ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡ ಸಾಹಿತ್ಯ ಕ್ಷೇತ್ರ ವಿಶಾಲವಾಗಿದ್ದು ಅದನ್ನು ಕನ್ನಡಿಗರಾದ ನಾವೆಲ್ಲರೂ ಬೆಳೆಸೋಣ ಎಂದು ಜಿಲ್ಲಾ ಪಂಚಾಯುತಿ ಮಾಜಿ ಅಧ್ಯಕ್ಷೆ ಅಪ್ಸರಾಬೇಗಂ ಚಪ್ಪರಬಂದ ಅಭಿಪ್ರಾಯ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಕನ್ನಡ ಸಾಹಿತ್ಯ ಕ್ಷೇತ್ರ ವಿಶಾಲವಾಗಿದ್ದು ಅದನ್ನು ಕನ್ನಡಿಗರಾದ ನಾವೆಲ್ಲರೂ ಬೆಳೆಸೋಣ ಎಂದು ಜಿಲ್ಲಾ ಪಂಚಾಯುತಿ ಮಾಜಿ ಅಧ್ಯಕ್ಷೆ ಅಪ್ಸರಾಬೇಗಂ ಚಪ್ಪರಬಂದ ಅಭಿಪ್ರಾಯ ವ್ಯಕ್ತಪಡಿಸಿದರು.ಕನ್ನಡ ರಾಜ್ಯೋತ್ಸವ ನಿಮಿತ್ತ ನಗರದ ಕಸಾಪ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಅತ್ಯಂತ ಪ್ರಾಚೀನ ಹಾಗೂ ಶ್ರೀಮಂತ ಭಾಷೆಯಾಗಿದೆ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ದೊರೆಕಿದ್ದು ಹೆಮ್ಮೆಯ ವಿಷಯ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷೆ ಭಾರತಿ ಪಾಟೀಲ ಮಾತನಾಡಿ, ಕನ್ನಡ ನಾಡು ನುಡಿಗಳನ್ನು ಉಳಿಸುವ ಹಾಗೂ ಬೆಳೆಸುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ. ಕನ್ನಡ ಸಾಹಿತ್ಯ ಮೌಲ್ಯಯುತವಾಗಿದೆ. ಬಹುಜನರ ಕೊಡುಗೆ ಅಪಾರವಾಗಿದೆ ಎಂದು ಸ್ಮರಿಸಿದರು.ಗೌರವ ಕೋಶಾಧ್ಯಕ್ಷ ಅಭಿಷೇಕ ಚಕ್ರವರ್ತಿ ಮಾತನಾಡಿ, ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣ ಮಾಡಿ 50 ವರ್ಷ ಗತಿಸಿವೆ. ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆಯ ಉನ್ನತಿಗಾಗಿ ಶ್ರಮಿಸಿವೆ. ಕನ್ನಡ ಭಾಷೆ ನಮ್ಮೆಲ್ಲರ ಸಂಸ್ಕೃತಿ ಹಾಗು ಅನ್ನದ ಭಾಷೆಯಾಗಿದೆ ಎಂದರು.
ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಶಂಕರಮ್ಮ ಚಲವಾದಿ ಮಾತನಾಡಿ, ನಾವೆಲ್ಲರೂ ಕನ್ನಡ ಬೆಳೆಸೋಣ. ಕನ್ನಡ ತಾಯಿ ಭಾಷೆ ಆಡಳಿತ ಭಾಷೆಯಾಗಿದ್ದರಿಂದ ಕನ್ನಡವೇ ಸತ್ಯ ನಿತ್ಯ ಬಳಕೆಯಾಗಲಿ ಎಂದು ಅಭಿಪ್ರಾಯಪಟ್ಟರು.ಕಸಾಪ ಪದಾಧಿಕಾರಿಗಳಾದ ಜಗದೀಶ ಬೋಳಸೂರ, ಮಹೇಶ ಕ್ಯಾತನ, ವಿಜಯಕುಮಾರ ಘಾಟಗೆ, ಡಾ.ಸುರೇಖಾ ಪಾಟೀಲ, ಸುರೇಖಾ ರಾಠೋಡ, ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಎಸ್.ಎಲ್.ಇಂಗಳೇಶ್ವರ, ಬಿ.ಎಂ.ಅಜೂರ, ಜಿ.ಎಸ್.ಬಳ್ಳೂರ, ರಾಜೇಶ್ವರಿ ಮೋಪಗಾರ, ವಿಜಯಲಕ್ಷಿ ಹಳಕಟ್ಟಿ ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))