ಸಾರಾಂಶ
ಮಾನವರಾದ ನಾವು ರಕ್ತ ನೀಡದಿದ್ದರೆ ಅನೇಕ ತುರ್ತು ಪರಿಸ್ತಿತಿಗಳಲ್ಲಿ ಜೀವ ಉಳಿಸಲು ಸಾಧ್ಯವಾಗುವುದಿಲ್ಲ. ಅದಕ್ಕಾಗಿ ಹೆಚ್ವಿನ ಜನ ರಕ್ತನೀಡಬೇಕು ಒಕ್ಕಲಿಗರ ಸಂಘದಿಂದ ಪ್ರತಿವರ್ಷವೂ ರಕ್ತದಾನ ಶಿಬಿರವನ್ನ ಆಯೋಜಿಸುತ್ತಿದೆ. ಪೆರೆಸಂದ್ರ ಶಾಂತ ವಿದ್ಯಾನಿಕೇತನ ಕಾಲೇಜಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ರಕ್ತದಾನಕ್ಕಿಂತ ಮಹಾದಾನ ಇನ್ನೊಂದಿಲ್ಲ. ರಕ್ತವನ್ನು ಉತ್ಪಾದಿಸಲು ಸಾಧ್ಯವಿಲ್ಲ. ಆದ್ದರಿಂದ ಆರೋಗ್ಯವಂತ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಕ್ಕೆ ಮುಂದಾಗಬೇಕು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಜಿಪಂ ಮಾಜಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ತಿಳಿಸಿದರು.ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ತಾಲ್ಲೂಕು ಒಕ್ಕಲಿಗರ ಸಂಘ ಮತ್ತು ಭಾರತೀಯ ರೆಡ್ ಕ್ರಾಸ್ ಸಹಯೋಗದಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ರಕ್ತದಾನ ಮಾಡಬಹುದು. ರಕ್ತದಾನದಿಂದ ಒಂದು ಜೀವ ಉಳಿಸಿದಂತಾಗುತ್ತದೆ ಎಂದರು.
ಜೀವ ಉಳಿಸಲು ರಕ್ತದಾನ ಮಾಡಿಮಾನವರಾದ ನಾವು ರಕ್ತ ನೀಡದಿದ್ದರೆ ಅನೇಕ ತುರ್ತು ಪರಿಸ್ತಿತಿಗಳಲ್ಲಿ ಜೀವ ಉಳಿಸಲು ಸಾಧ್ಯವಾಗುವುದಿಲ್ಲ. ಅದಕ್ಕಾಗಿ ಹೆಚ್ವಿನ ಜನ ರಕ್ತನೀಡಬೇಕು ಒಕ್ಕಲಿಗರ ಸಂಘದಿಂದ ಪ್ರತಿವರ್ಷವೂ ರಕ್ತದಾನ ಶಿಬಿರವನ್ನ ಆಯೋಜಿಸುತ್ತಿದೆ. ಪೆರೆಸಂದ್ರ ಶಾಂತ ವಿದ್ಯಾನಿಕೇತನ ಕಾಲೇಜಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.
ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಮಾತನಾಡಿ, ಮಾನವ ಸೇವೆ ಬಹುದೊಡ್ಡ ಕಾರ್ಯ ಅದರಲ್ಲಿ ಜೀವ ಉಳಿಸುವ ಕೆಲಸದಷ್ಟು ಪುಣ್ಯದ ಕೆಲಸ. ರಕ್ತದಾನದ ಬಗ್ಗೆ ಕೆಲವೊಂದು ಮೂಢನಂಬಿಕೆಗಳಿವೆ. ಪ್ರತಿಯೊಬ್ಬರೂ ಇಂಥ ಮೂಢ ನಂಬಿಕೆಗಳಿಂದ ಹೊರಬಂದು ರಕ್ತದಾನ ಮಾಡಲು ಮುಂದೆ ಬರಬೇಕು. ರಕ್ತದಾನ ಮಾಡುವುದರಿಂದ ಒಂದು ಜೀವ ಉಳಿಸಿದ ಪುಣ್ಯ ಲಭಿಸುವುದರ ಜೊತೆಗೆ ನಮ್ಮ ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗುತ್ತದೆ ಎಂದು ಹೇಳಿದರು.ರಕ್ತದಾನದಿಂದ ಆರೋಗ್ಯ ರಕ್ಷಣೆ
ಒಕ್ಕಲಿಗರ ಸಂಘದ ಕಾರ್ಯದರ್ಶಿ ಚಿನ್ನಪ್ಪರೆಡ್ಡಿ ಮಾತನಾಡಿ, ರಕ್ತದಾನ ಇನ್ನೊಬ್ಬರ ಜೀವ ಉಳಿಸುವ ಉದಾತ್ತ ಕಾರ್ಯವಾಗಿದೆ, ರಕ್ತದಾನವು ದಾನಿಯ ಆರೋಗ್ಯವನ್ನು ಕಾಯ್ದುಕೊಳ್ಳುವುದರೊಂದಿಗೆ ಮಾನಸಿಕವಾಗಿ ಸಕಾರಾತ್ಮಕ ಭಾವನೆ ಭರಿಸುತ್ತದೆ ಎಂದು ಹೇಳಿದರು.ಈ ವೇಳೆ ನಗರಸಭಾ ಮಾಜಿ ಅಧ್ಯಕ್ಷ ಎಂ.ಪ್ರಕಾಶ್, ಬಿಜೆಪಿ ಮುಖಂಡ ಎ.ವಿ.ಬೈರೇಗೌಡ, ಮುಖಂಡರಾದ ಬಿಎಮ್ ಕೆ ಮಂಜುನಾಥ್,ರಾಮಸ್ವಾಮಿ ಮತ್ತಿತರರು ಇದ್ದರು.