ವಿಶೇಷಚೇತನರಿಗೆ ಅಗತ್ಯ ಸೌಲಭ್ಯ ದೊರೆಯಲಿ

| Published : Nov 16 2024, 12:31 AM IST

ಸಾರಾಂಶ

ಹೊಸಕೋಟೆ: ವಿಶೇಷಚೇತನರಿಗೆ ಸಮಾಜದಲ್ಲಿ ಸಮಾನತೆಯಿಂದ ಬದುಕುವ ಅವಕಾಶವನ್ನು ಒದಗಿಸುವ ದೃಷ್ಟಿಯಿಂದ ಅವರಿಗೆ ಪಕ್ಷಾತೀತವಾಗಿ ಅಗತ್ಯ ಸೌಲಭ್ಯಗಳು ದೊರಕುವಂತಾಗಬೇಕು ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಹೊಸಕೋಟೆ: ವಿಶೇಷಚೇತನರಿಗೆ ಸಮಾಜದಲ್ಲಿ ಸಮಾನತೆಯಿಂದ ಬದುಕುವ ಅವಕಾಶವನ್ನು ಒದಗಿಸುವ ದೃಷ್ಟಿಯಿಂದ ಅವರಿಗೆ ಪಕ್ಷಾತೀತವಾಗಿ ಅಗತ್ಯ ಸೌಲಭ್ಯಗಳು ದೊರಕುವಂತಾಗಬೇಕು ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ನಗರದ ಅಂಬೇಡ್ಕರ್ ಭವನದ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯರ ವಿಶೇಷ ಅನುದಾನದಲ್ಲಿ 22 ಮಂದಿ ವಿಶೇಷಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು.

ದಿವಾಳಿಯತ್ತ ರಾಜ್ಯ:ರಾಜ್ಯದಲ್ಲಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಈ ಭಾಗಕ್ಕೆ ನೀರಾವರಿ ಯೋಜನೆಗಳನ್ನು ಮಂಜೂರು ಮಾಡಿಸಿ, ಕೃಷಿಯನ್ನೇ ಅವಲಂಬಿಸಿ ಬದುಕುತ್ತಿರುವ ಕುಟುಂಬಗಳ ಆರ್ಥಿಕ ಪ್ರಗತಿಗೆ ಪೂರಕ ವಾತಾವರಣ ನಿರ್ಮಿಸುವ ಕಾರ್ಯ ಮಾಡಿದ್ದೆ. ಆದರೆ ಈ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಉಚಿತ ಯೋಜನೆಗಳನ್ನು ಜಾರಿಗೆ ತಂದು ರಾಜ್ಯವನ್ನು ದಿವಾಳಿ ಅಂಚಿನಲ್ಲಿ ತಂದು ನಿಲ್ಲಿಸಿದ್ದಾರೆ ಎಂದರು.ಮೂರೂ ಕ್ಷೇತ್ರಗಳಲ್ಲೂ ಎನ್‌ಡಿಎ ಗೆಲುವು: ರಾಜ್ಯದ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ, ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಪ್ರಮುಖವಾಗಿ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ, ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಆಶಾ ರಾಜಶೇಖರ್, ಉಪಾಧ್ಯಕ್ಷ ಸಿಪಿಎನ್ ನವೀನ್, ಸದಸ್ಯರಾದ ಕವಿತಾ ಗಂಗರಾಜ್, ಶೋಭಾ ಶಿವಾನಂದ್, ವೆಂಕಟೇಶ್, ಸೋಮಶೇಖರ್, ಟೌನ್ ಬ್ಯಾಂಕ್ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ನಾಗರಾಜ್ ನಿರ್ದೇಶಕರಾದ ರಾಜಶೇಖರ್, ಜೀನತ್ ಉನ್ನಿಸ್ಸಾ, ಹಿರಿಯ ಮುಖಂಡರಾದ ಕೆಂಪಣ್ಣ, ನೆಲವಾಗಿಲು ವಕೀಲ ಮಂಜುನಾಥ್, ಹಾಗೂ ಇನ್ನೂ ಹಲವು ಮುಖಂಡರು ಹಾಜರಿದ್ದರು.

ಫೋಟೋ: 14 ಹೆಚ್‌ಎಸ್‌ಕೆ 4

ಹೊಸಕೋಟೆಯಲ್ಲಿ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ವಿಶೇಷ ಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ವಿತರಿಸಿದರು.