ವಿದ್ಯಾರ್ಥಿಗಳಿಗೆ ಜ್ಞಾನದ ದಾಹ ಹೆಚ್ಚಾಗಲಿ

| Published : Nov 23 2025, 02:45 AM IST

ಸಾರಾಂಶ

ನಾವು ದೈಹಿಕ ಮತ್ತು ಮಾನಸಿಕವಾಗಿ ಕ್ರಿಯಾಶೀಲರಾಗಿರಬೇಕು. ಬರೀ ಓದಿದರೆ ಸಾಲದು. ವಾಸ್ತವ ಜ್ಞಾನ ಪಡೆಯಬೇಕು

ಕೊಪ್ಪಳ: ವಿದ್ಯಾರ್ಥಿಗಳಿಗೆ ಜ್ಞಾನದ ದಾಹ ಹೆಚ್ಚಿರಬೇಕು. ಕಾಲೇಜಿಗೆ ಬಂದು ಜ್ಞಾನ ಹೆಚ್ಚಿಸಿಕೊಳ್ಳಬೇಕು ಹೊರತು ಕಡಿಮೆ ಮಾಡಿಕೊಳ್ಳಬಾರದು ಎಂದು ನಿವೃತ್ತ ಪ್ರಾಚಾರ್ಯ ಸಿ.ವಿ ಜಡಿ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ಐಕ್ಯೂಎಸಿ, ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್. ಎಸ್, ಭಾರತ ಸ್ಕೌಟ್ ಅಂಡ್ ಗೈಡ್ಸ್, ರೆಡ್ ಕ್ರಾಸ್, ಪ್ಲೇಸ್ ಮೆಂಟ್ ಸೆಲ್, ಪ್ರೇರಣಾ, ಮಹಿಳಾ ಸಬಲೀಕರಣ ಮತ್ತು ಇತರೆ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ, ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕನ್ನಡ ಕ್ರಿಯಾ ವೇದಿಕೆಯಿಂದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ನಾವು ದೈಹಿಕ ಮತ್ತು ಮಾನಸಿಕವಾಗಿ ಕ್ರಿಯಾಶೀಲರಾಗಿರಬೇಕು. ಬರೀ ಓದಿದರೆ ಸಾಲದು. ವಾಸ್ತವ ಜ್ಞಾನ ಪಡೆಯಬೇಕು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕವಾಗಿ ಪ್ರಗತಿ ಹೊಂದಬೇಕು ಎಂದು ತಿಳಿಸಿದರು.

2024-25ನೇ ಸಾಲಿನಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಪಡೆದ ಏಳು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಹಳೆಯ ವಿದ್ಯಾರ್ಥಿಗಳಾದ ಕುಸುಮಾ ಮತ್ತು ನಿವೇದಿತಾ ಸ್ಕೌಟ್ಸ್ ಅಂಡ್ ಗೈಡ್ಸ್ ಕುರಿತು ಅನಿಸಿಕೆ ಹಂಚಿಕೊಂಡರು.

2024-25ನೇ ಸಾಲಿನಲ್ಲಿ ಕನ್ನಡ ಐಚ್ಚಿಕ ಕನ್ನಡ ಕಾಂಬಿನೆಷನ್ ನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ಅಲ್ಲಮಪ್ರಭು ಬೆಟ್ಟದೂರು, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ವಿಠೋಬ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಡಾ.ಗಣಪತಿ ಲಮಾಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ಸಾಂಸ್ಕೃತಿಕ ಘಟಕದ ಸಂಚಾಲಕ ಡಾ. ಹುಲಿಗೆಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಬಿ.ಜಿ. ಕರಿಗಾರ, ಕಾಲೇಜಿನ ಹಿರಿಯ ಪ್ರಾಧ್ಯಾಪಕ ನಾಗರತ್ನ ತಮ್ಮಿನಾಳ, ಡಾ. ಹುಲಿಗೆಮ್ಮ, ವಿಠೋಬಾ, ಡಾ.ಮಲ್ಲಿಕಾರ್ಜುನ, ಡಾ. ಪ್ರದೀಪ್ ಕುಮಾರ, ಡಾ.ನರಸಿಂಹ, ಶುಭ ಟಿ. ಈ, ಸುಮಿತ್ರ ಎಸ್ ವಿ, ಸುಮಯ್ಯ, ಕೆ, ಅಲ್ಲಭಕ್ಷ, ಹನುಮಪ್ಪ ಮೇಟಿ, ಶಿವ ಪ್ರಸಾದ್ ಹಾದಿಮನಿ, ಶ್ರೀಕಾಂತ್ ಹಾಗೂ ಕಾಲೇಜಿನ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.