ಸಾರಾಂಶ
ಉದ್ಯೋಗ ಪಡೆದು ಸ್ವಾವಲಂಬನೆ ಜೀವನ ನಡೆಸಲು ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು.
ಹೊಸಪೇಟೆ: ಮಹಿಳೆಯರು ಸಹ ಸಾಮಾಜಿಕವಾಗಿ ಸಮಾನತೆ ಸಾಧಿಸಲು ಮತ್ತು ಅವರು ಶಿಕ್ಷಣ, ಉದ್ಯೋಗ ಪಡೆದು ಸ್ವಾವಲಂಬನೆ ಜೀವನ ನಡೆಸಲು ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹಿಮಾನ ಎ. ನಂದಗಡಿ ಹೇಳಿದರು.ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹೊಸಪೇಟೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವ ಮಾನವ ಕಳ್ಳ ಸಾಗಣೆ ವಿರೋಧಿ ದಿನದ ಅಂಗವಾಗಿ ಜಾಥಾ ಮತ್ತು ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಗತ್ತು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಮಾನವ ಕಳ್ಳಸಾಗಣೆ ಸಹ ಒಂದಾಗಿದೆ. ಇಂತಹ ಕೃತ್ಯಕ್ಕೆ ಹೆಚ್ಚಾಗಿ ಮಹಿಳೆಯರೇ ಬಲಿಪಶುವಾಗುತ್ತಾರೆ. ಹೆಚ್ಚಾಗಿ ಬಾಲಕಿಯರೇ ನಾಪತ್ತೆಯಾಗುವುದು ವಿಪರ್ಯಾಸವಾಗಿದೆ. ಈ ಕಳ್ಳಸಾಗಣೆಗೆ ಪುಟ್ಟ ಮಕ್ಕಳು ಕೂಡ ಬಲಿಯಾಗುತ್ತಿದ್ದಾರೆ. ಭಾರತದಲ್ಲಿ ಮಾನವ ಕಳ್ಳಸಾಗಣೆ ವಿರುದ್ಧ ಜಾಗೃತಿ ಮೂಡಿಸಲು ಕಾನೂನು ಅರಿವು ಕಾರ್ಯಕ್ರಮ, ಜನಜಾಗೃತಿ ಜಾಥಾ, ವಿಚಾರ ಸಂಕಿರಣಗಳು ನಿರಂತರ ನಡೆಯಬೇಕಿದೆ ಎಂದರು.ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅನ್ಸರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಹಾಗೂ ಮಾನವ ಕಳ್ಳಸಾಗಣೆಯನ್ನು ಸಂಪೂರ್ಣ ತಡೆಯಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಹೇಮಲತಾ ಬಿ. ಹುಲ್ಲೂರ, ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಮೇಶ್ ಬಾಬು ಬಿ.ಎನ್., ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಶಾಂತ ನಾಗಲಾಪುರ್, ಅಪರ ಸಿವಿಲ್ ನ್ಯಾಯಾಧೀಶರಾದ ಅಶೋಕ ಆರ್.ಎಚ್., 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಂಜೀವ್ ಕುಮಾರ ಜಿ., ವಕೀಲರ ಸಂಘದ ಅಧ್ಯಕ್ಷ ಕೆ. ಪ್ರಹ್ಲಾದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಶ್ರೀನಿವಾಸಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ವೇತಾ ಎಸ್., ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನಾಗರಾಜ್ ಹವಾಲ್ದಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಅಂಗಡಿ, ಪಟ್ಟಣ ಪೊಲೀಸ್ ಠಾಣೆಯ ಪಿಐ ಲಕನ್ ಆರ್. ಮಸುಗುಪ್ಪಿ, ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ವಿಜಯಲಕ್ಷ್ಮೀ, ಕೊಟ್ಟೂರು ಪೊಲೀಸ್ ಠಾಣೆಯ ಗೀತಾಂಜಲಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಕಾಲೇಜು ವಿದ್ಯಾರ್ಥಿನಿಯರು ಇದ್ದರು.