ್ಯೂ ಅವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆ ಅಂಗವಾಗಿ ಏರ್ಪಾಡಾಗಿದ್ದ ವಿಶೇಷ ಚೇತನರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಶ್ವಚೇತನರು ತಮ್ಮಲ್ಲಿರುವ ನ್ಯೂನತೆಗಳಿಂದ, ಸಮಸ್ಯೆಗಳಿಂದ ಕುಗ್ಗಬಾರದು. ಸರ್ಕಾರ ಹಾಗೂ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಪ್ರಶಾಂತ್ ಮಾತನಾಡಿ, ಸರ್ಕಾರದಿಂದ ಸಿಗುವ ಸೌಲಭ್ಯಗಳು ವಿಶೇಷ ಚೇತನರಿಗೆ ತಲುಪುವಂತೆ ಮಾಡಲು ಯು.ಆರ್..ಡಬ್ಲ್ಯೂ.ವಿ.ಆರ್.ಡಬ್ಲ್ಯೂಗಳ ಪಾತ್ರ ಮುಖ್ಯವಾಗಿದೆ ಎಂದು ವಿವರಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ಜಿ. ಚಂದ್ರಶೇಖರ್ ಮಾತನಾಡಿ, ವಿಶೇಷ ಚೇತನರು ನಿಯಮಿತ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು. ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಪಡೆಯಬಹುದು ಎಂದು ಅವರು ಹೇಳಿದರು.

ತಾಲೂಕು ವಿಕಲಚೇತನರ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಅಕ್ರಂಬಾಷ ಮಾತನಾಡಿ, ಸರ್ಕಾರ ಹಾಗೂ ಜಿಲ್ಲಾ ವಿಕಲಚೇತನರ ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮತ್ತು ಪೋಷಕರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಜವಾಬ್ದಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

ಶಿಶು ಅಭಿವೃದ್ದಿ ಯೋಜನಾಧಿಕಾರಿ ಚರಣ್ ರಾಜ್, ಡಿ.ಡಿ.ಆರ್.ಸಿ.ಕಿರಣ್, ಯು.ಆರ್..ಡಬ್ಲ್ಯೂ ಗಳು,.ವಿ.ಆರ್..ಡಬ್ಲ್ಯೂಗಳು, ಜೆ.ಎ.ಆರ್.ಟಿ. ಶಿಕ್ಷಕರು, ಆರೋಗ್ಯ ಇಲಾಖೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.