ಸಾರಾಂಶ
ಅನುದಾನ ಸರಿಯಾದ ರೀತಿಯಲ್ಲಿ ಉಪಯೋಗಿಸಿ ಉತ್ತಮ ಗುಣಮಟ್ಟದ ಜೊತೆಗೆ ಕಮಿಷನ್ ರಹಿತ ಕಾಮಗಾರಿಯಾಗಲಿ ಎಂಬುದು ಕಾಂಗ್ರೆಸ್ ಬಯಸಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ತಿಳಿಸಿದ್ದಾರೆ.
ಕಾರ್ಕಳ: ರಾಜ್ಯದ ಅಭಿವೃದ್ಧಿ ಚಿಂತನೆಯೊಂದಿಗೆ ಪಕ್ಷ ಭೇದವಿಲ್ಲದೆ ಎಲ್ಲಾ ಶಾಸಕರ ಕ್ಷೇತ್ರಗಳಿಗೆ ಕೋಟ್ಯಾಂತರ ರುಪಾಯಿ ಅನುದಾನ ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಬಿಡುಗಡೆಯಾದ ಅನುದಾನ ಸರಿಯಾದ ರೀತಿಯಲ್ಲಿ ಉಪಯೋಗಿಸಿ ಉತ್ತಮ ಗುಣಮಟ್ಟದ ಜೊತೆಗೆ ಕಮಿಷನ್ ರಹಿತ ಕಾಮಗಾರಿಯಾಗಲಿ ಎಂಬುದು ಕಾಂಗ್ರೆಸ್ ಬಯಸಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ತಿಳಿಸಿದ್ದಾರೆ.
ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಜನತೆಗೆ ಅಮೂಲ್ಯ ಕೊಡುಗೆ ನೀಡುತ್ತಿರುವ ರಾಜ್ಯ ಸರ್ಕಾರವು, ಇತರ ಅಭಿವೃದ್ಧಿ ಕೆಲಸಗಳಿಗೆ ಸಹ ಕೋಟ್ಯಾಂತರ ರು. ಅನುದಾನ ಬಿಡುಗಡೆ ಮಾಡುವ ಮೂಲಕ ‘ಅಭಿವೃದ್ಧಿ ಶೂನ್ಯ ಸರ್ಕಾರ’ ಎಂದು ಅಪಪ್ರಚಾರ ಮಾಡುತ್ತಿದ್ದ ಬಿಜೆಪಿ ಶಾಸಕರಿಗೆ ತಕ್ಕ ಉತ್ತರ ನೀಡಿದೆ ಎಂದು ಅವರು ಅಭಿಪ್ರಾಯಪಟ್ಟರು.ಅನುದಾನ ಎಷ್ಟು ಬಿಡುಗಡೆಯಾಗಿದೆ ಎಂಬುದಕ್ಕಿಂತ ಅದನ್ನು ಹೇಗೆ ಸಮರ್ಪಕವಾಗಿ ಬಳಸಿಕೊಳ್ಳಲಾಗಿದೆ ಎಂಬುದೇ ಮುಖ್ಯ. ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗದಂತೆ ಎಚ್ಚರವಹಿಸಲು ಶಾಸಕರಿಗೆ ಮನವಿ ಮಾಡುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.