ಸಾರಾಂಶ
ತಾಲೂಕಿನ ಹೊಸಯಳನಾಡು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಉಚಿತ ಶೂ, ಬ್ಯಾಗ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕನ್ನಡಪ್ರಭ ವಾರ್ತೆ ಹಿರಿಯೂರು
ಹೊಸಯಳನಾಡು ಕರ್ನಾಟಕ ಪಬ್ಲಿಕ್ ಶಾಲೆಯು ಕಳೆದ ಎಂಟತ್ತು ವರ್ಷಗಳಿಂದ ಶಿಕ್ಷಣದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದು ಶಾಲೆಯ ಮಹಾಪೋಷಕ ನಾ.ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.ತಾಲೂಕಿನ ಹೊಸಯಳನಾಡು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಹಮ್ಮಿಕೊಂಡಿದ್ದ ಉಚಿತ ಶೂ,ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯಳನಾಡು ಗ್ರಾಮದ ಈ ಶಾಲೆಯು ಮಕ್ಕಳಿಗೆ ಗುಣಮಟ್ಟದ ಕಲಿಕೆಗೆ ಒತ್ತು ನೀಡುತ್ತಿದೆ. ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಸಿಗಬೇಕೆಂಬ ಉದ್ದೇಶ ಹೊಂದಲಾಗಿದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಅನೇಕ ದಾನಿಗಳ ಸಹಕಾರವಿದೆ. ವಿದ್ಯಾರ್ಥಿಗಳ ಅಭಿವೃದ್ಧಿ ದೃಷ್ಟಿಯಿಂದ ಎಸ್‌ಡಿಎಂಸಿ ಮತ್ತು ಗ್ರಾಮಸ್ಥರ ಸಹಕಾರದಿಂದ ಇದನ್ನು ಒಂದು ಉತ್ತಮ ಶಾಲೆಯಾಗಿ ಪರಿವರ್ತನೆ ಮಾಡಲು ಸಾಧ್ಯವಾಗಿದೆ ಎಂದರು.ಈ ವೇಳೆ ಎಸ್‌ಡಿಎಂಸಿ ಅಧ್ಯಕ್ಷ ತಿಮ್ಮಶೆಟ್ಟರು, ನಿರಂಜನ್ ಭಟ್ಟ, ಈರಣ್ಣ, ಮಂಜುನಾಥ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಹಾಜರಿದ್ದರು.