ಸಾರಾಂಶ
ಭಾರತ ಬ್ರಿಟೀಷರ ಕಪಿ ಮುಷ್ಟಿಯಿಂದ ಮುಕ್ತಿ ಪಡೆದ ಶುಭದಿನವೇ ಸ್ವಾತಂತ್ರ್ಯ ದಿನವಾಗಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾತ್ಮಾಗಾಂಧೀಜಿ ಸೇರಿದಂತೆ ಹಲವು ಮಹನೀಯರನ್ನು ಸ್ಮರಿಸುವ ಮೂಲಕ ಪ್ರತಿಯೊಬ್ಬರು ಭವ್ಯ ಭಾರತದ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ಪ್ರಾಂಶುಪಾಲ ಕೆ.ಎನ್.ರೇಣುಕಯ್ಯ ತಿಳಿಸಿದರು.
ಕನ್ನಡಪ್ರಭ ವಾರ್ತೆ ತಿಪಟೂರು
ಭಾರತ ಬ್ರಿಟೀಷರ ಕಪಿ ಮುಷ್ಟಿಯಿಂದ ಮುಕ್ತಿ ಪಡೆದ ಶುಭದಿನವೇ ಸ್ವಾತಂತ್ರ್ಯ ದಿನವಾಗಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾತ್ಮಾಗಾಂಧೀಜಿ ಸೇರಿದಂತೆ ಹಲವು ಮಹನೀಯರನ್ನು ಸ್ಮರಿಸುವ ಮೂಲಕ ಪ್ರತಿಯೊಬ್ಬರು ಭವ್ಯ ಭಾರತದ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ಪ್ರಾಂಶುಪಾಲ ಕೆ.ಎನ್.ರೇಣುಕಯ್ಯ ತಿಳಿಸಿದರು.ನಗರದ ಎಸ್‌ವಿಪಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ೭೮ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಇಂದಿನ ಯುವಪೀಳಿಗೆ ದೇಶಕ್ಕಾಗಿ ಹೋರಾಡಿದ ಹುತಾತ್ಮರನ್ನು ಸ್ಮರಿಸುತ್ತಾ ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯವನ್ನು ಸರಿಯಾಗಿ ಬಳಸಿಕೊಂಡು ದೇಶಕ್ಕಾಗಿ ಹೋರಾಡಬೇಕು ಎಂದು ಹೇಳಿದರು.ದೈಹಿಕ ಶಿಕ್ಷಕ ಬಿ.ಆರ್.ಉದಯ್‌ಶಂಕರ್ ಮಾತನಾಡಿ, ವೈವಿಧ್ಯತೆಯಲ್ಲಿ ಏಕತೆಯನ್ನು ಮೈಗೂಡಿಸಿಕೊಂಡಿರುವ ಭಾರತ ಸರ್ವಧರ್ಮ ಸಹಿಷ್ಣುತೆಗೆ, ಶಾಂತಿ, ನೆಮ್ಮದಿಗೆ ಹೆಸರುವಾಸಿಯಾಗಿದೆ. ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರ, ಹುತಾತ್ಮರ ಜೀವನದ ಹೋರಾಟದ ಹಾದಿಯಲ್ಲಿ ಸಾಗಿ ಬಂದ ಪರಂಪರೆಯನ್ನು ಅರಿತುಕೊಳ್ಳಬೇಕು ಎಂದರು.
ಉಪನ್ಯಾಸಕರುಗಳಾದ ಜಗದೀಶ್, ಜಿ.ಸಿ.ಚನ್ನೇಗೌಡ, ಅರ್ಕಚಾರಿ, ವಿಜಯಕುಮಾರಿ, ಸಿದ್ದೇಶ್, ಸಂತೋಷ್ ಸೇರಿದಂತೆ ಬೋಧಕ ಸಿಬ್ಬಂದಿ ವರ್ಗದವರಿದ್ದರು.