ಎಂಡಿಎ ಹಗರಣ- ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಯಾಗಲಿ

| Published : Jul 16 2024, 12:38 AM IST

ಎಂಡಿಎ ಹಗರಣ- ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಯಾಗಲಿ
Share this Article
  • FB
  • TW
  • Linkdin
  • Email

ಸಾರಾಂಶ

, ರಾಜ್ಯ ಸರ್ಕಾರ ನಿವೃತ ನ್ಯಾಯಾಧೀಶ ಪಿ.ಎನ್‌. ದೇಸಾಯಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರದ (ಎಂಡಿಎ) ಹಗರಣವನ್ನು ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಆಗ್ರಹಿಸಿದರು.

ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ನಿವೃತ ನ್ಯಾಯಾಧೀಶ ಪಿ.ಎನ್‌. ದೇಸಾಯಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿದೆ. ಆದರೆ, ಈ ಹಗರಣದಲ್ಲಿ ಪ್ರಭಾವಿಗಳು, ಜನಪ್ರತಿನಿಧಿಗಳು ಪಾಲುದಾರರಾಗಿರುವ ಕಾರಣ ಹಾಲಿ ನ್ಯಾಯಾಧೀಶರಿಂದಲೇ ತನಿಖೆ ನಡೆಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಅಕ್ಕಿ ರಫ್ತು ನಿಷೇಧ ಮಾಡಿರುವುದನ್ನು ಕೂಡಲೇ ವಾಪಸ್‌ಪಡೆಯಬೇಕು. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕ ರಾಜ್ಯಗಳ ಭತ್ತ ಬೆಳೆಗಾರರಿಗೆ ಬೆಲೆ ಕುಸಿತವಾಗುವ ಸಂಭವವಿದೆ. ಈ ಬಗ್ಗೆ ಜು.22 ರಂದು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು.

ದೆಹಲಿ ರೈತ ಹೋರಾಟದ ಮುಂದಿನ ಯೋಜನೆ ಬಗ್ಗೆ ಜು.22 ರಂದು ನವದೆಹಲಿಯಲ್ಲಿ ಸಂಯುಕ್ತ ಕಿಸಾನ್‌ಮೋರ್ಚಾ ಸಂಘಟನೆ ವತಿಯಿಂದ ರಾಷ್ಟ್ರೀಯ ರೈತ ಮುಖಂಡರ ಸಮಾವೇಶ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ರೈತ ಸಮುದಾಯಕ್ಕಾಗಿ ಪ್ರಾಣ ಕಳೆದುಕೊಂಡ ರೈತರ ನೆನಪಿಗಾಗಿ ರೈತ ಹುತಾತ್ಮ ದಿನ ರಾಜ್ಯ ಮಟ್ಟದಲ್ಲಿ ಜು.21 ರಂದು ಚಿಕ್ಕಬಳ್ಳಾಪುರದಲ್ಲಿ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಎಲ್ಲಾ ರೈತ ಮುಖಂಡರು ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ ಎಂದರು. ವಕೀಲ ರವಿಕುಮಾರ್ ಇದ್ದರು.