ವಿದ್ಯಾರ್ಥಿಗಳು ಆದರ್ಶದ ಬದುಕಿನ ಕನಸು ಕಾಣಲಿ: ಮುಪ್ಪಿನ ಬಸವಲಿಂಗ ಸ್ವಾಮೀಜಿ

| Published : Jul 16 2024, 12:34 AM IST

ವಿದ್ಯಾರ್ಥಿಗಳು ಆದರ್ಶದ ಬದುಕಿನ ಕನಸು ಕಾಣಲಿ: ಮುಪ್ಪಿನ ಬಸವಲಿಂಗ ಸ್ವಾಮೀಜಿ
Share this Article
  • FB
  • TW
  • Linkdin
  • Email

ಸಾರಾಂಶ

ಗಜೇಂದ್ರಗಡದ ಅನ್ನದಾನೀಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ವಿವಿಧ ಸಾಂಘಿಕ ಚಟುವಟಿಕೆ ಉದ್ಘಾಟನಾ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ನಡೆಯಿತು.

ಗಜೇಂದ್ರಗಡ: ಉತ್ತಮ ಸಾಧನೆ ಹಾಗೂ ಆದರ್ಶದ ಬದುಕು ಸಾಗಿಸುವ ಕನಸನ್ನು ವಿದ್ಯಾರ್ಥಿಗಳು ಕಾಣಬೇಕು. ವಿದ್ಯಾರ್ಥಿಗಳು ಜೀವನದಲ್ಲಿ ಸುವರ್ಣಾವಕಾಶ ಪಡೆಯಬೇಕು ಎಂದು ನರೇಗಲ್ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.

ಪಟ್ಟಣದ ಅನ್ನದಾನೀಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ಪ್ರಸಕ್ತ ಸಾಲಿನ ವಿವಿಧ ಸಾಂಘಿಕ ಚಟುವಟಿಕೆ ಉದ್ಘಾಟನಾ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಚಂಚಲತೆ ನಿಯಂತ್ರಿಸಿ, ಶಿಕ್ಷಣಕ್ಕೆ ಮಹತ್ವ ನೀಡಬೇಕು. ಯಾವುದೇ ಆಕರ್ಷಣೆಗೆ ಒಳಗಾಗದೆ ನಿರಂತರ ಅಧ್ಯಯನದಲ್ಲಿ ತೊಡಗಬೇಕು. ಕಲಿಕಾ ಹಂತದಲ್ಲಿ ಹಿಂದುಳಿಯದೆ ಪ್ರಯತ್ನಶೀಲರಾಗಿರಬೇಕು. ಭೂಮಿಯ ಮೇಲೆ ತಮ್ಮದೆ ಆದ ಸಾಧನೆಯ ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಬೇಕು ಎಂದ ಅವರು, ನಮ್ಮ ಮಠದ ಹಿರಿಯ ಗುರುಗಳು ಜೋಳಿಗೆ ಹಾಕಿ ಗ್ರಾಮೀಣ ಭಾಗದ ಬಡ ಪ್ರತಿಭಾ ಸಂಪನ್ನ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಿದ್ದಾರೆ. ಕಾಲಕ್ಕೆ ತಕ್ಕಂತೆ ಕಡಿಮೆ ಶುಲ್ಕದಲ್ಲಿ ಉತ್ತಮ ಶಿಕ್ಷಣ ನೀಡಿ, ಶಿಕ್ಷಕರಿಗೆ ಗೌರವ ವೇತನ ನೀಡಲಾಗುತ್ತದೆ ಎಂದರು.

ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ (ಪಿಯು) ಉಪನಿರ್ದೇಶಕ ಜಿ.ಎನ್. ಕುರ್ತಕೋಟಿ ಮಾತನಾಡಿ, ದ್ವಿತೀಯ ಪಿಯು ಫಲಿತಾಂಶದಲ್ಲಿ ಗದಗ ಜಿಲ್ಲೆ ಕೊನೆಯ ಸ್ಥಾನಕ್ಕೆ ಕುಸಿದಾಗ ಅನ್ನದಾನೇಶ್ವರ ಶಿಕ್ಷಣ ಸಂಸ್ಥೆಯ ನರೇಗಲ್-ಗಜೇಂದ್ರಗಡ ಕಾಲೇಜಿನವರು ಉತ್ತಮ ಫಲಿತಾಂಶ ನೀಡುವ ಮೂಲಕ ಜಿಲ್ಲೆಯ ಹಿರಿಮೆಯನ್ನು ಎತ್ತಿ ಹಿಡಿದಿದ್ದಾರೆ ಎಂದರು.

ಪಿಯು ಕಾಲೇಜಿನ ಚೇರ್‌ಮನ್‌ ವಿ.ವಿ. ವಸ್ತ್ರದ, ಪ್ರಾಚಾರ್ಯ ವಸಂತರಾವ್ ಗಾರಗಿ ಹಾಗೂ ಮಂಜುನಾಥ ಮೆಲ್ಮನಿ ಮಾತನಾಡಿದರು. ಈ ವೇಳೆ ಕಾಲೇಜಿನಲ್ಲಿ ಅಳವಡಿಸಲಾದ ಅಗ್ನಿ ನಂದಿಸುವ ಉಪಕರಣದ ಉದ್ಘಾಟಿಸಲಾಯಿತು. ಬಳಿಕ ರೋಣ ತಾಲೂಕು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಅಗ್ನಿಸ್ಪರ್ಶದ ಪೂರ್ವ ಹಾಗೂ ನಂತರದ ಸೂಕ್ತ ಕ್ರಮಗಳ ಕುರಿತು ಪ್ರಾತ್ಯಕ್ಷಿಕ ನಡೆಯಿತು.

ಕಳೆದ ಬಾರಿಯ ದ್ವಿತೀಯ ಪಿಯು ಫಲಿತಾಂಶದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಶೇ. ೧೦೦ರಷ್ಟು ಫಲಿತಾಂಶ ನೀಡಿದ ಉಪನ್ಯಾಸಕರನ್ನು ಹಾಗೂ ರೋಣ ಅಗ್ನಿಶಾಮಕ ದಳದ ಠಾಣಾಧಿಕಾರಿ ಮಂಜುನಾಥ ಮೆಲ್ಮನಿ ಅವರನ್ನು ಸನ್ಮಾನಿಸಲಾಯಿತು. ಅನ್ನದಾನ ವಿಜಯ ವಿದ್ಯಾಪ್ರಸಾರಕ ಸಮಿತಿಯ ಎನ್.ಆರ್. ಗೌಡರ, ಕುಮಾರೇಶ್ವರ ಪದವಿ ಕಾಲೇಜಿನ ಎಸ್.ಎಸ್. ಪಟ್ಟೇದ, ಪಿಯು ಕಾಲೇಜಿನ ಸದಾಶಿವ ಕರಡಿ, ಪಿ.ಎನ್. ಚವಡಿ ಇತರರು ಇದ್ದರು.