ಯುವಜನರು ಜಾನಪದ ಕಲೆಗಳ ಬೆಳೆಸಲಿ

| Published : Jan 02 2025, 12:33 AM IST

ಸಾರಾಂಶ

ಕರ್ನಾಟಕವು ಕಲೆ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತ ರಾಜ್ಯವಾಗಿದೆ. ಇಲ್ಲಿ ಸಾವಿರಾರು ಜನಪದ ಕಲೆಗಳು ಒಬ್ಬರಿಂದ ಒಬ್ಬರಿಗೆ ಆಚರಣೆಗಳ ಮೂಲಕ ಹಾಗೂ ಮೌಖಿಕವಾಗಿ ವರ್ಗವಾಗುತ್ತ ಬಂದಿವೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

- ತಮಟೆ-ಕಂಸಾಳೆ ತರಬೇತಿ ಶಿಬಿರದಲ್ಲಿ ವಕೀಲರ ಸಂಘ ಜಿಲ್ಲಾಧ್ಯಕ್ಷ ಎಲ್.ಎಚ್.ಅರುಣಕುಮಾರ - - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಕರ್ನಾಟಕವು ಕಲೆ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತ ರಾಜ್ಯವಾಗಿದೆ. ಇಲ್ಲಿ ಸಾವಿರಾರು ಜನಪದ ಕಲೆಗಳು ಒಬ್ಬರಿಂದ ಒಬ್ಬರಿಗೆ ಆಚರಣೆಗಳ ಮೂಲಕ ಹಾಗೂ ಮೌಖಿಕವಾಗಿ ವರ್ಗವಾಗುತ್ತ ಬಂದಿವೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ ಅಭಿಪ್ರಾಯಪಟ್ಟರು.

ನಗರದ ಎವಿಕೆ ಮಹಿಳಾ ಕಾಲೇಜಿನ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ಸೋಮವಾರ ರಂಗ ಅನಿಕೇತನ, ಮಾನವ ಬಂಧುತ್ವ ವೇದಿಕೆ, ಎ.ವಿ.ಕೆ. ಮಹಿಳಾ ಕಾಲೇಜು ಆಶ್ರಯದಲ್ಲಿ ಆಯೋಜಿಸಿದ್ದ ಮಹಿಳೆಯರಿಗಾಗಿ ತಮಟೆ ಮತ್ತು ಕಂಸಾಳೆ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಆಧುನಿಕ ಯುಗದಲ್ಲಿ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳ ಪ್ರಭಾವದಿಂದ ಜನಪದ ಕಲೆಯ ಭವ್ಯಪರಂಪರೆ ಕಡಿಮೆಯಾಗುತ್ತಿದೆ. ಇಂದು ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ನಗರಗಳಲ್ಲಿ ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವಜನತೆಯ ಮೇಲಿದ್ದು, ಈ ನಿಟ್ಟಿನಲ್ಲಿ ಪ್ರೌಢಶಾಲಾ ಮಟ್ಟದಿಂದಲೇ ವಿದ್ಯಾರ್ಥಿಗಳಿಗೆ ಜನಪದ ಕಲೆಗಳ ತರಬೇತಿ ನೀಡುವುದು ಮುಖ್ಯವಾಗಿದೆ ಎಂದರು.

ಇಂದಿನ ಮಕ್ಕಳು ಸಾಮಾಜಿಕ ಜಾಲತಾಣಗಳು ಮತ್ತು ಮೊಬೈಲ್‌ಗಳ ಪ್ರಭಾವಕ್ಕೆ ಒಳಗಾಗಿದ್ದು, ಅವುಗಳಿಂದ ಹೊರತರಲು ಜಾನಪದ ಕಲೆಗಳ ತರಬೇತಿ ನೀಡುವುದು ಅವಶ್ಯವಾಗಿದೆ. ಇಂದಿನ ಸಂದರ್ಭದಲ್ಲಿ ತಮಟೆ ಮತ್ತು ಕಂಸಾಳೆ ಶಿಬಿರ ಏರ್ಪಡಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ. ಇಂತಹ ತರಬೇತಿಗಳನ್ನು ಸರ್ಕಾರ ಮತ್ತು ಸಂಘ ಸಂಸ್ಥೆಗಳು ಏರ್ಪಡಿಸುವ ಮೂಲಕ ಜಾನಪದ ಕಲೆಗಳ ಭವ್ಯಪರಂಪರೆ ಉಳಿಸಬೇಕಾಗಿದೆ ಎಂದು ಹೇಳಿದರು.

ಆರ್.ಆರ್.ಶಿವಕುಮಾರ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಕೀಲರಾದ ಬಿ.ಎಂ. ಹನುಮಂತಪ್ಪ, ಎಚ್.ಎಸ್.ಯೋಗೀಶ್, ರಂಗ ಅನಿಕೇತನದ ಅಧ್ಯಕ್ಷೆ ಎಚ್.ಎನ್.ಸುಧಾ, ವಕೀಲರಾದ ಉಷಾ ಕೈಲಾಸದ್, ನಾಗಮಣಿ ಹಂಪಾಳಿ, ಸಂಪನ್ಮೂಲ ವ್ಯಕ್ತಿಗಳಾಗಿ ಮನೋಜ್ ಆರ್. ಕಂಬಾಳಿ, ಪ್ರಮೋದ್ ಕುಮಾರ್ ಭಾಗವಹಿಸಿದ್ದರು.

- - - -30ಕೆಡಿವಿಜಿ44:

ದಾವಣಗೆರೆಯಲ್ಲಿ ನಡೆದ ಮಹಿಳೆಯರಿಗೆ ತಮಟೆ ಮತ್ತು ಕಂಸಾಳೆ ತರಬೇತಿ ಶಿಬಿರವನ್ನು ಎಲ್.ಎಚ್.ಅರುಣಕುಮಾರ ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು.