ನಾಡಪ್ರಭು ಕೆಂಪೇಗೌಡರು ಒಕ್ಕಲಿಗರಾಗಿ ಹುಟ್ಟಿದರೂ ಸರ್ವ ಜನಾಂಗದ ಸೇವೆ ಮಾಡುವ ಮೂಲಕ ವಿಶ್ವಮಾನವರಾಗಿ ಸೇವೆ ಸಲ್ಲಿಸಿದರು. ಅವರನ್ನು ಒಂದು ಜಾತಿಗೆ ಸೀಮಿತಗೊಳಿಸದೆ ಅವರು ಹಾಕಿಕೊಟ್ಟ ಹಾದಿಯಲ್ಲಿ ಕೆಲಸ ಮಾಡಿ ತೋರಿಸಬೇಕು. ಆಗ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಕೆಂಗೇರಿನಾಡಪ್ರಭು ಕೆಂಪೇಗೌಡರು ಒಕ್ಕಲಿಗರಾಗಿ ಹುಟ್ಟಿದರೂ ಸರ್ವ ಜನಾಂಗದ ಸೇವೆ ಮಾಡುವ ಮೂಲಕ ವಿಶ್ವಮಾನವರಾಗಿ ಸೇವೆ ಸಲ್ಲಿಸಿದರು. ಅವರನ್ನು ಒಂದು ಜಾತಿಗೆ ಸೀಮಿತಗೊಳಿಸದೆ ಅವರು ಹಾಕಿಕೊಟ್ಟ ಹಾದಿಯಲ್ಲಿ ಕೆಲಸ ಮಾಡಿ ತೋರಿಸಬೇಕು. ಆಗ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.ನಾಡಪ್ರಭು ಕೆಂಪೇಗೌಡ ಸೇವಾ ಟ್ರಸ್ಟ್‌ನಿಂದ ಲಗ್ಗೆರೆಯ ಹೊರವರ್ತುಲ ರಸ್ತೆ ಬಳಿ ನಿರ್ಮಿಸಿರುವ ನಾಡಪ್ರಭು ಕೆಂಪೇಗೌಡರ ಕೋಟೆ, ಕಂಚಿನ ಪುತ್ಥಳಿ, ಕಾವೇರಿ ಮಾತೆ ಪುತ್ಥಳಿ ಲೋಕಾರ್ಪಣೆ ಹಾಗೂ ಕೆಂಪೇಗೌಡ ಭವನದ ಶಂಕುಸ್ಥಾಪನೆಯನ್ನು ಶುಕ್ರವಾರ ನೆರವೇರಿಸಿ ಅವರು ಮಾತನಾಡಿದರು.

ಆದಿಚುಂಚನಗಿರಿ ಮಠ ಸೇರಿದಂತೆ ಹಿಂದುಳಿದ ವೀರಶೈವ ಸಮಾಜದ ಹಲವಾರು ಮಠಗಳು, ಶಿಕ್ಷಣ, ಅಭಿವೃದ್ದಿ, ಜ್ಞಾನ, ಗ್ರಾಮೀಣ ಜನರ ಬದುಕನ್ನು ಕಟ್ಟಿಕೊಳ್ಳಲು ಸಹಾಯ ಮಾಡುತ್ತಿವೆ. ಬೇರೆ ನಗರಗಳು, ಊರುಗಳಿಂದ ಜನರು ಬೆಂಗಳೂರಿಗೆ ವಲಸೆ ಬರುವುದನ್ನು ತಪ್ಪಿಸಿ ಸ್ಥಳೀಯವಾಗಿ ಉದ್ಯೋಗವಕಾಶ ಒದಗಿಸುವ ಕೆಲಸವನ್ನು ಮಠಗಳು ಹಾಗೂ ನಮ್ಮ ಸರ್ಕಾರ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಹೇಳಿದರು.ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗಾಗಿ 440 ಕೋಟಿ ರು.ಅನುದಾನ ನೀಡಲಾಗಿದೆ. ಹಂತ ಹಂತವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆರ್.ಆರ್. ನಗರ ಕ್ಷೇತ್ರಕ್ಕೆ ಕುಸುಮಾ ಅವರನ್ನು ಶಾಸಕಿಯನ್ನಾಗಿ ಆಯ್ಕೆ ಮಾಡಲು ಜನರು ಸಹಕರಿಸಬೇಕು ಎಂದು ಡಿ.ಕೆ. ಶಿವಕುಮಾರ್‌ ಕರೆ ನೀಡಿದರು.ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, 500 ವರ್ಷಗಳ ಹಿಂದೆ ಕೆಂಪೇಗೌಡರು ಬೆಂಗಳೂರು ನಿರ್ಮಿಸಿದ್ದರಿಂದ ನಾವೆಲ್ಲರೂ ನೆಮ್ಮದಿಯಿಂದ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗಿದೆ.ಎಚ್‌.ಡಿ.ದೇವೇಗೌಡ, ಎಸ್‌.ಎಂ.ಕೃಷ್ಣ, ಕೆಂಗಲ್‌ ಹನುಮಂತಯ್ಯ ಅಂತವರ ದೂರದೃಷ್ಟಿಯಿಂದ ವಿಶ್ವವು ಬೆಂಗಳೂರು ಕಡೆ ಮುಖ ಮಾಡುವಂತಾಗಿದೆ ಎಂದರು.

ಕೆಪಿಸಿಸಿ ವಕ್ತಾರೆ ಎಚ್‌.ಕುಸುಮಾ, ಟ್ರಸ್ಟ್‌ನ ಅಧ್ಯಕ್ಷ ಎಚ್‌.ಎಸ್‌.ಸಿದ್ದೇಗೌಡ, ನಾಡಪ್ರಭು ಕೆಂಪೇಗೌಡರ ಸೇವಾ ಟ್ರಸ್ಟ್‌ ಗೌರವಾಧ್ಯಕ್ಷ ಅಂದಾನಪ್ಪ, ಸ್ಪಟಿಕಪುರಿ ಮಠದ ನಂಜಾವಧೂತ ಸ್ವಾಮೀಜಿ, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹನುಮಂತರಾಯಪ್ಪ ಇದ್ದರು.