ಸಾರಾಂಶ
ಆ.1ರಂದು ಸರ್ವೋಚ್ಛ ನ್ಯಾಯಾಲಯದ ಏಳು ನ್ಯಾಯಮೂರ್ತಿಗಳ ಪೂರ್ಣಪೀಠವು ಎಸ್‌ಸಿ/ಎಸ್‌ಟಿ ಮೀಸಲಾತಿಯಲ್ಲಿ ಒಳಮೀಸಲಾತಿ ನೀಡುವುದು ರಾಜ್ಯ ಸರ್ಕಾರಕ್ಕೆ ಹಕ್ಕಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಕರ್ನಾಟಕ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಹಾಗೂ ಮಾದಿಗ ದಂಡೋರ ಸಮಿತಿ, ದಲಿತ ಸಂಘರ್ಷ ಸಮಿತಿಗಳು, ಮೀಸಲಾತಿ ಹೋರಾಟಗಾರರು ಡಿಸಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
- ವಿವಿಧ ಸಂಘಟನೆಗಳ ಮುಖಂಡರಿಂದ ಡಿಸಿಗೆ ಮನವಿ- - - ಕನ್ನಡಪ್ರಭ ವಾರ್ತೆ ದಾವಣಗೆರೆ ಆ.1ರಂದು ಸರ್ವೋಚ್ಛ ನ್ಯಾಯಾಲಯದ ಏಳು ನ್ಯಾಯಮೂರ್ತಿಗಳ ಪೂರ್ಣಪೀಠವು ಎಸ್‌ಸಿ/ಎಸ್‌ಟಿ ಮೀಸಲಾತಿಯಲ್ಲಿ ಒಳಮೀಸಲಾತಿ ನೀಡುವುದು ರಾಜ್ಯ ಸರ್ಕಾರಕ್ಕೆ ಹಕ್ಕಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಕರ್ನಾಟಕ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಹಾಗೂ ಮಾದಿಗ ದಂಡೋರ ಸಮಿತಿ, ದಲಿತ ಸಂಘರ್ಷ ಸಮಿತಿಗಳು, ಮೀಸಲಾತಿ ಹೋರಾಟಗಾರರು ಡಿಸಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ 3 ದಶಕಗಳ ಕಾಲ ಒಳಮೀಸಲಾತಿಗಾಗಿ ನಮ್ಮ ಸಂಘಟನೆಗಳಿಂದ ನಿರಂತರ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರಕ್ಕೆ ಹಕ್ಕುಗಳ ಬೇಡಿಕೆ ಸಲ್ಲಿಸುತ್ತಿದ್ದೇವೆ. ಹೀಗಿದ್ದರೂ ವಿವಿಧ ರಾಜಕೀಯ ಪಕ್ಷಗಳ ಸರ್ಕಾರಗಳು ಸದಾಶಿವ ಆಯೋಗದ ವರದಿ ಜಾರಿ ಮಾಡಿರಲಿಲ್ಲ. ಕಳೆದ ಬಾರಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಶೇಕಡ 15%ರಷ್ಟಿದ್ದ ಮೀಸಲಾತಿಯನ್ನು ಶೇ.17ಕ್ಕೆ ಏರಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ತದನಂತರ ಸುಪ್ರೀಂ ಕೋರ್ಟ್ ಪೀಠದ 7 ಜನ ನ್ಯಾಯಾಧೀಶರು ಒಳಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಗಳು ಹೆಚ್ಚುವರಿ ಮಾಡಿ ಮೀಸಲಾತಿ ವಂಚಿತರಿಗೆ ಅವಕಾಶ ಮಾಡಿಕೊಡಬೇಕೆಂದು ಸ್ಪಷ್ಟ ನಿರ್ದೇಶನದ ಆದೇಶ ಮಾಡಿದೆ. ಆದರೂ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಇದುವರೆಗೂ ಒಳಮೀಸಲಾತಿ ಜಾರಿ ಮಾಡಿಲ್ಲ ಎಂದರು ದೂರಿದರು.ಈಗಾಗಲೇ ತರಾತುರಿಯಲ್ಲಿ ರಾಜ್ಯ ಸರ್ಕಾರ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ತಕ್ಷಣವೇ ನೇಮಕಾತಿ ಪ್ರಕ್ರಿಯೆ ರದ್ದುಪಡಿಸಿ, ಒಳಮೀಸಲಾತಿ ಜಾರಿ ಮಾಡಬೇಕೆಂದು ಅವರು ಮನವಿ ಸಲ್ಲಿಸಿದರು.
ಈ ಸಂದರ್ಭ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟಗಾರರಾದ ನಿವೃತ್ತ ಡಿವೈಎಸ್‌ಪಿ ರವಿ ನಾರಾಯಣ, ಪ್ರೊ.ಮಲ್ಲಿಕಾರ್ಜುನ, ಕುಬೇರಪ್ಪ ಗೌರಿಪುರ, ತಮ್ಮಣ್ಣ ಹೊನ್ನಾಳಿ, ಮಲ್ಲೇಶಪ್ಪ ಎಚ್.ಹರಿಹರ, ಮಂಜಪ್ಪ ಎಂ.ಎಚ್. ಕೆಂಚಿಕೊಪ್ಪ, ನರಸಿಂಹಪ್ಪ ಸೇರಿದಂತೆ ಸಮಾಜದ ಬಂಧುಗಳು ಉಪಸ್ಥಿತರಿದ್ದರು.- - -
(** ಈ ಫೋಟೋ-ಕ್ಯಾಪ್ಷನ್ ಪ್ಯಾನೆಲ್‌ಗೆ ಬಳಸಬಹುದು)-16ಕೆಡಿವಿಜಿ36ಃ:
ಸುಪ್ರೀಂ ಕೋರ್ಟ್ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ದಾವಣಗೆರೆಯಲ್ಲಿ ಕರ್ನಾಟಕ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ವಿವಿಧ ಸಮಿತಿಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.