ಬಾಂಗ್ಲಾ ಹಿಂದೂಗಳ ಮೇಲೆ ಮೂಲಭೂತವಾದಿಗಳ ದೌರ್ಜನ್ಯ ಖಂಡಿಸೋಣ: ಯಶ್ಪಾಲ್ ಸುವರ್ಣ

| Published : Aug 13 2024, 12:50 AM IST

ಬಾಂಗ್ಲಾ ಹಿಂದೂಗಳ ಮೇಲೆ ಮೂಲಭೂತವಾದಿಗಳ ದೌರ್ಜನ್ಯ ಖಂಡಿಸೋಣ: ಯಶ್ಪಾಲ್ ಸುವರ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ, ಹಿಂದೂ ಧರ್ಮೀಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಾ ಹಿಂದೂ ವಿರೋಧಿ ನೀತಿ ನಡೆಸುತ್ತಿರುವ ಮತಾಂಧ ಶಕ್ತಿಗಳ ವಿರುದ್ಧ ಬಾಂಗ್ಲಾ ಸರ್ಕಾರ ತಕ್ಷಣ ಕಠಿಣ ಕ್ರಮಕೈಗೊಂಡು ಹಿಂದೂಗಳ ರಕ್ಷಣೆಗೆ ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಯಶ್ಪಾಲ್‌ ಸುವರ್ಣ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮುಸ್ಲಿಂ ಮತೀಯವಾದಿಗಳು ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ರಾಷ್ಟೀಯವಾದಿ ಭಾರತೀಯರು ಒಕ್ಕೊರಲಿನಿಂದ ಖಂಡಿಸುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.ಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ, ಹಿಂದೂ ಧರ್ಮೀಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಾ ಹಿಂದೂ ವಿರೋಧಿ ನೀತಿ ನಡೆಸುತ್ತಿರುವ ಮತಾಂಧ ಶಕ್ತಿಗಳ ವಿರುದ್ಧ ಬಾಂಗ್ಲಾ ಸರ್ಕಾರ ತಕ್ಷಣ ಕಠಿಣ ಕ್ರಮಕೈಗೊಂಡು ಹಿಂದೂಗಳ ರಕ್ಷಣೆಗೆ ಕಾರ್ಯಪ್ರವೃತ್ತರಾಗಬೇಕು.ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಚಿಕ್ಕ ಘಟನೆ ನಡೆದ ಕೂಡಲೇ ಬೀದಿಗಿಳಿಯುವ ಎಡಪಂಥೀಯ, ಜಾತ್ಯತೀತ ಮುಖವಾಡ ತೊಟ್ಟ ಬುದ್ಧಿಜೀವಿಗಳು, ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಚಕಾರ ಎತ್ತುತ್ತಿಲ್ಲ. ಹಿಂದೂಗಳ ಮೇಲಿನ ದಾಳಿಯ ಬಗ್ಗೆ ದಿವ್ಯ ಮೌನ ವಹಿಸುವ ಮೂಲಕ ಪ್ರಗತಿಪರರು, ಐಸಿಸ್ ಮನಸ್ಥಿತಿಯ ಮತೀಯ ಶಕ್ತಿಗಳಿಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂದವರು ಆಸಮಾಧಾನ ವ್ಯಕ್ತಪಡಿಸಿದ್ದಾರೆ.ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಈಗಾಗಲೇ ಕಾರ್ಯಪ್ರವೃತ್ತವಾಗಿದ್ದು, ಹಿಂದೂಗಳ ವಿರುದ್ಧ ದಾಳಿ ಮಾಡುತ್ತಿರುವ ಮತೀಯ ಶಕ್ತಿಗಳಿಗೆ ತಕ್ಕ ಉತ್ತರ ನೀಡಬೇಕಾದ ಅನಿವಾರ್ಯ ಸನ್ನಿವೇಶ ನಿರ್ಮಾಣವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.