ಪ್ರಶಿಕ್ಷಣಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲಿ-ರಾಜೇಶ ಸುರಗಿಹಳ್ಳಿ

| Published : Oct 08 2024, 01:19 AM IST

ಪ್ರಶಿಕ್ಷಣಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲಿ-ರಾಜೇಶ ಸುರಗಿಹಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಶಿಕ್ಷಣಾರ್ಥಿಗಳು ರಕ್ತದಾನಕ್ಕೆ ಸ್ವಯಂ ಪ್ರೇರಣೆಯಿಂದ ಮುಂದೆ ಬರಬೇಕು ಹಾಗೂ ಇತರರಿಗೂ ರಕ್ತದಾನದ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ ಸುರಗಿಹಳ್ಳಿ ಹೇಳಿದರು.

ರಾಣಿಬೆನ್ನೂರು: ಪ್ರಶಿಕ್ಷಣಾರ್ಥಿಗಳು ರಕ್ತದಾನಕ್ಕೆ ಸ್ವಯಂ ಪ್ರೇರಣೆಯಿಂದ ಮುಂದೆ ಬರಬೇಕು ಹಾಗೂ ಇತರರಿಗೂ ರಕ್ತದಾನದ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ ಸುರಗಿಹಳ್ಳಿ ಹೇಳಿದರು.

ನಗರದ ಟಿ.ಎಂ.ಎ.ಇ. ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಸಹಯೋಗದಲ್ಲಿ ಜರುಗಿದ ರಾಷ್ಟ್ರೀಯ ರಕ್ತದಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ ರಕ್ತದ ಕೊರತೆ ಇರುವುದಿಲ್ಲ. ಈಗ ಜನರು ಜಾಗೃತರಾಗಿದ್ದಾರೆ. ಶಿಬಿರಗಳಲ್ಲಿ ರಕ್ತದಾನ ಮಾಡಲು ಮುಂದೆ ಬರುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ನೀಲೇಶ ಎಂ.ಎನ್., ಅವರು ರಕ್ತದಾನ ದಿನಾಚರಣೆ ಉದ್ದೇಶ ಹಾಗೂ ರಕ್ತದಾನದ ಮಹತ್ವದ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.

ಸನ್ಮಾನ: ಇದೇ ಸಂದರ್ಭದಲ್ಲಿ 29 ಬಾರಿ ರಕ್ತದಾನ ಮಾಡಿದ ಹಾನಗಲ್ಲ ತಾಲೂಕು ದುಮ್ಮಿನಹಾಳದ ಶಿವರಾಜ ಎಂ.ಎಚ್., 20 ಬಾರಿ ರಕ್ತದಾನ ಮಾಡಿದ ಶರಣಪ್ಪ ಕಲ್ಲಮ್ಮನವರ ಹಾಗೂ ಏಳು ಬಾರಿ ರಕ್ತದಾನ ಮಾಡಿದ ಜಿಲ್ಲಾಸ್ಪತ್ರೆ ಮನೋರೋಗ ತಜ್ಞರಾದ ಡಾ. ಲೀಲಾ ಅವರನ್ನು ಸನ್ಮಾನಿಸಲಾಯಿತು. ಸನ್ಮಾನಿತರು ರಕ್ತದಾನ ಮಹತ್ವ ಕುರಿತು ತಮ್ಮ ಅಸಿಕೆಗಳನ್ನು ಹಂಚಿಕೊಂಡರು.

ಪ್ರಮಾಣಪತ್ರ ವಿತರಣೆ:ರಾಷ್ಟ್ರೀಯ ರಕ್ತದಾನ ದಿನಾಚರಣೆ ಪ್ರಯುಕ್ತ ಆಯೋಜಿಸಲಾದ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ಟಿ.ಎಂ.ಎ.ಇ ಬಿ. ಇಡಿ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿ ಸೌಮ್ಯಾ ಕೆ., ಮಾರುತಿ ಮುದ್ದೇರ ಹಾಗೂ ಮಹೇಂದ್ರ ಅವರಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ನೀಡಿ ಗೌರವಿಸಲಾಯಿತು.

ಬಿಇಡಿ ಪ್ರಶಿಕ್ಷಣಾರ್ಥಿಗಳಾದ ಸುನೈನಾ ಸ್ವಾಗತಿಸಿದರು, ವಿರಾಜ ಸುಣಗಾರ ನಿರೂಪಿಸಿದರು. ಚೈತ್ರಾ ಎಸ್. ವಂದಿಸಿದರು.

ರಕ್ತದಾನ ಕುರಿತು ಜಾಗೃತಿ ಜಾಥಾ: ಕಾರ್ಯಕ್ರಮಕ್ಕೂ ಮೊದಲು ಟಿ.ಎಂ.ಎ.ಇ. ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ರಕ್ತದಾನ ಕುರಿತು ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ ಸುರಗಿಹಳ್ಳಿ ಚಾಲನೆ ನೀಡಿದರು. ಇಜಾರಿಲಕಮಾಪುರದ ದುಂಡಿಬಸವೇಶ್ವರ ದೇವಸ್ಥಾನದವರೆಗೆ ಜರುಗಿದ ಜಾಥಾದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ನೀಲೇಶ ಎಂ.ಎನ್., ಪ್ರ‍್ರಾಚಾರ್ಯ ಬಸನಗೌಡ ವಿ.ಎಂ., ಜಿಲ್ಲಾ ಏಡ್ಸ್ ನಿಯಂತ್ರಣ ಕೇಂದ್ರದ ಸಿಬ್ಬಂದಿ, ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು. ರಕ್ತದಾನ ಕುರಿತು ವಿರಾಜ ಸುಣಗಾರ ಪ್ರತಿಜ್ಞಾವಿಧಿ ಬೋಧಿಸಿದರು.