ಕಾಮಗಾರಿ ಗುಣಮಟ್ಟದಲ್ಲಿರಲಿ: ಸಚಿವ ಪ್ರಿಯಾಂಕ್‌

| Published : Jul 02 2024, 01:34 AM IST

ಸಾರಾಂಶ

ಲೊಕಸಭೆ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆಯಿಂದ ಅಭಿವೃದ್ಧಿ ಕಾಮಗಾರಿಗಳು ನಿಧಾನ ಗತಿಯಲ್ಲಿ ನಡೆದಿದ್ದು ಈಗ ಚುನಾವಣೆಗಳು ಮುಗಿದಿದ್ದು ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಹಾಗೂ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಚಿತ್ತಾಪುರ

ಲೊಕಸಭೆ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆಯಿಂದ ಅಭಿವೃದ್ಧಿ ಕಾಮಗಾರಿಗಳು ನಿಧಾನ ಗತಿಯಲ್ಲಿ ನಡೆದಿದ್ದು ಈಗ ಚುನಾವಣೆಗಳು ಮುಗಿದಿದ್ದು ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಹಾಗೂ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.

ವಿಧಾನಸಭೆ ವ್ಯಾಪ್ತಿಯ ಮಾಡಬೂಳ ಗ್ರಾಮದ ಹತ್ತಿರ ಸ್ಥಾಪಿಸಲು ಉದ್ದೇಶಿಸಿರುವ ಪ್ರಾಣಿಸಂಗ್ರಹಾಲಯಕ್ಕೆ ಭೆಟ್ಟಿ, ಚಿತ್ತಾಪುರ ಪಟ್ಟಣದಲ್ಲಿ ನಡೆದಿರುವ ಕ್ರೀಡಾಂಗಣ ಕಾಮಗಾರಿ, ಸರ್ಕಾರಿ ಬಾಲಕಿಯರ ಹೈಸ್ಕೂಲ್, ಎಜುಕೇಶನ್ ಹಬ್ಬನಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಮತ್ತು ನಾಗಾವಿ ದೇವಸ್ಥಾನದಲ್ಲಿ ನಡೆದಿರುವ ಕಾಮಗಾರಿಗಳನ್ನು ಪರಿಶೀಲನೆ ಮಾಡಿದ ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ನಾನು ಜನರಿಗೆ ನೀಡಿದಂತೆ ಭರವಸೆಯಂತೆ ಹಂತ ಹಂತವಾಗಿ ಕೈಗೊಳ್ಳುತ್ತಿದ್ದು ಪಟ್ಟಣದ ನಾಗಾವಿ ಕ್ಯಾಂಪಸ್‌ನಲ್ಲಿ ನಿರ್ಮಾಣವಾಗುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಿಂದ ಸ್ಥಳಿಯರಿಗೆ ತುಂಬಾ ಅನುಕೂಲವಾಗುತ್ತದೆ. ಕಾಮಗಾರಿಯನ್ನು ಅದಷ್ಟು ಬೇಗ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಹೇಳಿದರು.

ಜಿಲ್ಲಾಧಿಕಾರಿ ಫೌಜಿಯ ತರನ್ನುಮ್, ಜಿಲ್ಲಾ ವರಿಷ್ಠಾಧಿಕಾರಿ, ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.