ಸಾರಾಂಶ
ಕನ್ನಡಪ್ರಭ ವಾರ್ತೆ ತಿಪಟೂರು
ಭವ್ಯ ಭಾರತದ ಕನಸನ್ನು ಹೊತ್ತು ರಚಿಸಲಾಗಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ದಾಗ ಮಾತ್ರ ನಮ್ಮ ದೇಶದ ಕೀರ್ತಿ ಎಲ್ಲೆಡೆ ಪಸರಿಸಲಿದ್ದು, ಅದಕ್ಕೆ ಭಾರತೀಯರಾದ ನಾವೆಲ್ಲರೂ ಶ್ರಮಿಸೋಣ ಎಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ತಿಳಿಸಿದರು.ನಗರದ ಕಲ್ಪತರು ಕ್ರೀಡಾಂಗಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಡಾ.ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನ ರಚನೆಯಾಯಿತು. ಸಂವಿಧಾನವನ್ನು ಭಾರತದ ಎಲ್ಲಾ ನಾಗರಿಕರು ಅನುಸರಿಬೇಕಾದ ಮೂಲಭೂತ ನಿಯಮ ಮತ್ತು ಹಕ್ಕುಗಳ ಸ್ಥಾಪನೆಯೊಂದಿಗೆ ಅವರು ರಚಿಸಿರುವ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾದುದುದಾಗಿದೆ. ಇಲ್ಲಿ ಕಾನೂನು ಎಲ್ಲರಿಗೂ ಸರಿಸಮಾನವಾಗಿದೆ ಎಂದರು. ಇಂದು ನಮ್ಮ ದೇಶ ಶಿಕ್ಷಣ, ವಿಜ್ಞಾನ, ಮಾಹಿತಿ ತಂತ್ರಜ್ಞಾನ, ಯೋಗ, ಸಂಸ್ಕೃತಿ, ಆರೋಗ್ಯ, ಧರ್ಮ, ರಕ್ಷಣೆ, ರಾಜಕೀಯ ಕ್ಷೇತ್ರಗಳಲ್ಲಿ ಅತ್ಯದ್ಭುತ ಸಾಧನೆ ಮಾಡಿ ಜಗತ್ತೇ ನಮ್ಮ ದೇಶದ ಕಡೆಗೆ ನೋಡುತ್ತಿದೆ. ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಉತ್ತಮ ನಾಯಕನನ್ನು ಆಯ್ಕೆಮಾಡುವ ಜವಾಬ್ದಾರಿಯು ನಮ್ಮಗಳ ಮೇಲಿದೆ. ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯನು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡು, ತಪ್ಪದೇ ಮತದಾನ ಮಾಡಿ ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕು. ನಾವೆಲ್ಲ ದೇಶಕ್ಕಾಗಿ ದುಡಿದು ಹುತಾತ್ಮರನ್ನು ಸ್ಮರಿಸುತ್ತಾ ತಾರತಮ್ಯ, ಭೇದಭಾವಗಳನ್ನು ಬದಿಗಿಟ್ಟು ದೇಶವನ್ನು ಸುಭದ್ರವನ್ನಾಗಿಸಲು ಸಂಕಲ್ಪ ಮಾಡಬೇಕೆಂದರು.ಶಾಸಕ ಕೆ. ಷಡಕ್ಷರಿ ಮಾತನಾಡಿ, 1951 ಜನವರಿ 26 ರಂದು ಭಾರತ ಅಧಿಕೃತವಾಗಿ ಪ್ರಜಾಪ್ರಭುತ್ವ ಗಣರಾಜ್ಯವಾಯಿತು. ಅಂದಿನಿಂದ ಇಲ್ಲಿಯವರೆಗೆ ಪ್ರತಿ ವರ್ಷ ಜನವರಿ 26 ರಂದು ಗಣರಾಜ್ಯೋತ್ಸವವನ್ನು ಆಚರಿಸುತ್ತಾ ಬಂದಿದ್ದೇವೆ. ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಬ್ರಾತೃತ್ವದ ಆಧಾರದ ಮೇಲೆ ಪುಜಾವುಭುತ್ವ ವ್ಯವಸ್ಥೆ ಸ್ಥಾಪನೆಯಾಗಿದೆ. ಗಣರಾಜ್ಯೋತ್ಸವವು ಭಾರತಕ್ಕೆ ತನ್ನ ಪುಜಾಸತ್ತಾತ್ಮಕ ಮೌಲ್ಯಗಳು ಮತ್ತು ಸ್ವ-ಆಡಳಿತವನ್ನು ನೆನಪಿಸಲಿದ್ದು ಭಾರತದ ಸಾಂಸ್ಕೃತಿಕ ಪರಂಪರೆಯ ಆಚರಣೆಯಾಗಿದೆ.
ಈ ವರ್ಷದ ಗಣರಾಜ್ಯೋತ್ಸವದ ಕರ್ತವ್ಯ ಪಥ ಮೆರವಣಿಗೆಯಲ್ಲಿ ಕರ್ನಾಟಕ ಸೇರಿದಂತೆ ಸುಮಾರು 15 ರಾಜ್ಯಗಳ ಸಾಂಸ್ಕೃತಿಕ ಬಿತ್ತಿ ಚಿತ್ರಗಳು ಕಾಣಿಸಿಕೊಳ್ಳಲಿದ್ದು, ಇದು ನಮ್ಮ ರಾಜ್ಯಕ್ಕೆ ಹೆಮ್ಮೆಯ ಸಂಗತಿ. ಒಟ್ಟಾರೆ ದೇಶವನ್ನು ಸದೃಢವಾಗಿಸಲು ರಾಷ್ಟ್ರದ ಐಕ್ಯತೆ ಮತ್ತು ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಒಗ್ಗಟ್ಟಾಗಿ ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕೆಂದರು.ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಯುಮನಾ, ಉಪಾಧ್ಯಕ್ಷೆ ಮೇಘನಾ, ತಹಸೀಲ್ದಾರ್ ಪವನ್‌ಕುಮಾರ್, ತಾ.ಪಂ ಇಓ ಸುದರ್ಶನ್, ಡಿವೈಎಸ್‌ಪಿ ವಿನಾಯಕ ಶೆಟಗೇರಿ, ಪೌರಾಯುಕ್ತ ವಿಶ್ವೇಶ್ವರ ಬದರಗಡೆ, ಬಿಇಓ ಚಂದ್ರಯ್ಯ, ಎಪಿಎಂಸಿ ಕಾರ್ಯದರ್ಶಿ ನ್ಯಾಮನಗೌಡ, ಬೆಸ್ಕಾಂ ಎಇಇ ಮನೋಹರ್, ಕೃಷಿ ಇಲಾಖೆ ಪವನ್, ಗ್ರೇಡ್-2 ತಹಸೀಲ್ದಾರ್ ಜಗನ್ನಾಥ್, ಪ್ರಾಂಶುಪಾಲ ಎಂ.ಡಿ. ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನಗರಸಭೆ ಸದಸ್ಯರು, ಶಾಲಾ-ಕಾಲೇಜುಗಳ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಪೊಲೀಸರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ನಂತರ ಮಕ್ಕಳಿಂದ ದೇಶ ಭಕ್ತಿಗೀತೆಗಳ ಜೊತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಂವಿಧಾನದ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಪೋಡಿ ದುರಸ್ತಿಯಾದ ರೈತರಿಗೆ ಪಹಣಿ ಮತ್ತು ದುರಸ್ತಿ ದಾಖಲೆಗಳನ್ನು ವಿತರಿಸಲಾಯಿತು. ಫೋಟೋ ೨೬-ಟಿಪಿಟಿ೧ರಲ್ಲಿ ಕಳುಹಿಸಲಾಗಿದೆ. ಶೀರ್ಷಿಕೆ : ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಸಂವಿಧಾನದ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು.