ಸಾರಾಂಶ
ದೊಡ್ಡಬಳ್ಳಾಪುರ: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಬೊಕ್ಕಸ ಬರಿದಾಗಿದೆ. ಆದ್ದರಿಂದಲೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.
ದೊಡ್ಡಬಳ್ಳಾಪುರ: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಬೊಕ್ಕಸ ಬರಿದಾಗಿದೆ. ಆದ್ದರಿಂದಲೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.
ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ತೂಬಗೆರೆ ಹೋಬಳಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಆಯೋಜಿಸಿದ್ದ, ಸನ್ಮಾನ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.ಏರಿಕೆ ಮಾಡಿರುವ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕೂಡಲೇ ಹಿಂಪಡೆಯುವಂತೆ ತಾವು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುವುದಾಗಿ ಅವರು ತಿಳಿಸಿದರು.
ತೂಬಗೆರೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಂದ ನೂತನ ಸಂಸದರಿಗೆ ಅಭಿನಂದನೆ ನಡೆಯಿತು.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಚ್.ಅಪ್ಪಯ್ಯಣ್ಣ, ಕುರುವಿಗೆರೆ ನರಸಿಂಹಯ್ಯ, ಮಾಜಿ ಶಾಸಕರಾದ ಪಿಳ್ಳಮುನಿಶಾಮಪ್ಪ, ಚಂದ್ರಣ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ ಮುನೇಗೌಡ, ದೇವನಹಳ್ಳಿ ಜೆಡಿಎಸ್ ತಾಲೂಕು ಅಧ್ಯಕ್ಷ ಆರ್ ಮುನೇಗೌಡ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಎಚ್ ಎ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರತಾಪ್, ಬಿಜೆಪಿ ತೂಬಗೆರೆ ಹೋಬಳಿ ಅಧ್ಯಕ್ಷರಾದ ವಾಸುದೇವ್ ಮತ್ತಿತರರು ಭಾಗವಹಿಸಿದ್ದರು.
21ಕೆಡಿಬಿಪಿ4- ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿ ಸಂಸದ ಡಾ.ಕೆ.ಸುಧಾಕರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.