ಚಟ್ಟನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಶಿಕ್ಷಣ ಇಲಾಖೆಯ ವಿವೇಕ ಯೋಜನೆ ವತಿಯಿಂದ 13.90 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿದ್ದ ಹೆಚ್ಚುವರಿ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿದ್ದ ಬಿಸಿ ನಾಗೇಶ್ ಅವರು ತಾಲೂಕಿಗೆ ವಿವೇಕ ಯೋಜನೆ ವತಿಯಿಂದ 20ಕ್ಕೂ ಹೆಚ್ಚು ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದ್ದರು ಇದರಿಂದ ಶೈಕ್ಷಣಿಕವಾಗಿ ತಾಲೂಕಿಗೆ ಹೆಚ್ಚಿನ ಅನುಕೂಲವಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಬಾಗೂರುಇತ್ತೀಚಿನ ದಿನಗಳಲ್ಲಿ ಶಿಕ್ಷಣ ಖಾಸಗಿಕರಣವಾಗುತ್ತಿದ್ದು, ಬಡಮಕ್ಕಳು ಶಿಕ್ಷಣದಿಂದ ವಂಚಿತರಾಗುವುದನ್ನು ತಡೆಗಟ್ಟುವ ದೃಷ್ಟಿಯಿಂದ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಸಿ ಎನ್ ಬಾಲಕೃಷ್ಣ ಒತ್ತಾಯ ಮಾಡಿದರು. ಹೋಬಳಿಯ ಚಟ್ಟನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಶಿಕ್ಷಣ ಇಲಾಖೆಯ ವಿವೇಕ ಯೋಜನೆ ವತಿಯಿಂದ 13.90 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿದ್ದ ಹೆಚ್ಚುವರಿ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿದ್ದ ಬಿಸಿ ನಾಗೇಶ್ ಅವರು ತಾಲೂಕಿಗೆ ವಿವೇಕ ಯೋಜನೆ ವತಿಯಿಂದ 20ಕ್ಕೂ ಹೆಚ್ಚು ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದ್ದರು ಇದರಿಂದ ಶೈಕ್ಷಣಿಕವಾಗಿ ತಾಲೂಕಿಗೆ ಹೆಚ್ಚಿನ ಅನುಕೂಲವಾಗಿದೆ ಎಂದರು.ಪ್ರಸ್ತುತ ರಾಜ್ಯ ಸರ್ಕಾರದ ಶಿಕ್ಷಣ ಸಚಿವರಾಗಿರುವ ಮಧು ಬಂಗಾರಪ್ಪ ನವರು ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರುವ ದೃಷ್ಟಿಯಿಂದ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತಮ್ಮ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದರು. ಜಿಲ್ಲೆಯ ಹಾಗೂ ತಾಲೂಕಿನ ಗಡಿ ಭಾಗವಾಗಿರುವ ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಚಟ್ಟನಹಳ್ಳಿ ಗ್ರಾಮ ಇರುವುದರಿಂದ ಈ ಭಾಗದ ಅಭಿವೃದ್ಧಿ ದೃಷ್ಟಿಯಿಂದ ರಸ್ತೆ ಕುಡಿಯುವ ನೀರು ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ನಾಗೇಂದ್ರ, ಉಪಾಧ್ಯಕ್ಷ ಕೆ ಎ ಸತೀಶ್, ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಕೆ ಟಿ ನಟೇಶ್. ಬಿಒ ದೀಪ, ಬಿಆರ್‌ಸಿ ಅನಿಲ್, ಮುಖಂಡರಾದ ಅಣತಿ ವೆಂಕಟೇಶ್, ಎನ್‌ಬಿ ನಾಗರಾಜ್, ರವಿಶಂಕರ್, ನ್ಯಾಯಬೆಲೆ ಅಂಗಡಿ ಶಿವಣ್ಣ, ಕೃಷಿ ಪತ್ತಿನ ನಿರ್ದೇಶಕ ನಟೇಶ್, ದೊರೆಸ್ವಾಮಿ, ಕುಳ್ಳೇಗೌಡ, ಬೋರೇಗೌಡ, ಪುಟ್ಟಸ್ವಾಮಿ, ಹುಲಿಕೆರೆ ಸಂಪತ್ ಕುಮಾರ್, ಸಿಜೆ ಕುಮಾರ್, ಬಿಸಿ ವಸಂತ, ಚೆನ್ನನಹಳ್ಳಿ ಧನಂಜಯ್, ಎಸ್‌ಡಿಎಂಸಿ ಅಧ್ಯಕ್ಷ ಶಂಕ್ರಪ್ಪ, ಪಿಡಿಒ ಶ್ರೀಧರ್, ಸಿಆರ್‌ಪಿ ಹೇಮಲತಾ, ಶಿಕ್ಷಕ ಕುಮಾರಸ್ವಾಮಿ, ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕರು ಎಸ್ ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.