ಬಿಜೆಪಿಯ ಪ್ರಶಿಕ್ಷಣ ವರ್ಗ ಅತ್ಯಂತ ಅಚ್ಚುಕಟ್ಟಾಗಿ ನಡೆಯಬೇಕು.
ಕನ್ನಡಪ್ರಭ ವಾರ್ತೆ ಕಾರವಾರ
ಬಿಜೆಪಿಯ ಪ್ರಶಿಕ್ಷಣ ವರ್ಗ ಅತ್ಯಂತ ಅಚ್ಚುಕಟ್ಟಾಗಿ ನಡೆಯಬೇಕು. ಇದು ಪಕ್ಷದ ಬೆಳವಣಿಗೆಗೆ ಸಹಕಾರಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದರು.ಬಿಜೆಪಿ ಕಾರವಾರ ನಗರ ಮಂಡಳ ವತಿಯಿಂದ ಪಕ್ಷದ ಕಾರ್ಯಾಲಯದಲ್ಲಿ ಪ್ರಶಿಕ್ಷಣ ವರ್ಗ ಕುರಿತು ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಪ್ರಶಿಕ್ಷಣ ವರ್ಗ ಅತ್ಯಂತ ಯಶಸ್ವಿಯಾಗಿ ನಡೆಯಬೇಕು. ಅದರ ಸಿದ್ಧತೆಯ ಬಗ್ಗೆ ಕಾರ್ಯಕರ್ತರು ಗಮನ ಹರಿಸಬೇಕು. ಪ್ರತಿ ಬೂತ್ ಅಧ್ಯಕ್ಷರಿಂದ ಹಿಡಿದು ಪಕ್ಷದ ವಿವಿಧ ಜವಾಬ್ದಾರಿ ಹೊತ್ತ ಕಾರ್ಯಕರ್ತರು ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸಿ, ಪಕ್ಷವನ್ನು ಸಂಘಟಿಸುವ ಕಾರ್ಯಕ್ರಮ ಪ್ರ ಶಿಕ್ಷಣ ವರ್ಗ ಎಂದು ಹೇಳಿದರು.ಪಕ್ಷದ ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ, ನಗರ ಮಂಡಳ ಅಧ್ಯಕ್ಷ ನಾಗೇಶ್ ಕುರಡೇಕರ ಮಾತನಾಡಿದರು.
ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬಳೆ, ವಿಶೇಷ ಆಹ್ವಾನಿತರಾದ ನಾಗರಾಜ್ ನಾಯಕ, ಮನೋಜ ಭಟ್, ನಯನಾ ನೀಲಾವರ, ನಗರ ಪ್ರಧಾನ ಕಾರ್ಯದರ್ಶಿಗಳಾದ ಅಶೋಕ್ ಗೌಡ, ದೇವಿದಾಸ ಕಂತ್ರಿಕರ, ಪಕ್ಷದ ವಿವಿಧ ಜವಾಬ್ದಾರಿ ಹೊತ್ತ ಕಾರ್ಯಕರ್ತರು ಪಕ್ಷದ ಹಿರಿಯ, ಕಿರಿಯ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು.